More

    ಹೆಚ್ಚಿನ ಅನುದಾನಕ್ಕಾಗಿ ಪ್ರತಿಭಟನೆ; ನಮ್ಮಲ್ಲಿ ಬಿಜೆಪಿ ತರಹ ಸಿನಿಮಾ ನಿರ್ದೇಶಕರು, ನಿರ್ಮಾಪಕರು ಇಲ್ಲ: ಡಿ.ಕೆ. ಶಿವಕುಮಾರ್

    ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಇಲ್ಲವಾಗಿದೆ. ನಮ್ಮ ರಾಜ್ಯಕ್ಕೆ ಆಗಿರುವ ಅನ್ಯಾಯ ಕೇಂದ್ರ ಸರ್ಕಾರದ ಕಿವಿಗೆ ಬೀಳಲಿ ಎಂದು ದೆಹಲಿಗೆ ಬಂದು ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

    ಅನುದಾನ ತಾರತಮ್ಯ ಖಂಡಿಸಿ ದೆಹಲಿಯ ಜಂತರ್​ಮಂತರ್​ ರಾಜ್ಯ ಕಾಂಗ್ರೆಸ್​ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಡಿ.ಕೆ. ಶಿವಕುಮಾರ್​, ಬಿಜೆಪಿಗರು ಅನ್ಯಾಯದ ಬಗ್ಗೆ ಹೇಳಿದ್ದರೂ ಕಿವಿಗೆ ಹಾಕಿಕೊಂಡಿಲ್ಲ. ಹೀಗಾಗಿ ಹೋರಾಟ ಅನಿವಾರ್ಯ ಎಂದಿದ್ದಾರೆ.

    ನಮ್ಮ ಕೂಗು ಕೇಂದ್ರ ಸರ್ಕಾರದ ಕಿವಿಗೆ ಬೀಳಲಿ ಎಂದು ದೆಹಲಿಗೆ ಬಂದು ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಇಲ್ಲವಾಗಿದೆ. ನಮ್ಮ ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಹೇಳಿದ್ದರೂ ಇವರು ಕಿವಿಗೆ ಹಾಕಿಕೊಂಡಿಲ್ಲ. ಹೀಗಾಗಿ ಹೋರಾಟ ಅನಿವಾರ್ಯವಾಗಿದೆ.

    ಇದನ್ನೂ ಓದಿ: ಪ್ರೀತಿಸಿ ಮದುವೆಯಾದ ಮೂರೇ ದಿನಕ್ಕೆ ತಾಳಿ ಬಿಚ್ಚಿಟ್ಟು ಹೋದ ಪತ್ನಿ; ಪ್ರಾಣ ಕಳೆದುಕೊಂಡ ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ

    ಬಿಜೆಪಿಯವರು ನಮ್ಮ ಹೋರಾಟದ ಬಗ್ಗೆ ಏನಾದರೂ ಹೇಳಲಿ. ನಮ್ಮಲ್ಲಿ ಯಾರೂ ಸಿನಿಮಾ ನಿರ್ದೇಶಕರು, ನಿರ್ಮಾಪಕರು ಇಲ್ಲ. ಅವರ ಪಕ್ಷದಲ್ಲೇ ನಿರ್ದೇಶಕರು, ನಿರ್ಮಾಪಕರು ಇದ್ದಾರೆ. ಅವರು ಭಾವನೆ ಮೇಲೆ ದೇಶ ತೆಗೆದುಕೊಂಡು ಹೋದರೆ, ನಾವು ಜನರ ಬದುಕಿನ ಬಗ್ಗೆ ಗಮನ ಹರಿಸುತ್ತಿದ್ದೇವೆ. ನಮ್ಮ ಗ್ಯಾರಂಟಿ ಬಗ್ಗೆ ಮಾತನಾಡುತ್ತಿದ್ದವರು ಬೇರೆ ರಾಜ್ಯಗಳಲ್ಲಿ ಅವರೇ ಗ್ಯಾರಂಟಿ ಘೋಷಣೆ ಮಾಡಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ.

    ಗ್ಯಾರಂಟಿ ಯೋಜನೆಯಿಂದ ಹಣ ಖಾಲಿ ಮಾಡಿಕೊಂಡು ದೆಹಲಿಗೆ ಬಂದಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿ, ನಮ್ಮ ಹಣ ಖಾಲಿಯಾಗಿಲ್ಲ. ಸರ್ಕಾರ ನಡೆಸುವ ಸಾಮರ್ಥ್ಯ ನಮಗಿದೆ. ಕೇಂದ್ರ ಬಿಜೆಪಿ ಸರ್ಕಾರ ನಮ್ಮ ಪಾಲಿನ ಹಣ ನೀಡಲಿ ಸಾಕು. ನಮ್ಮ ಇಲಾಖೆ ವಿಚಾರವಾಗಿ ಮಾತನಾಡಲು ನಾವು ಪ್ರಧಾನಮಂತ್ರಿಗಳ ಬಳಿ ಸಮಯ ಕೇಳಿದ್ದೇವೆ. ಭೇಟಿಗೆ ಸಮಯ ನೀಡಬಹುದು ಎನ್ನುವ ವಿಶ್ವಾಸ ಇದೆ ಎಂದು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts