

ಚಾಮರಾಜನಗರ: ಇದೀಗ ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೆಪಿಸಿಸ ಅಧ್ಯಕ್ಷರಾಗಿ ಕಾಂಗ್ರೆಸ್ ಕಾರ್ಯಕರ್ತರ ಮನೆಗೆ ಟಿವಿ ಕಳುಹಿಸಿ ಕೊಟ್ಟಿದ್ದಾರೆ.
ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲನ್ನು ಕಂಡಿತ್ತು. ಹಿಂದಿನ 3 ಚುನಾವಣೆಗಳಲ್ಲೂ ಗೆದ್ದಿದ್ದ ಕಾಂಗ್ರೆಸ್ ಅಭ್ಯರ್ಥಿ ಆರ್. ನರೇಂದ್ರ ಪರಾಭವಗೊಂಡು ಜೆಡಿಎಸ್ ಅಭ್ಯರ್ಥಿ ಎಂ.ಆರ್.ಮಂಜುನಾಥ್ ಗೆದ್ದಿದ್ದರು. ಆದರೂ ಅತಿ ಹೆಚ್ಚು ಗ್ಯಾರಂಟಿ ಕಾರ್ಡ್ ಹಂಚಿದ್ದಕ್ಕಾಗಿ ಡಿಕೆ ಶಿವಕುಮಾರ್ ಕಾರ್ಯಕರ್ತರಿಗೆ ಟಿವಿ ನೀಡಿದ್ದಾರೆ.