More

    ವ್ಹೀಲಿಂಗ್ ಸ್ಟಂಟ್ ಮಾಡುವವರ ಚಾಲನಾ ಪರವಾನಗಿ ರದ್ದು: ಅಲೋಕ್​ ಕುಮಾರ್​

    ಬೆಂಗಳೂರು: ವ್ಹೀಲಿಂಗ್ ಸ್ಟಂಟ್ ಮಾಡುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಕ ಅಲೋಕ್ ಕುಮಾರ್ ಸೂಚಿಸಿದ್ದಾರೆ.

    ಬೆಂಗಳೂರು ನಗರದ ಹೊರವಲಯದ ರಿಂಗ್ ರಸ್ತೆ, ನೈಸ್ ರಸ್ತೆ, ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ, ಹೊಸಕೋಟೆ ರಸ್ತೆ, ಬೆಂಗಳೂರು-ಬೆಳಗಾವಿ ರಾಷ್ಟ್ರೀಯ ಹೆದ್ದಾರಿ(NH-48), ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಹೆದ್ದಾರಿ, ಮೈಸೂರಿನ ರಿಂಗ್ ರಸ್ತೆಗಳಲ್ಲಿ ಕೆಲವು ವಾಹನ ಸವಾರರು ಅಪಾಯಕಾರಿ ರೀತಿ ಚಾಲನೆ ಮಾಡುತ್ತಿರುವುದು ಕಂಡು ಬಂದಿದೆ.

    ಈ ಸಂಬಂಧ ಅಂತಹ ವಾಹನ ಸವಾರರ ವಿರುದ್ಧ ಕಟ್ಟುನಿಟ್ಟಾಗಿ ಕ್ರಮ ತೆಗೆದುಕೊಳ್ಳಬೇಕು ಮತ್ತು ನಿಷ್ಪಕ್ಷವಾಗಿ ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಜ್ಞಾಪನ ಪತ್ರದಲ್ಲಿ ಸೂಚಿಸಿದ್ದಾರೆ.

    ADGP Alok Kumar

    ಇದನ್ನೂ ಓದಿ: VIDEO| ಮಗಳನ್ನು ಪ್ರೀತಿ ಮಾಡಿದ್ದಕ್ಕೆ ಯುವಕನನ್ನು ಬರ್ಬರವಾಗಿ ಇರಿದು ಕೊಂದ ಯುವತಿ ಕುಟುಂಬಸ್ಥರು

    ವ್ಹೀಲಿಂಗ್ ಸ್ಟಂಟ್ ಮಾಡುವ ವಾಹನ ಸವಾರರ ವಿರುದ್ಧ ಕಲಂ 279 ಐಪಿಸಿ ಮತ್ತು 184, 189 ಐಎಂವಿ ಕಾಯ್ದೆ 1988 ಅಡಿ ಕ್ರಮ ತೆಗೆದುಕೊಳ್ಳುವುದು ಹಾಘೂ ಐಎಂವಿ ಕಾಯ್ದೆಯ ಕಲಂ 19ಡಿ ಅನ್ವಯ ಚಾಲನಾ ಪರವಾನಗಿಯನ್ನು ಅಮಾನತ್ತುಗೊಳಿಸಲು ಅಥವಾ ಈ ಸಂಚಾರ ನಿಯಮ ಉಲ್ಲಂಘನೆಯನ್ನು ಪದೇ ಪದೇ ಮಾಡುತ್ತಿರುವ ವಾಹನ ಸವಾರರ ಚಾಲನಾ ಪರವಾನಗಿಯನ್ನು ರದ್ದುಗೊಳಿಸಲು ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲು ತಿಳಿಸಿದ್ದಾರೆ.

    ಸಾಮಾಜಿಕ ಜಾಲತಾಣಗಳಲ್ಲಿ ವ್ಹೀಲಿಂಗ್ ಸ್ಟಂಟ್ ಮಾಡುವ ವಾಹನ ಸಾವರರು ವಿಡಿಯೋ ಅಥವಾ ಪೋಸ್ಟ್‌ಗಳನ್ನು ಹಾಕುತ್ತಿದ್ದು, ಈ ಬಗ್ಗೆ ಎಲ್ಲಾ ಘಟಕಾಧಿಗಳು ಸೂಕ್ತ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ. ಬೆಂಗಳೂರು ನಗರದಲ್ಲಿ ವ್ಹೀಲಿಂಗ್ ಸ್ಟಂಟ್ ಮಾಡುವ ವಾಹನ ಸವಾರರ ವಿರುದ್ಧ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರು, ಕಠಿಣ ಕ್ರಮ ತೆಗೆದುಕೊಂಡು ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಬೇಕು ಎಂದು ಸೂಚಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts