More

    ಸೆಕ್ಷನ್ 4 ಪ್ರದೇಶದಲ್ಲಿ ಹಕ್ಕುಪತ್ರ ವಿತರಣೆಗೆ ಚರ್ಚೆ

    ಕೊಪ್ಪ: ಸರ್ಕಾರದೊಂದಿಗೆ ಚರ್ಚೆ ನಡೆಸಿ ಮಲೆನಾಡಿನಲ್ಲಿ ಸೆಕ್ಷನ್ 4 ಪ್ರದೇಶವನ್ನು ಡಿನೋಟಿಫೈ ಮಾಡಿ ಜನರಿಗೆ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದು ಶಾಸಕ ಟಿ.ಡಿ.ರಾಜೇಗೌಡ ಭರವಸೆ ನೀಡಿದರು.

    ತಾಲೂಕು ಕಚೇರಿ ಆವರಣದಲ್ಲಿ 94 ಸಿ ಹಕ್ಕುಪತ್ರ ವಿತರಣೆಯಲ್ಲಿ ಮಾತನಾಡಿದ ಅವರು, 94 ಸಿಯಲ್ಲಿ ಅರ್ಜಿ ಸಲ್ಲಿಸಿದವರಲ್ಲಿ ಹೆಚ್ಚಿನವರು ಬಡವರು, ಗೋಮಾಳದ ಜಾಗದಲ್ಲಿ ವಾಸವಿರುವವರಿಗೆ ಹಕ್ಕುಪತ್ರ ವಿತರಿಸಲಾಗುತ್ತಿದೆ. ಆದರೆ ಕಾನೂನು ತೊಡಕುಗಳಿಂದ ಸೆಕ್ಷನ್ 4, ಮೀಸಲು ಅರಣ್ಯ, ಡೀಮ್್ಡ ಫಾರೆಸ್ಟ್, ಸೊಪ್ಪಿನ ಬೆಟ್ಟದಲ್ಲಿ ವಾಸವಿರುವವರಿಗೆ ಹಕ್ಕುಪತ್ರ ನೀಡಲು ಸಾಧ್ಯವಾಗುತ್ತಿಲ್ಲ. ಸರ್ಕಾರ ಸೆಕ್ಷನ್ 4 ಸಮಸ್ಯೆ ಬಗೆಹರಿಸಲು ಉಪ ವಿಭಾಗಾಧಿಕಾರಿಯನ್ನು ನೇಮಕ ಮಾಡಿದೆ. ಮುಂದಿನ ದಿನದಲ್ಲಿ ಅವರೊಂದಿಗೆ ಚರ್ಚೆ ನಡೆಸಿ ಜನರು ವಾಸವಿರುವ ಸ್ಥಳವನ್ನು ಡಿನೋಟಿಫೈ ಮಾಡಿ ಅವರಿಗೂ ಹಕ್ಕುಪತ್ರ ನೀಡಲಾಗುತ್ತದೆ. ಅಕ್ರಮ ಸಕ್ರಮ ಸಮಿತಿ ಸಭೆಯಲ್ಲಿ ರ್ಚಚಿಸಿ 57, 53ರಲ್ಲಿ ಅರ್ಜಿ ಸಲ್ಲಿಸಿದವರಿಗೆ ಸಾಗುವಳಿ ಚೀಟಿ ವಿತರಿಸಲಾಗುವುದು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts