

ಪ್ರಯಾಗ್ರಾಜ್: ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಶತಮಾನದ ಮಹಾಕುಂಭ ಮೇಳಕ್ಕೆ ಪ್ರತಿನಿತ್ಯ ಕೋಟ್ಯಂತರ ಭಕ್ತರು ಭೇಟಿ ನೀಡುತ್ತಿದ್ದು, ಹೊಸ ದಾಖಲೆಯನ್ನೇ ಬರೆದಿದೆ. ಪ್ರಧಾನಿ ಮೋದಿ ಸೇರಿದಂತೆ ಖ್ಯಾತ ನಟ, ನಟಿಯರು ಹಾಗೂ ಸೆಲೆಬ್ರಿಟಿಗಳು ಕುಂಭಮೇಳದಲ್ಲಿ ಈಗಾಗಲೇ ಪುಣ್ಯಸ್ನಾನವನ್ನು ಮಾಡಿದ್ದಾರೆ.
ಇನ್ನೂ ರಾಜ್ಯದ ವಿಚಾರಕ್ಕೆ ಬರುವುದಾದರೆ ಈಗಾಗಲೇ ಹಲವು ಸೆಲೆಬ್ರಿಟಿಗಳು ಕುಂಭಮೇಳಕ್ಕೆ ಭೇಟಿ ನೀಡಿ ಪುಣ್ಯಸ್ನಾನ ಮಾಡಿದ್ದು, ಇದೀಗ ಡಿಸಿಎಂ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ (Aishwarya DK Shivakumar) ಕುಂಭಮೇಳಕ್ಕೆ ಭೇಟಿ ನೀಡಿ ಪುಣ್ಯಸ್ನಾನ ಮಾಡಿದ್ದಾರೆ. ಈ ಕುರಿತಾದ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವೈರಲ್ ಆಗಿರುವ ಪೋಸ್ಟ್ ನೋಡುವುದಾದರೆ ಮಾಸ್ಕ್ ಧರಿಸಿ ಮಹಾಕುಂಭಮೇಳದಲ್ಲಿ ಸುತ್ತಾಡಿರುವ ಐಶ್ವರ್ಯಾ (Aishwarya) ಬಳಿಕ ಗಂಗಾನದಿಯಲ್ಲಿ ಪುಣ್ಯಸ್ನಾನ ಮಾಡಿದ್ದಾರೆ. ಇದಲ್ಲದೆ ಪ್ರಯಾಗ್ರಾಜ್ನ ಹಲವು ಸ್ಥಳಗಳಿಗೆ ಭೇಟಿ ನೀಡಿದ್ದು, ಇನ್ಸ್ಟಾಗ್ರಾಮ್ನಲ್ಲಿ ಈ ಕುರಿತಾದ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ.
ಮಹಾಕುಂಭಕ್ಕೆ ಭೇಟಿ ನೀಡಿರುವ ಐಶ್ವರ್ಯಾ ಇದು ಪದಗಳನ್ನು ಮೀರಿದ ಅನುಭವ ಎಂದು ಹೇಳಿದ್ದಾರೆ. ಪ್ರಪಂಚದ ಅತಿ ದೊಡ್ಡ ಉತ್ಸವಗಳಲ್ಲಿ ಒಂದಾದ ಸಂಪೂರ್ಣ ಶಕ್ತಿ, ಏಕತೆ ಮತ್ತು ಆಧ್ಯಾತ್ಮಿಕದ ಆಳವು ನನ್ನನ್ನು ಮಂತ್ರಮುಗ್ಧರನ್ನಾಗಿಸಿತು. ಭಕ್ತಿ, ಆಚರಣೆಗಳು ಮತ್ತು ಸಾಮೂಹಿಕ ಪ್ರಜ್ಞೆಯು ನಿಜವಾದ ದೈವಿಕತೆಯ ವಾತಾವರಣವನ್ನು ಸೃಷ್ಟಿಸಿತು ಎಂದು ಅವರು ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
https://www.vijayavani.net/governor-rejects-micro-finance-proposal-sent-by-congress-government
https://www.vijayavani.net/snehamayi-krishna-to-appeal-in-supreme-court-regarding-muda-scam