ಗ್ಯಾರಂಟಿ ಟೀಕಿಸಿದವರಿಗೆ ಡಿಕೆಶಿ ಪತ್ರ, ಆಹ್ವಾನ

DK Shivakumar

ಬೆಂಗಳೂರು: ಕರ್ನಾಟಕದ ಗ್ಯಾರಂಟಿ ಯೋಜನೆಗಳ ಬಗ್ಗೆ ಸುಳ್ಳು ಆರೋಪ ಮಾಡುತ್ತಿರುವ ನಾಯಕರು ರಾಜ್ಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಆಹ್ವಾನ ನೀಡುತ್ತಿದ್ದು, ಅವರಿಗಾಗಿ 30 ವಿಶೇಷ ಬಸ್ ಹಾಗೂ ವಿಮಾನ ಪ್ರಯಾಣ ವ್ಯವಸ್ಥೆ ಮಾಡಲಾಗುತ್ತಿದೆ. ನಮ್ಮ ರಾಜ್ಯದ 30 ಜಿಲ್ಲೆಗಳಿಗೂ ಭೇಟಿ ನೀಡಲಿ, ನಮ್ಮ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರ ದೂರವಾಣಿ ಸಂಖ್ಯೆಗಳನ್ನು ಒದಗಿಸಿ ಪತ್ರ ಬರೆಯುತ್ತಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗಳಲ್ಲಿ ಸುಳ್ಳೇ ಬಿಜೆಪಿಯ ಪ್ರಬಲ ಅಸ್ತ್ರವಾಗಿದೆ. ಹೀಗಾಗಿ ಪ್ರಧಾನಮಂತ್ರಿಯಂತಹ ಉನ್ನತ ಹುದ್ದೆಯಲ್ಲಿರುವವರು ಆಧಾರರಹಿತ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.
ಪ್ರಧಾನಮಂತ್ರಿಗಳು ರಾಜಕೀಯ ಆರೋಪ ಮಾಡುತ್ತಿದ್ದಾರೆ. ಅವರು ಈ ಆರೋಪಗಳನ್ನು ಸಾಬೀತುಪಡಿಸಲಿ. ನಾವು ಯಾವುದೇ ಶಿಕ್ಷೆಗೆ ಬೇಕಾದರೂ ಗುರಿಯಾಗುತ್ತೇವೆ ಎಂದ ಅವರು ಕೇಂದ್ರ ಸಚಿವರುಗಳು ಯಾವ ಯಾವ ಚುನಾವಣೆಗೆ ಎಷ್ಟೆಷ್ಟು ಹಣ ಸಂಗ್ರಹಿಸುತ್ತಿದ್ದಾರೆ ಎಂದು ನನಗೂ ಗೊತ್ತಿದೆ. ಉನ್ನತ ಹುದ್ದೆಯಲ್ಲಿರುವವರು ಆಧಾರವಿಲ್ಲದೆ ಆರೋಪ ಮಾಡಬಾರದು ಎಂದರು.
ಮೋದಿ ಅವರು ಪದೇ ಪದೆ ಕರ್ನಾಟಕದ ಪ್ರಸ್ತಾಪ ಮಾಡುತ್ತಿರುವುದರಿಂದ ಏನೂ ಆಗುವುದಿಲ್ಲ. ಜನ ಈಗಾಗಲೇ ಅವರಿಗೆ ಉತ್ತರ ನೀಡಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಹಾಗೂ ಇಂಡಿಯಾ ಮೈತ್ರಿಕೂಟ ತನ್ನ ಶಕ್ತಿ ಹೆಚ್ಚಿಸಿಕೊಳ್ಳುತ್ತಿದೆ ಎಂಬ ಭಯ ಶುರುವಾಗಿದೆ ಎಂದು ತಿಳಿಸಿದರು.

Share This Article

Alcohol In Winter: ಚಳಿಯಲ್ಲಿ ಮದ್ಯ ಸೇವನೆ ಎಷ್ಟು ಅಪಾಯಕಾರಿ ಗೊತ್ತಾ?

Alcohol In Winter: ಚಳಿಗಾಲ ಆರಂಭವಾಗಿದೆ ಮತ್ತು ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದಲ್ಲದೆ, ಜ್ವರ…

ಚಳಿಗಾಲದಲ್ಲಿ ಸೀಬೆಹಣ್ಣನ್ನು ಹೇಗೆ ತಿಂದರೆ ಆರೋಗ್ಯಕ್ಕೆ ಪ್ರಯೋಜನಕಾರಿ; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಸೀಬೆಹಣ್ಣು ತಿನ್ನುವುದರಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು. ತಲೆಯಿಂದ ಕಾಲ್ಬೆರಳು ಉಗುರುಗಳವರೆಗೆ ಆರೋಗ್ಯಕರವಾಗಿರಲು ಇದು ಕಿತ್ತಳೆಗಿಂತ ಹೆಚ್ಚು…

ಕಾಂತಿಯುತ ತ್ವಚೆ ನಿಮ್ಮದಾಗಬೇಕೇ?; ಮಲಗುವ ಮುನ್ನ ಈ ಟಿಪ್ಸ್​ ಫಾಲೋ ಮಾಡಿ | Health Tips

ಸುಂದರ, ಆಕರ್ಷಣಿಯ ಮತ್ತು ಹೊಳೆಯುವ ಚರ್ಮವನ್ನು ಪಡೆಯಲು ಹಗಲಿನಲ್ಲಿ ಮಾತ್ರವಲ್ಲ ರಾತ್ರಿ ವೇಳೆಯು ಚರ್ಮದ ಕಾಳಜಿ…