More

    ಬೆಂಗಳೂರು ಜಲಕ್ಷಾಮ; ರಾಜ್ಯಕ್ಕೆ ಬಿಜೆಪಿಯವರು ಕೆಟ್ಟ ಹೆಸರು ತರಲು ಪ್ರಯತ್ನಿಸುತ್ತಿದ್ದಾರೆ: ಡಿ.ಕೆ. ಶಿವಕುಮಾರ್

    ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಜಲಕ್ಷಾಮ ಹೆಚ್ಚುತ್ತಿದ್ದು, ಸರ್ಕಾರ ಪರ್ಯಾಯ ವ್ಯವಸ್ಥೆಯಲ್ಲಿ ನಿರತವಾಗಿದೆ. ಇದರ ಬೆನ್ನಲ್ಲೇ ಸರ್ಕಾರ ತಮಿಳುನಾಡಿಗೆ ನೀರು ಬಿಡುತ್ತಿದೆ ಎಂದು ಬಿಜೆಪಿ ಸುಳ್ಳು ಆರೋಪ ಮಾಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಕಿಡಿಕಾರಿದ್ದಾರೆ.

    ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಬರ ಮತ್ತು ನೀರಿನ ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ ಪರಿಹಾರ ಕಂಡುಕೊಂಡಿರುವುದಕ್ಕೆ ಬಿಜೆಪಿ ಅಸೂಯೆ ಪಡುತ್ತಿದೆ ಎಂದು ಆರೋಪಿಸಿದ್ದಾರೆ.

    ಬಿಜೆಪಿ ಪಕ್ಷಕ್ಕೆ ಬೇರೆ ಕೆಲಸವಿಲ್ಲ. ಇದು ಕೇವಲ ರಾಜಕೀಯ ಆಟವಾಗಿದೆ. ಬರ ಮತ್ತು ನೀರಿನ ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ ಪರಿಹಾರ ಕಂಡುಕೊಂಡಿರುವುದಕ್ಕೆ ಬಿಜೆಪಿ ಅಸೂಯೆ ಪಡುತ್ತಿದೆ. ನ್ಯಾಯಾಲಯದ ಆದೇಶ ನಮ್ಮ ವಿರುದ್ಧ ಬಂದಾಗಲೂ ಕಾವೇರಿ ನೀರು ನಿರ್ವಹಣೆಗೆ ಸಂಬಂಧಿಸಿದಂತೆ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲಾಗಿದೆ. ಇದನ್ನು ಸಹಿಸದ ಬಿಜೆಪಿಯವರು ಕೆಟ್ಟ ಹೆಸರು ತರಲು ಪ್ರಯತ್ನಿಸುತ್ತಿದ್ದಾರೆ.

    ಇದನ್ನೂ ಓದಿ: ಬಿಗ್​ಬಾಸ್​, ಗಿಚ್ಚಿ ಗಿಲಿಗಿಲಿ ಸ್ಪರ್ಧಿ ತುಕಾಲಿ ಸಂತೋಷ್​ ಕಾರು ಅಪಘಾತ; ಓರ್ವನಿಗೆ ಗಾಯ

    ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿದ್ದೇವೆ. ನಗರದಲ್ಲಿ 7,000 ಬೋರ್‌ವೆಲ್‌ಗಳು ಬತ್ತಿ ಹೋಗಿದ್ದರೂ, ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಅಧಿಕಾರಿಗಳು ತಮ್ಮ ಕೈಲಾದ ಕೆಲಸ ಮಾಡುತ್ತಿದ್ದಾರೆ. ನಾವು ನೀರಿನ ಮೂಲಗಳನ್ನು ಗುರುತಿಸಿದ್ದೇವೆ ಮತ್ತು ಏನು ಮಾಡಬೇಕೋ ಅದನ್ನು ಮಾಡಲಾಗುತ್ತಿದೆ. ಬಿಜೆಪಿ ಕೇವಲ ಬೊಗಳೆ ಬಿಡುತ್ತಿದೆ.

    ನಮ್ಮ ರೈತರೂ ನೀರು ಕೇಳಿಲ್ಲ. ರೈತರಿಗೆ ಕೊಡಬೇಕಾಗಿದ್ದ ನೀರನ್ನು ಈಗ ಯಾರಿಗೂ ಬಿಡುತ್ತಿಲ್ಲ. ಬೆಂಗಳೂರು ನಗರಕ್ಕೆ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಮೇಕೆದಾಟು ಪಾದಯಾತ್ರೆ ಕೈಗೊಂಡಿದ್ದೆ. ಮೇಕೆದಾಟು ಆಣೆಕಟ್ಟು ನಿರ್ಮಾಣಕ್ಕೆ ಅನುಮತಿ ನೀಡಬೇಕು ಎಂದು ನಾನು ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿನಂತಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts