ರಾಜಕೀಯ ವಲಯದಲ್ಲಿ ಶುರುವಾಗಿದೆ ಚಟುವಟಿಕೆ; ತೀವ್ರ ಅಚ್ಚರಿ ಮೂಡಿಸಿದೆ ಡಿ.ಕೆ.ಸುರೇಶ್​ ಹೇಳಿಕೆ

D.K
Published on

ರಾಮನಗರ: ಒಂದೆಡೆ ರಾಜ್ಯದಲ್ಲಿ ಕರೊನಾ ಸಂಕಷ್ಟ ದಿನೇದಿನೆ ಹೆಚ್ಚುತ್ತಿದ್ದರೆ, ಇನ್ನೊಂದೆಡೆ ರಾಜಕೀಯ ಬೆಳವಣಿಗೆಗಳೂ ಗರಿಗೆದರಿವೆ.

ಬಿಜೆಪಿ, ಕಾಂಗ್ರೆಸ್ ವಲಯದಲ್ಲಿ ಒಬ್ಬೊಬ್ಬರು ಒಂದೊಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈಗ ಸಂಸದ ಡಿ.ಕೆ.ಸುರೇಶ್​ ಅವರು ಒಂದು ಹೇಳಿಕೆ ನೀಡಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ಅತಿ ಶೀಘ್ರದಲ್ಲೇ ಚುನಾವಣೆ ನಡೆಯಲಿದೆ. ಬಿಜೆಪಿಯವರೇ ಸರ್ಕಾರವವನ್ನು ಬೀಳಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬರುತ್ತದೆ ಎಂದು ಹೇಳುವ ಮೂಲಕ ಅಚ್ಚರಿ ಹುಟ್ಟಿಸಿದ್ದಾರೆ.

ಮಾಗಡಿಯಲ್ಲಿ ನಡೆದ ಕಾಂಗ್ರೆಸ್​ ಸಭೆಯಲ್ಲಿ ಮಾತನಾಡಿದ ಅವರು, ನಾವು ಮಾಗಡಿಯಲ್ಲಿ ಬಾಲಕೃಷ್ಣ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕಟ್ಟುತ್ತೇವೆ. ವಿರೋಧಿಗಳು ಏನೇ ಹೇಳಿದರೂ ತಲೆ ಕೆಡಿಸಿಕೊಳ್ಳುವುದಿಲ್ಲ. ಪಕ್ಷವನ್ನು ಸದೃಢವಾಗಿ ಬೆಳೆಸುತ್ತೇವೆ ಎಂದಿದ್ದಾರೆ.

ಕಾಂಗ್ರೆಸ್ ಕಾರ್ಯಕ್ರಮವನ್ನು ಯಾರಿಂದಲೂ ಅಳಿಸಲು ಸಾಧ್ಯವಿಲ್ಲ. ನರೇಂದ್ರ ಮೋದಿಯವರಿಂದಲೂ ಕಾಂಗ್ರೆಸ್​ಗೆ ಏನೂ ಮಾಡಲಾಗದು. 20 ಲಕ್ಷ ಕೋಟಿ ರೂ.ಕರೊನಾ ಪ್ಯಾಕೇಜ್​ ಹೆಸರಲ್ಲಿ ಜನರಿಗೆ ಪಂಗನಾಮ ಹಾಕುತ್ತಿದ್ದಾರೆ ಎಂದು ಆರೋಪಿಸಿದರು. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net