More

    ಹನ್ನೊಂದು ಎಐಎಡಿಎಂಕೆ ಶಾಸಕರ ಅನರ್ಹತೆ ಕುರಿತ ಅರ್ಜಿ ತುರ್ತು ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ಡಿಎಂಕೆ

    ನವದೆಹಲಿ: ತಮಿಳುನಾಡಿನಲ್ಲಿ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿಗೆ ವಿರುದ್ಧವಾಗಿ ಮತ ಚಲಾಯಿಸಿದ 11 ಎಐಎಡಿಎಂಕೆ ಶಾಕಸರ ಅನರ್ಹತೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ತುರ್ತಾಗಿ ನಡೆಸಬೇಕು ಎಂದು ಮನವಿ ಮಾಡಿ ಡಿಎಂಕೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

    ತಮಿಳುನಾಡು ವಿಧಾನಸಭೆಯಲ್ಲಿ 2017ರಲ್ಲಿ ನಡೆದ ವಿಶ್ವಾಸಮತ ಯಾಚನೆ ವೇಳೆ ಈ ಶಾಸಕರು ಮುಖ್ಯಮಂತ್ರಿ ವಿರುದ್ಧ ಮತಚಲಾಯಿಸಿದ್ದರು. ಹೀಗಾಗಿ ಅವರನ್ನು ಅನರ್ಹಗೊಳಿಸಬೇಕೆಂದು ಡಿಎಂಕೆ ಆಗ್ರಹಿಸುತ್ತ ಬಂದಿದೆ. ಸುಪ್ರೀಂ ಕೋರ್ಟ್​ನ ಮುಖ್ಯನ್ಯಾಯಮೂರ್ತಿ ಎಸ್​.ಎ ಬೊಬ್ಡೆ ನೇತೃತ್ವದ ನ್ಯಾಯಪೀಠಕ್ಕೆ ಡಿಎಂಕೆ ಮನವಿ ಸಲ್ಲಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ತುರ್ತು ವಿಚಾರಣೆಗೆ ಇದನ್ನು ಪರಿಗಣಿಸುವುದಾಗಿ ಭರವಸೆ ನೀಡಿತು.

    ಇತ್ತೀಚೆಗೆ ಮಣಿಪುರ ಸಚಿವರ ಪ್ರಕರಣದಲ್ಲಿ ಅನರ್ಹತೆ ಸಂಬಂಧಿಸಿದ ವಿಚಾರವನ್ನು ನಾಲ್ಕು ವಾರದಲ್ಲಿ ನಿರ್ಧರಿಸುವಂತೆ ಸ್ಪೀಕರ್​ಗೆ ಕೋರ್ಟ್ ಸೂಚಿಸಿತ್ತು. ಇದನ್ನು ಆಧರಿಸಿ ಡಿಎಂಕೆ ಪರವಾಗಿ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್​ ಅಪೆಕ್ಸ್​ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.
    ಡಿಎಂಕೆ ನಾಯಕರು ಈ ಹಿಂದೆ 2018ರ ಡಿಸೆಂಬರ್​ನಲ್ಲಿ ಮದ್ರಾಸ್ ಹೈಕೋರ್ಟ್​ನಲ್ಲೂ ಈ ಪ್ರಕರಣದ ಅರ್ಜಿ ಸಲ್ಲಿಸಿದ್ದರು. ಆದರೆ, ಕೋರ್ಟ್​ ಈ ಅರ್ಜಿಯನ್ನು ತಳ್ಳಿಹಾಕಿತ್ತು. (ಏಜೆನ್ಸೀಸ್)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts