More

    ದಾರೀಲಿ ಹೋಗುವವರಿಗೆಲ್ಲ ದುಡ್ಡು ಕೊಡಲು ಆಗಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್​

    ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಗೆ ಐದು ಗ್ಯಾರಂಟಿಗಳನ್ನು ನೀಡಲಾಗುವುದು ಎಂದು ಘೋಷಿಸಿತ್ತು.

    ಇನ್ನು ಸಿಎಂ-ಡಿಸಿಎಂ ಪದಗ್ರಹಣದ ಬಳಿಕ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ನಡೆದ ಸಚಿವ ಸಂಪುಟ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ.

    ದುಡ್ಡು ಕೊಡಲು ಆಗುವುದಿಲ್ಲ

    ಸಭೆಯಲ್ಲಿ ಮಾತನಾಡುತ್ತಾ ಎಲ್ಲದ್ದಕ್ಕೂ ವರದಿ ಪಡೆಯಬೇಕಾಗುತ್ತದೆ ಸುಮ್ಮನೆ ದಾರೀಲಿ ಹೋಗೋರಿಗೆ ದುಡ್ಡು ಕೊಡುವುದಕ್ಕೆ ಆಗುವುದಿಲ್ಲ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ.

    Siddu Dk (1)

    ಯಾರಿಗೆ ಯೋಜನೆಯನ್ನು ತಲುಪಿಸಬೇಕು ಫಲಾನುಭವಿಗಳು ಯಾರು ಎಂಬುದರ ಕುರಿತು ವರದಿ ಪಡೆದು ಆ ನಂತರ ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂದು ಭರವಸೆ ನೀಡಿದ್ದಾರೆ.

    ಒಂದೇ ವರ್ಷದಲ್ಲಿ ಈಡೇರಿಸಲು ಸಾಧ್ಯವಿಲ್ಲ

    ಇದಕ್ಕೂ ಮುನ್ನ ಮಾತನಾಡಿದ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್​ ಪಕ್ಷ ನೀಡಿರುವ ಭರವಸೆಗಳು ಒಂದೇ ವರ್ಷದಲ್ಲಿ ಈಡೇರಿಸಲು ಸಾಧ್ಯವಿಲ್ಲ ಮುಂದಿನ 5 ವರ್ಷಗಳಲ್ಲಿ ಈಡೇರಿಸುವಂತಹದ್ದು ಎಂದು ಹೇಳಿದ್ಧಾರೆ.

    ಮೊದಲ ಸಂಪುಟದಲ್ಲಿ 5 ಗ್ಯಾರಂಟಿಗಳ ಜಾರಿ ಬಗ್ಗೆ ಮಾತು ಕೊಟ್ಟಿದ್ದೆವು. ನಮ್ಮ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ. ಈಗಾಗಲೇ ನಿರ್ಧಾರ ಮಾಡಿದ್ದು, ಮುಂದಿನ ಸಂಪುಟ ಸಭೆಯ ಬಳಿಕ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts