More

    ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ‌ ಎನ್ನುತ್ತಲೇ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ ಡಿಕೆಶಿ!

    ತುಮಕೂರು: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಸ್ಪಷ್ಟ ಬಹುಮತದ ಗೆಲುವ ಕಾಣುತ್ತಿದ್ದಂತೆ, ಸರ್ಕಾರ ರಚನೆಯ ಬಗ್ಗೆ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಈ ನಡುವೆ ಕೆಪಿಸಿಸಿ ಅಧ್ಯಕ್ಷ, ಈ ಬಾರಿ ಕಾಂಗ್ರೆಸ್​ನಿಂದ ಸಿಎಂ ರೇಸ್​ನಲ್ಲಿರುವ ಮುಂಚೂಣಿ ನಾಯಕ ಡಿ.ಕೆ.ಶಿವಕುಮಾರ್ ನೊಣವಿನಕೆರೆ ಕಾಡುಸಿದೇಶ್ವರ ಮಠಕ್ಕೆ ಭೇಟಿ ನೀಡಿ, ಆಶೀರ್ವಾದ ಪಡೆದುಕೊಂಡಿದ್ದಾರೆ.

    ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಕಾಡುಸಿದೇಶ್ವರ ಮಠ ನನಗೆ ಪುಣ್ಯದ ದೈವ ಕ್ಷೇತ್ರ. ಪ್ರತಿಯೊಂದು ಸಂಧರ್ಭದಲ್ಲಿ ಕೂಡ ಗಂಗಾಧರ ಅಜ್ಜ, ಇಲ್ಲಿಯ ಸ್ವಾಮೀಜಿ ನನಗೆ ಮಾರ್ಗದರ್ಶನ ಮಾಡಿದ್ದಾರೆ. ನಾನು ಅಧಿಕಾರ ತೆಗೆದುಕೊಂಡಾಗಿನಿಂದಲೂ, ಯಾರಿಗೆ ಟಿಕೆಟ್ ಕೊಡಬೇಕು, ಯಾರಿಗೆ ಕೊಡಬಾರದು ಎನ್ನುವುದನ್ನು ಇಲ್ಲೇ ಮಾರ್ಗದರ್ಶನ ಪಡೆದು ನಿರ್ಧಾರ ಮಾಡಿದ್ದೇನೆ ಎಂದು ಹೇಳಿದರು.

    ಇದನ್ನೂ ಓದಿ: VIDEO | ಕರ್ನಾಟಕದಲ್ಲಿ ಸ್ಪಷ್ಟ ಬಹುಮತ; ಹನುಮಾನ್ ಚಾಲೀಸಾ ಪಠಿಸಿದ ಕಾಂಗ್ರೆಸ್ ನಾಯಕರು

    ಹಲವಾರು ಸಂದರ್ಭಗಳಲ್ಲಿ ಇಲ್ಲಿನ ಅಜ್ಜಯ್ಯನವರು ನನಗೆ ಮಾನಸಿಕವಾಗಿ ಧೈರ್ಯ ನೀಡಿದ್ದಾರೆ. ಹೆಲಿಕಾಪ್ಟರ್ ದುರಂತ ಆದ ನಂತರ ಮಗಳು ಇಲ್ಲಿಗೆ ಬಂದು ಹೋದಳು. ಈ ಚುನಾವಣೆಯಲ್ಲಿ ನಾನು 134 ಸೀಟು ಗೆಲ್ಲಬೇಕು, ಯಾರ ಹಂಗಿನಲ್ಲೂ ಅಧಿಕಾರ ನಡೆಸಬಾರದು ಎಂದು ಬೇಡಿಕೊಂಡಿದೆ ಎಂದು ಬಹಿರಂಗ ಪಡಿಸಿದರು.

    ಡಿಕೆಶಿ ಮಾತನಾಡುತ್ತಾ, ನಾನು ಅಧಿಕಾರ ಹಿಡಿದಾಗಲೇ, ಹೆಣ್ಣು ಮಕ್ಕಳ ಬಗ್ಗೆ ಹೆಚ್ಚು ಚಿಂತನೆ ಮಾಡಬೇಕು ಎನ್ನುವ ಮಾರ್ಗದರ್ಶನ ಬಂದಿತ್ತು. ಹೀಗಾಗಿಯೇ ನಾವು ಗೃಹಲಕ್ಷ್ಮೀ, ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪಾಸ್ ಕೊಡುವ ಯೋಜನೆ ಮಾಡಿದೆವು. ಅಜ್ಜನನ್ನು ಮನಸ್ಸಿನಲ್ಲಿ ಪ್ರಾರ್ಥಿಸಿಕೊಂಡೇ ನಾಮಪತ್ರ ಸಲ್ಲಿಸಿದ್ದೆ. ಹೀಗಾಗಿ ಚುನಾವಣಾ ಫಲಿತಾಂಶ ಬರುತ್ತಿದ್ದಂತೆ ಇಲ್ಲಿಗೆ ಬಂದಿದ್ದೇನೆ ಎಂದು ಹೇಳಿದರು.

    ಇದನ್ನೂ ಓದಿ: ಬಿಜೆಪಿ ಹಿನ್ನಡೆಗೆ ಅ’ಸಂತೋಷ’

    ಗುರಿ ತಲುಪಬೇಕಾದರೆ ಗುರುವಿನ ಮಾರ್ಗದರ್ಶನ ಬೇಕಾಗುತ್ತದೆ. ಗುರು ಮಾರ್ಗದರ್ಶನದಲ್ಲಿ ನಾವೆಲ್ಲರೂ ನಡೆಯುತ್ತಾ ಇದ್ದೇವೆ. ಅವರು ಏನೇ ಹೇಳಿದರೂ ನಾವು ಕೇಳುತ್ತೇವೆ. ನಾವು ಅವರನ್ನ ನಂಬಿ ಬಂದಿದ್ದು, ಕೇಳಿದ್ದನ್ನೆಲ್ಲಾ ಕೊಟ್ಟಿದ್ದಾರೆ ಎಂದು ಡಿಕೆಶಿ ಹೇಳಿದರು.

    ನಾನು ಪಕ್ಷಕ್ಕೆ ಜವಾಬ್ದಾರಿಯುತವಾಗಿ ನಡೆದುಕೊಂಡಿದ್ದೇನೆ. ದಿನೇಶ್ ಗುಂಡೂರಾವ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ಟಾಗ ಸೋನಿಯಾ ಗಾಂಧಿ ಅವರು ನನ್ನ ಹೆಗಲಿಗೆ ಪಕ್ಷದ ಜವಾಬ್ದಾರಿ ಹೊರೆಸಿದ್ದರು. ನಾನು ಜೈಲಿಂದ ಹೊರಬರುತ್ತಲೇ ಅಧಿಕಾರ ಹಿಡಿದೆ. ಬಳಿಕ ಹಗಲು ರಾತ್ರಿ ದುಡಿದಿದ್ದೇನೆ. ನೋಡೋಣ ಮುಂದೇನಾಗುತ್ತದೆ… ನಂಬಿಕೆ ಇದೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ನಾನೇ ಸಿಎಂ ಆಗುತ್ತೇನೆ ಎಂದು ಡಿಕೆಶಿ ವಿಶ್ವಾಸ ವ್ಯಕ್ತಪಡಿಸಿದರು.

    ಇದನ್ನೂ ಓದಿ: ನಾವು ಗೆಲ್ಲಲೆಂದೇ ಬಂದವರು… ನಮಗೆ ಸೋಲು ಕ್ಷಣಿಕ: ಬಿ.ಎಲ್.ಸಂತೋಷ್​

    ಸೋನಿಯಾ ಗಾಂಧಿ ನನಗೆ ಜವಾಬ್ದಾರಿ ನೀಡಿದಾಗ ಪಕ್ಷಕ್ಕೋಸ್ಕರ ಹಗಲು-ರಾತ್ರಿ ದುಡಿದಿದ್ದೇನೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ‌. ಪಕ್ಷದ ವಿಚಾರದಲ್ಲಿ ನಾನೇ ಹಲವು ಬಾರಿ ಸೋತಿದ್ದೇನೆ. ಅವರಿಗೆ ನಾನು ಸಹಕಾರ ಕೊಟ್ಟಿದ್ದೇನೆ. ಈಗ ಅವರು ನನಗೆ ಸಹಕಾರ ಕೊಡುವ ವಿಶ್ವಾಸವಿದೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಅವರ ಹೆಸರನ್ನು ಡಿಕೆಶಿ ಉಲ್ಲೇಖಿಸಿದರು. ಮುಂದುವರಿದು ಅಜ್ಜಯ್ಯನ ಆಶಿರ್ವಾದದಿಂದ ಇನ್ನೂ ಎತ್ತರಕ್ಕೆ ಹೋಗುವ ನಂಬಿಕೆ ಇದೆ ಎಂದು ಡಿಕೆಶಿ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts