More

    ಶೆಟ್ಟರ್​-ಸವದಿಗೆ ಉನ್ನತ ಸ್ಥಾನಮಾನ; ಉಭಯ ನಾಯಕರನ್ನು ಭೇಟಿ ಮಾಡಲಿರುವ ಡಿಕೆಶಿ

    ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಟಿಕೆಟ್​ ನಿರಾಕರಿಸಿದ ಕಾರಣ ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್​ ಶೆಟ್ಟರ್​ ಹಾಗೂ ಲಕ್ಷ್ಮಣ್​ ಸವದಿಗೆ ರಾಜ್ಯ ಸರ್ಕಾರದಲ್ಲಿ ಉನ್ನತ ಮಟ್ಟದ ಸ್ಥಾನಮಾನ ನೀಡುವ ಕುರಿತು ಚರ್ಚೆಯಾಗುತ್ತಿದೆ.

    ಬುಧವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಖಾಸಗಿ ಕಾರ್ಯಕ್ರಮದ ನಿಮಿತ್ತ ರಾಜಮಂಡ್ರಿಗೆ ತೆರಳುತ್ತಿದ್ದು ಅಲ್ಲಿಂದ ಬಂದ ಬಳಿಕ ಮೊದಲಿಗೆ ಬೆಳಗಾವಿಯಲ್ಲಿ ಅಥಣಿ ವಿಧಾನಸಭಾ ಕ್ಷೇತ್ರದ ಶಾಸಕ, ಮಾಜಿ ಡಿಸಿಎಂ ಲಕ್ಷ್ಮಣ್​ ಸವದಿ ಹಾಗೂ ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

    ಸಂಪುಟ ದರ್ಜೆ ಸ್ಥಾನಮಾನ

    ಸುದ್ದಿ ಮೂಲಗಳ ಪ್ರಕಾರ ಜಗದೀಶ್​ ಶೆಟ್ಟರ್​ರನ್ನು ಯೋಜನಾ ಆಯೋಗದ ಉಪಾಧ್ಯಕ್ಷ ಹಾಗೂ ಲಕ್ಷ್ಮಣ್​ ಸವದಿ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಮಾಡುವ ಸಾಧ್ಯತೆ ದಟ್ಟವಾಗಿದೆ.

    ಉಭಯ ನಾಯಕರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡುವ ಕುರಿತಾಗಿ ಡಿಸಿಎಂ ಡಿ.ಕೆ. ಶಿವಕುಮಾರ್​ ಶೆಟ್ಟರ್​ ಹಾಗೂ ಸವದಿ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

    Shettar Savadi

    ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಲಕ್ಷ್ಮಣ ಸವದಿ ಅವರು ವಿಧಾನಸಭೆ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಲ್ಲಿ ಭಾರೀ ಅಂತರದ ಗೆಲುವು ಸಾಧಿಸಿದ್ದರು. ಮತ್ತೊಂದೆಡೆ, ಜಗದೀಶ ಶೆಟ್ಟರ್ ಅವರು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು. ಚುನಾವಣೆಯಲ್ಲಿ ಸೋಲನುಭವಿಸಿದ್ದರೂ ಶೆಟ್ಟರ್ ಅವರು ಪ್ರಮುಖ ಹುದ್ದೆ ನಿರೀಕ್ಷಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts