ಕರುಣಾನಿಧಿ ಆರೋಗ್ಯ ಸ್ಥಿತಿ ಕುರಿತು ಹೆಲ್ತ್‌ ಬುಲೆಟಿನ್‌ ಬಿಡುಗಡೆ

ಚೆನ್ನೈ: ತೀವ್ರ ಅನಾರೋಗ್ಯದಿಂದ ಆಸ್ಪತ್ರೆ ಸೇರಿರುವ ಡಿಎಂಕೆ ಮುಖ್ಯಸ್ಥ ಮತ್ತು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಕಾವೇರಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಈ ಕುರಿತು ಆಸ್ಪತ್ರೆ ಹೆಲ್ತ್‌ ಬುಲೆಟಿನ್‌ ಬಿಡುಗಡೆ ಮಾಡಿದ್ದು, ಜೀವರಕ್ಷಕ ಸಾಧನಗಳ ಸಹಾಯದಿಂದ ಕರುಣಾನಿಧಿ ಅವರಿಗೆ ತಜ್ಞವೈದ್ಯರಿಂದ ಚಿಕಿತ್ಸೆ ಮುಂದುವರಿದಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

 

ಸದ್ಯ ತುರ್ತು ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡುತ್ತಿರುವ ವೈದ್ಯರು, ತಾವು ನೀಡುತ್ತಿರುವ ಚಿಕಿತ್ಸೆಗೆ ಕರುಣಾನಿಧಿ ಅವರು ಸೂಕ್ತವಾಗಿ ಸ್ಪಂದಿಸುತ್ತಿದ್ದಾರೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಏಜೆನ್ಸೀಸ್)