16 C
Bangalore
Saturday, December 7, 2019

ತಿಹಾರ್​ ಜೈಲಿಗೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್​ ಸ್ಥಳಾಂತರ; ಇಂದು ಮಧ್ಯಾಹ್ನ ಜಾಮೀನು ಅರ್ಜಿ ವಿಚಾರಣೆ

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ಬೆಂಗಳೂರು/ನವದೆಹಲಿ: ಕೋಟ್ಯಂತರ ರೂಪಾಯಿ ಅಕ್ರಮ ಹಣ ವಹಿವಾಟಿನ ಆರೋಪದ ಮೇಲೆ ಜಾರಿ ನಿರ್ದೇಶನಾಲಯ(ಇ.ಡಿ.) ಅಧಿಕಾರಿಗಳಿಂದ ಬಂಧಿತರಾಗಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಬಿಗಿ ಪೊಲೀಸ್​ ಬಂದೋಬಸ್ತ್​ ಮೂಲಕ ಗುರುವಾರ ತಿಹಾರ್​ ಜೈಲಿಗೆ ಸ್ಥಳಾಂತರಿಸಲಾಯಿತು.

ಇ.ಡಿ. ಕಸ್ಟಡಿ ಅಂತ್ಯಗೊಂಡಿರುವುದರಿಂದ ಇ.ಡಿ. ವಿಶೇಷ ನ್ಯಾಯಾಲಯ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಅ.1ರ ತನಕ ಶಿವಕುಮಾರ್ ನ್ಯಾಯಾಂಗ ಬಂಧನಲ್ಲಿರಬೇಕು ಎಂದು ಇ.ಡಿ. ವಿಶೇಷ ನ್ಯಾಯಾಧೀಶ ಅಜಯ್ ಕುಮಾರ್ ಕುಹರ್ ಆದೇಶ ಪ್ರಕಟಿಸಿದ್ದರು. ಆದರೆ, ಡಿಕೆಶಿ ಆರೋಗ್ಯದಲ್ಲಿ ಏರುಪೇರು ಉಂಟಾದ್ದರಿಂದ ಅವರಿಗೆ ದೆಹಲಿಯ ರಾಮ್​ ಮನೋಹರ್​ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಆರೋಗ್ಯ ಸ್ಥಿರವಾದ ಹಿನ್ನೆಲೆಯಲ್ಲಿ ಡಿಕೆಶಿ ಅವರನ್ನು ಪೊಲೀಸ್​ ಬಿಗಿ ಬಂದೋಬಸ್ತ್​ ಮೂಲಕ ಆಸ್ಪತ್ರೆಯಿಂದ ತಿಹಾರ್​ ಜೈಲಿಗೆ ಸ್ಥಳಾಂತರ ಮಾಡಲಾಯಿತು.

ಸೆಲ್​ ನಂ 7ರಲ್ಲಿ ಕನಕಪುರ ಬಂಡೆ
ತಿಹಾರ್ ಜೈಲಿನ ಸೆಲ್ ನಂ-7ರಲ್ಲಿ ಡಿಕೆಶಿ ಅವರನ್ನು ಬಂಧನಲ್ಲಿ ಇಡಲಾಗಿದೆ ಎಂದು ಹೇಳಲಾಗಿದೆ. ಮಾಜಿ ವಿತ್ತ ಸಚಿವ ಚಿದಂಬರಂ ಇರುವ ಕೊಠಡಿಯ ಪಕ್ಕದಲ್ಲೇ ಡಿಕೆಶಿಯನ್ನು ಇರಿಸಲಾಗಿದೆ. ಅಕ್ಟೋಬರ್ 1ರ ವರೆಗೂ ತಿಹಾರ್ ಜೈಲಿನಲ್ಲಿ ಡಿಕೆಶಿ ಕಾಲಕಳೆಯಬೇಕಾಗಿದೆ.

ಅಕ್ರಮ ಹಣ ಪತ್ತೆ ಹಿನ್ನೆಲೆಯಲ್ಲಿ ಡಿಕೆಶಿ ಅವರನ್ನು ಬಂಧಿಸಿದ ಬಳಿಕ ವಿಚಾರಣೆಗೆಂದೆ 10 ದಿನ ಡಿಕೆಶಿ ಅವರನ್ನು ಇ.ಡಿ. ಅಧಿಕಾರಿಗಳ ವಶಕ್ಕೆ ಇ.ಡಿ. ವಿಶೇಷ ನ್ಯಾಯಾಲಯ ನೀಡಿತ್ತು. ಅದಾದ ಬಳಿಕ ಇನ್ನೂ 4 ದಿನ ಇಡಿ ಕಸ್ಟಡಿಗೆ ನೀಡಬೇಕು ಎಂದು ಜಾರಿ ನಿರ್ದೇಶನಾಲಯದ ವಕೀಲರು ನ್ಯಾಯಾಲಯದ ಎದುರು ಮನವಿ ಮಾಡಿದ್ದರು. ಇದಕ್ಕೆ ಒಪ್ಪಿದ್ದ ನ್ಯಾಯಾಲಯ ಸೆ. 13ರಂದು ಮತ್ತೆ ನಾಲ್ಕು ದಿನ ಅಂದರೆ ಸೆಪ್ಟೆಂಬರ್‌ 17ರ ವರೆಗೆ ನ್ಯಾಯಾಲಯ ಇ.ಡಿ. ಕಸ್ಟಡಿಗೆ ನೀಡಿ ಆದೇಶಿಸಿತ್ತು.

ಆರೋಗ್ಯ ಹದಗೆಟ್ಟಿದ್ದರಿಂದಾಗಿ ಇ.ಡಿ. ಕಸ್ಟಡಿಯಲ್ಲೇ ಡಿಕೆಶಿಗೆ ವೈದ್ಯಕೀಯ ಚಿಕಿತ್ಸೆ ನೀಡುವಂತೆ ತನಿಖಾಧಿಕಾರಿಗಳಿಗೆ ನ್ಯಾಯಾಲಯ ಸೂಚನೆ ನೀಡಿತ್ತು. ಅಲ್ಲದೆ, ಮೊದಲು ಡಿಕೆಶಿ ಆರೋಗ್ಯಕ್ಕೆ ಆದ್ಯತೆ ನೀಡಿ, ಅನಂತರ ನಿಮ್ಮ ವಿಚಾರಣೆ ನಡೆಸಿ ಎಂದು ಕೋರ್ಟ್​ ತಿಳಿಸಿ, ಜಾಮೀನು ಕುರಿತಾದ ಅರ್ಜಿಯ ಆದೇಶವನ್ನು ಕಾಯ್ದಿರಿಸಿತ್ತು.

ಬುಧವಾರ ಜಾರಿ ನಿರ್ದೇಶನಾಲಯದ ಪರ ವಕೀಲ ನಟರಾಜ್​ ಅವರು ವಿಚಾರಣೆಗೆ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಇ.ಡಿ. ವಿಶೇಷ ಕೋರ್ಟ್​ ನ್ಯಾಯಾಧೀಶರು ಜಾಮೀನು ಅರ್ಜಿ ವಿಚಾರಣೆಯನ್ನು ಗುರುವಾರ ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ. (ದಿಗ್ವಿಜಯ ನ್ಯೂಸ್​)

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...