Kumbh Mela: ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ರಾಜ್ಯ ಉಪಮುಖ್ಯಮಂತ್ರಿ(ಡಿಸಿಎಂ) ಡಿ.ಕೆ.ಶಿವಕುಮಾರ್ ಮತ್ತು ಪತ್ನಿ ಉಷಾ ಭಾನುವಾರ ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು.
ನೋಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ ರಾಜದೇಶಿ ಕೇಂದ್ರ ಶಿವಯೋಗಿಶ್ವರ ಶಿವಾಚಾರ್ಯ ಅವರ ಜತೆಯಲ್ಲಿ ಡಿಕೆಶಿ ದಂಪತಿ ಕುಂಭಮೇಳಕ್ಕೆ ತೆರಳಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು. ಈ ಹಿಂದೆ ಡಿಕೆಶಿ ಕೂಡ ಕುಂಭಮೇಳಕ್ಕೆ ತೆರಳಿ ಪುತ್ರಿ ಐಶ್ವರ್ಯಾ ಸಂಗಮದಲ್ಲಿ ಮಿಂದೆದಿದ್ದರು.
ಇನ್ನು ಈ ಕುರಿತು ಡಿಸಿಎಂ ಡಿಕೆಶಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದು, ”ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕುಟುಂಬ ಸಮೇತ ಪಾಲ್ಗೊಂಡು, ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದೆ. 144 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಕ್ಕಿದ್ದು ನಿಜಕ್ಕೂ ಖುಷಿ ತಂದಿದೆ”. ಎಂದಿದ್ದಾರೆ.
ಸಿಎಂ ಸ್ಥಾನಕ್ಕೆ ದಿಢೀರ್ ರಾಜೀನಾಮೆ ಕೊಟ್ಟ ಬಿರೇನ್ ಸಿಂಗ್! Resigned