More

    ದೆಹಲಿಯಲ್ಲಿ ಕಾಂಗ್ರೆಸ್​ ನಾಯಕರ ಸಭೆ; ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪುತ್ತಿದೆಯೇ ಎಂಬುದರ ಬಗ್ಗೆ ಚರ್ಚಿಸಲಿದ್ದೇವೆ: ಡಿಸಿಎಂ

    ಬೆಂಗಳೂರು: ನಾಳೆ (02 ಆಗಸ್ಟ್​​) ರಂದು ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ ಹಿನ್ನಲೆ ಡಿಸಿಎಂ ಡಿ.ಕೆ. ಶಿವಕುಮಾರ್​ ಇದೀಗ ನವದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ಈ ಬಗ್ಗೆ ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಪಕ್ಷದ ಬಗ್ಗೆ ಮತ್ತು ನಮ್ಮ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪುತ್ತಿದೆಯೇ ಎಂಬುದರ ಬಗ್ಗೆ ಚರ್ಚಿಸಲು ಹೊರಟಿದ್ದೇನೆ ಎಂದು ಹೇಳಿದರು.

    ಇದನ್ನೂ ಓದಿ: ಏಕರೂಪ ನಾಗರಿಕ ಸಂಹಿತೆಯಿಂದ ಕಂದಕ ಒಪ್ಪಲಾಗದು -ಸಿದ್ದನಗೌಡ ಪಾಟೀಲ್ -ದಲಿತ ಮುಸ್ಲಿಂ ಮಹಿಳಾ ಸಮಾವೇಶ 

    ಈ ಬಗ್ಗೆ ಮಾತನಾಡಿದ ಡಿಸಿಎಂ, “ಪಕ್ಷದ ಕೆಲಸ ಮತ್ತು ಸರ್ಕಾರದ ಕೆಲಸದ ಹಿನ್ನಲೆ ಇಂದು ದೆಹಲಿಗೆ ತೆರಳುತ್ತಿದ್ದೇನೆ. ಲೋಕಸಭೆ ಪಕ್ಷದ ಹಿತದೃಷ್ಟಿಯಿಂದ ಹೋಗುತ್ತಿದ್ದೇನೆ. ಚುನಾವಣೆ ದೃಷ್ಟಿಯಿಂದಲೇ ಈ ಸಭೆ ನಡೆಯುತ್ತಿದೆ. ನಮ್ಮ ಗ್ಯಾರಂಟಿ ಯೋಜನೆ ಜನರಿಗೆ ತಲುಪುತ್ತಿದೆಯಾ? ಇದರ ಬಗ್ಗೆ ಚರ್ಚೆ ಮಾಡುತ್ತೇವೆ” ಎಂದು ಹೇಳಿದರು.

    “ದೆಹಲಿ ಸಭೆಗೆ ಹಿರಿಯ ನಾಯಕರು, ಶಾಸಕರು ಸೇರಿದಂತೆ ಸಂಸದರನ್ನೂ ಸಹ ಸಭೆಗೆ ಆಹ್ವಾನಿಸಿದ್ದೇವೆ. ಮೂರು ಹಂತದಲ್ಲಿ ಚರ್ಚೆ ನಡೆಯಲಿದೆ. ಸಭೆಯಲ್ಲಿ ಎಲ್ಲವೂ ನಿರ್ಧಾರವಾಗಲಿದೆ” ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

    ನಟ ಧನುಷ್​ ಮುಂದಿನ ಚಿತ್ರಕ್ಕೆ ಇವರೇ ನಾಯಕಿ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts