ಡಾ.ಸಿ.ಎನ್. ಮಂಜುನಾಥ್ ವಿರುದ್ಧ ಸೋಲು; ರಾಜಕೀಯದಲ್ಲಿ ತಂತ್ರ-ಕುತಂತ್ರ ಕೆಲಸ ಮಾಡುತ್ತದೆ ಎಂದ ಡಿ.ಕೆ. ಸುರೇಶ್​

DK Suresh
Published on

ಬೆಂಗಳೂರು: 18ನೇ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಹೊರಬಿದಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನ ಡಿ.ಕೆ. ಸುರೇಶ್​ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್​ ಎದುರು ಸೋಲು ಕಂಡಿದ್ದಾರೆ. ಇನ್ನೂ ಸೋಲಿನ ಕುರಿತು ಮಾತನಾಡಿರುವ ಡಿ.ಕೆ. ಸುರೇಶ್​ ಎಲ್ಲವನ್ನೂ ಸಮಾನವಾಗಿ ಸ್ವೀಕರಿಸಬೇಕು ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಡಿ.ಕೆ. ಸುರೇಶ್​, ಮೂರು ಬಾರಿ ಸಂಸದನಾಗಿ ಕೆಲಸ ಮಾಡಲು ಅವಕಾಶ ಕೊಟ್ಟಿದ್ದೀರಿ. ನಾಲ್ಕನೇ ಬಾರಿ ಅಗ್ನಿಪರೀಕ್ಷೆಯಲ್ಲಿ ವಿರಾಮ ಕೊಟ್ಟಿದ್ದೀರಿ. ಮಾದ್ಯಮದ ಮುಖಾಂತರ ಕ್ಷೇತ್ರದ ಮತದಾರರಿಗೆ ಧನ್ಯವಾದ ತಿಳಿಸುತ್ತೇನೆ. ಮತದಾರ ಪ್ರಭುಗಳು ಕೊಟ್ಟಿರುವ ತಿರ್ಮಾನವನ್ನು ಸ್ವಾಗತಿಸುತ್ತೇನೆ. ಗೆಲುವು ಸಾಧಿಸಿದ ಡಾ. ಮಂಜುನಾಥ್ ಅವರಿಗೆ ಧನ್ಯವಾದ ಹೇಳುತ್ತೇನೆ. ನನಗೆ ಅವಕಾಶ ಕೊಟ್ಟ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ನಾಯಕರಾದ ರಾಹುಲ್ ಗಾಂಧಿಯವರಿಗೆ ಹಾಗೂ ಸಿಎಂ‌ ಸಿದ್ದರಾಮಯ್ಯಗೆ ಧನ್ಯವಾದ ತಿಳಿಸುತ್ತೇನೆ.

ಹೊಸಬರು ಚೆನ್ನಾಗಿ ಕೆಲಸ ಮಾಡಲಿ. ಕ್ಷೇತ್ರಕ್ಕೆ ಒಳ್ಳೆಯದಾಗಲಿ. ಕಾರ್ಯಕರ್ತರ ಜೊತೆ ನಾನು ಜೊತೆಯಾಗಿರುತ್ತೇನೆ. ಸೋಲು ಗೆಲುವನ್ನು ಸಮಾನವಾಗಿ ಸ್ವಿಕರಿಸಬೇಕು. ನಾನು ಸೋಲನ್ನು ಸ್ವೀಕರಿಸಿದ್ದೇನೆ. ಗೆಲ್ಲುವ ವಿಶ್ವಾಶ ಇತ್ತು. ಆದರೆ, ಜನ ಬೇರೆ ತಿರ್ಮಾನ ಕೊಟ್ಟಿದ್ದಾರೆ. ರಾಜಕೀಯದಲ್ಲಿ ತಂತ್ರ ಕುತಂತ್ರ ಕೆಲಸ ಮಾಡುತ್ತದೆ. ಅದನ್ನೇ ಮಾಡಿದ್ದಾರೆ. ನಾನು ಕಾರ್ಯಕರ್ತರ ಜೊತೆ ಇದ್ದವನು. ಈಗಲೂ ಅವರ ಜತೆ ಇರುತ್ತೇನೆ. ನನ್ನ ಹೋರಾಟ ಮುಂದುವರಿಯಲಿದೆ. ಆದಾಗ್ಯೂ ದೇಶದಲ್ಲಿ ಇಂಡಿಯಾ ಒಕ್ಕೂಟಕ್ಕೆ ಒಳ್ಳೆಯ ಸಂಖ್ಯೆ ಬಂದಿದೆ. 400 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಬಿಜೆಪಿ ಹೇಳಿತ್ತು. ಮಾಧ್ಯಮಗಳ ಸಮೀಕ್ಷೆಗಳೂ ಹಾಗೆ ಹೇಳಿದ್ದವು. ಆದರೆ, ಅವುಗಳೆಲ್ಲ ಸುಳ್ಳಾಗಿವೆ ಎಂದು ಡಿ.ಕೆ. ಸುರೇಶ್​ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net