More

    ನೇಹಾ ಹಿರೇಮಠ ತಂದೆಗೆ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದ ಡಿಕೆ ಶಿವಕುಮಾರ್!

    ಬೆಂಗಳೂರು: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಪ್ರಕರಣವು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಫಯಾಜ್ ಎಂಬಾತ ನೇಹಾ ಅವರನ್ನ ಭೀಕರವಾಗಿ ಹತ್ಯೆ ಮಾಡಿದ್ದು, ಈ ಹೀನಾಕೃತ್ಯಕ್ಕೆ ವ್ಯಾಪಕ ಪ್ರತಿಭಟನೆ ನಡೆಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿಯೂ ಭಾರಿ ಆಕ್ರೋಶ ವ್ಯಕ್ತವಾಗಿದೆ.

    ಇದನ್ನೂ ಓದಿ:  ನೇಹಾ ಕೊಲೆ ಆರೋಪಿಯನ್ನ ಜನಸಾಮಾನ್ಯರ ಕೈಗೆ ಒಪ್ಪಿಸಬೇಕು: ಗೀತಾ ಹಿರೇಮಠ ಆಗ್ರಹ

    ಈ ಮಧ್ಯೆ ಹುಬ್ಬಳ್ಳಿಯಲ್ಲಿರುವ ನೇಹಾ ಹಿರೇಮಠ್ ಕುಟುಂಬಸ್ಥರಿಗೆ ಡಿಸಿಎಂ ಶಿವಕುಮಾರ್ ಅವರು ದೂರವಾಣಿ ಮೂಲಕ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ. ಈ ದುರಂತದಿಂದ ನಮಗೂ ಆಘಾತವಾಗಿದೆ. ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ಆಗಿರುವ ದುಃಖದಲ್ಲಿ ನಾವೂ ಭಾಗಿ. ಸರ್ಕಾರ ನಿಮ್ಮ ಜತೆಗಿದೆ. ತಪ್ಪಿತಸ್ಥರಿಗೆ ಶಿಕ್ಷೆ ಖಂಡಿತ. ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಶಿವಕುಮಾರ್ ಅವರು ಕುಟುಂಬಸ್ಥರಿಗೆ ಭರವಸೆ ನೀಡಿದ್ದಾರೆ.

    ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಸಹೋದರ ಡಿ ಕೆ ಸುರೇಶ್ ಅವರ ಪರ ಆನೇಕಲ್ ನಲ್ಲಿ ಭಾನುವಾರ ಮಧ್ಯಾಹ್ನ ಪ್ರಚಾರ ರ್ಯಾಲಿ ಕೈಗೊಂಡಿದ್ದ ಸಂದರ್ಭದಲ್ಲಿ ಅವರು ನಿರಂಜನ ಹಿರೇಮಠ ಅವರಿಗೆ ದೂರವಾಣಿ ಕರೆ ಮಾಡಿದರು.

    ಪೂರ್ವನಿಗದಿತ ಚುನಾವಣೆ ಪ್ರಚಾರ ಕಾರ್ಯದಲ್ಲಿ ನಿರತನಾಗಿದ್ದ ಕಾರಣ ಹುಬ್ಬಳ್ಳಿಗೆ ಖುದ್ದು ಬರಲು ಆಗಲಿಲ್ಲ. ಚುನಾವಣೆ ಮುಗಿದ ನಂತರ ಖಂಡಿತವಾಗಿಯೂ ಬರುತ್ತೇನೆ. ಮಗಳ ಅಗಲಿಕೆಯಿಂದ ನಿಮಗೆ ಆಗಿರುವ ನೋವು ಎಂತಹದು ಎಂಬುದು ನನಗೆ ಅರ್ಥವಾಗುತ್ತದೆ. ನೋವು ಭರಿಸುವ ಶಕ್ತಿಯನ್ನು ನಿಮಗೆ, ನಿಮ್ಮ ಕುಟುಂಬ ಸದಸ್ಯರಿಗೆ ಆ ಭಗವಂತ ನೀಡಲಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

    ಹುಬ್ಬಳ್ಳಿಯ ನೇಹಾ ಹತ್ಯೆ ಕೇಸ್​: ಆರೋಪಿ ಫಯಾಜ್ ತಲೆ ಕಡಿದವರಿಗೆ 10 ಲಕ್ಷ ರೂ. ಬಹುಮಾನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts