More

    ಗ್ಯಾರಂಟಿಗಳನ್ನು ಜಾರಿಗೊಳಿಸಲು ಕಾಂಗ್ರೆಸ್‌ ಪಕ್ಷ ಬದ್ಧವಾಗಿದೆ, ಯಾವುದೇ ಗಾಳಿಸುದ್ದಿಗಳಿಗೆ ಕಿವಿಕೊಡಬೇಡಿ: ಡಿ.ಕೆ ಶಿವಕುಮಾರ್

    ಬೆಂಗಳೂರು: ಕಾಂಗ್ರೆಸ್ ನೀಡಿರುವ ಗ್ಯಾರಂಟಿಗಳ ಕುರಿತು ಇಂದು ಸಭೆ ನಡೆಸಲಾಗಿದ್ದು, ಈ ಬಗ್ಗೆ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ರಾಜ್ಯದ ಜನತೆಗೆ ಮಾಹಿತಿ ನೀಡಿದ್ದಾರೆ ಮತ್ತು ಮನವಿ ಕೂಡ ಮಾಡಿದ್ದಾರೆ.

    ಇದನ್ನೂ ಓದಿ: ದ್ವೇಷದ ರಾಜಕಾರಣ, ತೇಜೋವಧೆ ಮಾಡುವ ಟ್ರೋಲ್​ಗಳ ವಿರುದ್ಧ ಕಠಿಣ ಕ್ರಮ; ಸಿಎಂ ಖಡಕ್ ಸೂಚನೆ!

    “ಕಾಂಗ್ರೆಸ್‌ ಪಕ್ಷದ 5 ಪ್ರಮುಖ ಗ್ಯಾರಂಟಿಗಳ ಕುರಿತು ಮಹತ್ವದ ಸಭೆ ನಡೆಸಲಾಗಿದ್ದು, ಇದಕ್ಕಾಗಿ ಒಂದು ವ್ಯವಸ್ಥೆ ಜಾರಿಗೆ ತರುವ ಸಂಬಂಧ ಚರ್ಚಿಸಲಾಗಿದೆ. ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದ್ದು, ಈ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ” ಎಂದು ಹೇಳಿದರು.

    “ಶುಕ್ರವಾರ ಕ್ಯಾಬಿನೆಟ್‌ ಸಭೆಯಲ್ಲಿ ವ್ಯಾಪಕ ಚರ್ಚೆ ನಡೆಸಲಾಗುವುದು. ಗ್ಯಾರಂಟಿಗಳನ್ನು ಜಾರಿಗೊಳಿಸಲು ಕಾಂಗ್ರೆಸ್‌ ಪಕ್ಷ ಬದ್ಧವಾಗಿದೆ. ಸಾರ್ವಜನಿಕರು ಯಾವುದೇ ಗಾಳಿಸುದ್ದಿಗಳಿಗೆ ಕಿವಿಕೊಡದಂತೆ ನಾನು ಮನವಿ ಮಾಡುತ್ತಿದ್ದೇನೆ” ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts