More

    ಡಿಕೆಶಿ ಎರಡೂವರೆ ವರ್ಷ ಸಿಎಂ ಆಗ್ತಾರೆ ಎಂದ ಡಿಕೆ ಸುರೇಶ್​: ಸಚಿವ ಪ್ರಿಯಾಂಕ್ ಖರ್ಗೆ ಹೇಳಿದಿಷ್ಟು?

    ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಹುದ್ದೆ ವಿಚಾರ ಮತ್ತೆ ಸದ್ದು ಮಾಡುತ್ತಿದೆ. ಕಾಂಗ್ರೆಸ್‌ ಪಾಳಯದಲ್ಲಿ ಸಿಎಂ ಬದಲಾವಣೆ ವಿಚಾರ ಮತ್ತೆ ಚರ್ಚೆಯಾಗುತ್ತಿದೆ.

    ಇದನ್ನೂ ಓದಿ:ರಂಗೇರಿದ ಲೋಕ ಅಖಾಡ: ಪಶ್ಚಿಮ ಬಂಗಾಳಕ್ಕೆ ಮಾರ್ಚ್​ 6ಕ್ಕೆ ಮೋದಿ, ಫೆ.28 ಅಮಿತ್ ಶಾ ಭೇಟಿ!

    ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ 2.5 ವರ್ಷಗಳ ಅಧಿಕಾರ ಹಂಚಿಕೆಯ ವಿಚಾರವೂ ಸದ್ದು ಮಾಡುತ್ತಿದೆ. ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿದ್ದು, ಈ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.
    ಅಧಿಕಾರ ಹಂಚಿಕೆಯ ಕುರಿತು ನಾಲ್ವರ ನಡುವೆ ಚರ್ಚೆ ನಡೆದಿದ್ದು, ಏನೇ ಆಗಲಿ ಪಕ್ಷದ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

    ಡಿಸಿಎಂ ಡಿಕೆ ಶಿವಕುಮಾರ್ ಅವರ ಸಹೋದರ ಸುರೇಶ್ ಅವರ ಹೇಳಿಕೆ ಕುರಿತ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ನನ್ನನ್ನು ಸೇರಿದಂತೆ ಇತರರಿಗೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಈ ವಿಷಯದ ಬಗ್ಗೆ ಮಾತನಾಡಲು ಯಾರಿಗೂ ಅಧಿಕಾರವಿಲ್ಲ. ಇದನ್ನು ಹೈಕಮಾಂಡ್‌ ತೀರ್ಮಾನ ಮಾಡುತ್ತೆ ಎಂದರು.

    ಸದ್ಯಕ್ಕೆ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ. ಡಿಸಿಎಂ ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗಿದ್ದಾರೆ. ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಿದ್ದೇವೆ. ಮುಂಬರುವ ಚುನಾವಣೆಯನ್ನೂ ಎದುರಿಸುತ್ತೇವೆ. ಕಾಂಗ್ರೆಸ್ 20 ಲೋಕಸಭಾ ಸ್ಥಾನಗಳನ್ನು ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    2.5 ವರ್ಷಗಳ ನಂತರ ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡುತ್ತೀರಾ, ಆ ನಿರ್ಧಾರವನ್ನು ಸ್ವಾಗತಿಸುವಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ವಿನಾಕಾರಣ ಏನನ್ನೋ ಏಕೆ ಕಲ್ಪಿಸಿಕೊಳ್ಳುತ್ತೀರಿ? ಈಗ ಬಜೆಟ್ ಮುಖ್ಯ. ಬಜೆಟ್ ಬಗ್ಗೆ ಉತ್ತಮ ಚರ್ಚೆಯಾಗಲಿ. ಮೊದಲು ಲೋಕಸಭೆ ಚುನಾವಣೆ ಎದುರಿಸಿ 20 ಸೀಟು ಗೆಲ್ಲೋಣ ಆಮೇಲೆ ನೋಡೋಣ ಎಂದರು.

    ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರು ತಮ್ಮ ಸಹೋದರ ಡಿಕೆ ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ ಎರಡೂವರೆ ವರ್ಷಗಳ ಅಧಿಕಾರವಧಿ ನಂತರ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬುಧವಾರ ತಿಳಿಸಿದ್ದರು.

    IPL 2024: ಗುಜರಾತ್​​​ ಟೈಟನ್ಸ್‌ಗೆ ಶಾಕ್..ಸ್ಟಾರ್​​​​​ ಬೌಲರ್​​ ಟೂರ್ನಿಯಿಂದ ಔಟ್.?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts