More

    ಕರ್ನಾಟಕದ ಜನರು ನನ್ನ ಹುಟ್ಟು ಹಬ್ಬಕ್ಕೆ ಅತ್ಯುತ್ತಮ ಗಿಫ್ಟ್ ನೀಡಿದ್ದಾರೆ: ಡಿಕೆ ಶಿವಕುಮಾರ್

    ಬೆಂಗಳೂರು: ಇದೀಗ ಮತದಾರರು ಸಂಪೂರ್ಣ ಬಹುಮತದೊಂದಿಗೆ ಕಾಂಗ್ರೆಸ್​ಗೆ ರಾಜ್ಯದ ಅಧಿಕಾರದ ಚುಕ್ಕಾಣಿ ನೀಡಿದ್ದು ಮುಖ್ಯಮಂತ್ರಿ ಯಾರಾಗುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ. ಈ ನಡುವೆ ಇಂದೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಹುಟ್ಟುಹಬ್ಬವಾಗಿದ್ದು, ಈ ಕುರಿತಾಗಿ ಟ್ವೀಟ್ ಮಾಡಿದ್ದಾರೆ. ಇಂದು ಡಿಕೆ ಶಿವಕುಮಾರ್ ತಮ್ಮ 61ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

    ಪೂರ್ಣ ಬಹುಮತದೊಂದಿಗೆ ಗೆದ್ದಿರುವ ಕಾಂಗ್ರೆಸ್​ಗೆ ಈಗ ಮುಖ್ಯಮಂತ್ರಿ ಆಯ್ಕೆ ವಿಚಾರವೇ ಕಗ್ಗಂಟಾಗಿ ಪರಿಣಮಿಸಿದ್ದು, ಇಂದು ಶಾಸಕಾಂಗ ಪಕ್ಷದ ಸಭೆಯಲ್ಲೂ ಆ ಕುರಿತು ಒಮ್ಮತದ ನಿರ್ಣಯಕ್ಕೆ ಬರಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಶಾಸಕರನ್ನು ವೈಯಕ್ತಿಕವಾಗಿ ಭೇಟಿ ಮಾಡಿ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ.

    ಡಿಕೆ ಶಿವಕುಮಾರ್ ತಮ್ಮ ಟ್ವೀಟ್​ನಲ್ಲಿ “ನನ್ನ ಜೀವನ ಕರ್ನಾಟಕದ ಜನರ ಸೇವೆಗೆ ಮುಡಿಪಾಗಿದೆ. ನನ್ನ ಹುಟ್ಟುಹಬ್ಬದ ಹಿಂದಿನ ದಿನದಂದು ಕರ್ನಾಟಕದ ಜನರು ನನಗೆ ಅತ್ಯುತ್ತಮ ಹುಟ್ಟುಹಬ್ಬದ ಉಡುಗೊರೆಯನ್ನು ನೀಡಿದ್ದಾರೆ. ನನ್ನ ಕಾಂಗ್ರೆಸ್ ಕುಟುಂಬಕ್ಕೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts