More

    ರಾಹುಲ್​​ ಗಾಂಧಿ ಅವರ ವಿರುದ್ಧದ ಬಿಜೆಪಿ ಷಡ್ಯಂತ್ರವನ್ನು ಖಂಡಿಸುತ್ತೇವೆ: ಡಿ.ಕೆ. ಶಿವಕುಮಾರ್​​

    ಬೆಂಗಳೂರು: ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ರೂಪಿಸಿರುವ ಷಡ್ಯಂತ್ರವನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ.

    ಇದನ್ನೂ ಓದಿ: ನಾಯಿಗಳ ದಾಳಿಗೆ ಜಿಂಕೆ ಸಾವು: ಅರಣ್ಯ ಸಿಬ್ಬಂದಿ ಫೈರಿಂಗ್‌ಗೆ ನಾಲ್ಕು ಶ್ವಾನಗಳು ಬಲಿ

    “ರಾಹುಲ್ ಗಾಂಧಿ ಅವರು ರಾಜ್ಯದಲ್ಲಿ ಮಾಡಿದ ಭಾಷಣವನ್ನು ಮುಂದಿಟ್ಟುಕೊಂಡು ರಾಜಕೀಯವಾಗಿ ಅವರನ್ನು ಮುಗಿಸುವ ಷಡ್ಯಂತ್ರ ನಡೆಯುತ್ತಿದ್ದು, ಅದನ್ನು ಖಂಡಿಸುತ್ತೇವೆ. ದೇಶದ ಪರವಾಗಿ, ಸತ್ಯದ ಪರವಾಗಿ ಧ್ವನಿ ಎತ್ತುತ್ತಿರುವ ರಾಹುಲ್​ ಅವರ ಪರವಾಗಿ ಇಡೀ ದೇಶ ಹಾಗೂ ವಿರೋಧ ಪಕ್ಷಗಳು ನಿಲ್ಲುವ ಸಂದೇಶ ರವಾನಿಸಬೇಕಾಗಿದೆ” ಎಂದು ಹೇಳಿದ್ದಾರೆ.

    “ಭಾರತ ಜೋಡೋ ಯಾತ್ರೆಯಲ್ಲಿ ಅವರಿಗೆ ಜನರಿಂದ ಸಿಕ್ಕ ಪ್ರೀತಿ ವಿಶ್ವಾಸ, ಕರ್ನಾಟಕ ರಾಜ್ಯದಲ್ಲಿ ಅವರಿಗೆ ಸಿಕ್ಕ ಭವ್ಯ ಯಶಸ್ಸು ಸಹಿಸಲಾಗದೆ ರಾತ್ರೋರಾತ್ರಿ ಅವರ ಸಂಸತ್ ಸದಸ್ಯತ್ವವನ್ನು ಅನರ್ಹಗೊಳಿಸಲಾಗಿದೆ. ರಾಹುಲ್ ಗಾಂಧಿ ಅವರ ರಾಜಕೀಯ ಜೀವನ ಮುಗಿಸಲು ಬಿಜೆಪಿ ನಡೆಸುತ್ತಿರುವ ಷಡ್ಯಂತ್ರವನ್ನು ಖಂಡಿಸಿ ಜುಲೈ 12 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೂ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮೌನ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ” ಎಂದು ಹೇಳಿದ್ದಾರೆ.

    ಹಂಪಿಯಲ್ಲಿ ಜಿ 20 ಶೃಂಗಸಭೆ: ಲಂಬಾಣಿ ಕಸೂತಿ ಕಲೆಗೆ ಗಿನ್ನೆಸ್ ರೆಕಾರ್ಡ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts