ಹಿಂದೂ ಧರ್ಮ ಬಿಜೆಪಿಯವರ ಮನೆ ಆಸ್ತಿಯೇ: ಡಿ.ಕೆ. ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ನಡೆಸುತ್ತಿರುವ ಭಾರತ್​ ಜೋಡೋ ನ್ಯಾಯ್​ ಯಾತ್ರೆಯನ್ನು ಅಸ್ಸಾಂನ ಗುವಾಹಟಿಯಲ್ಲಿ ತಡೆದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​, ಬಿಜೆಪಿಯ ಗೂಂಡಾಗಳು ಒಂದು ಕೈಯಲ್ಲಿ ಮಂತ್ರಾಕ್ಷತೆ ಹಿಡಿದರೆ ಮತ್ತೊಂದು ಕೈಯಲ್ಲಿ ದೊಣ್ಣೆ ಹಿಡಿದಿರುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು ನಗರದ ಫ್ರೀಡಂ ಪಾರ್ಕಿನಲ್ಲಿ ಕಾಂಗ್ರೆಸ್​ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಡಿ.ಕೆ. ಶಿವಕುಮಾರ್, ಬಿಜೆಪಿಯವರು ಧರ್ಮದ ವಿಚಾರವಾಗಿ ರಾಜಕಾರಣ ಮಾಡುತ್ತಿರುವುದಾಗಿ ಆರೋಪಿಸಿದ್ದಾರೆ. ಬಿಜೆಪಿಯವರು ಒಂದು ಕೈಯಲ್ಲಿ ಮಂತ್ರಾಕ್ಷತೆ ಹಿಡಿದರೆ, … Continue reading ಹಿಂದೂ ಧರ್ಮ ಬಿಜೆಪಿಯವರ ಮನೆ ಆಸ್ತಿಯೇ: ಡಿ.ಕೆ. ಶಿವಕುಮಾರ್