More

    ಸಾಮಾಜಿಕ-ಶೈಕ್ಷಣಿಕ ಸ್ಥಿತಿಗತಿ ಸಮೀಕ್ಷೆ: ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಯತ್ನಾಳ್ ಆಗ್ರಹ

    ಬೆಂಗಳೂರು: ದೇಶ ಮಾತ್ರವಲ್ಲ ರಾಜ್ಯದಲ್ಲೂ ಜಾತಿಗಣತಿ ಸದ್ದು ಮಾಡುತ್ತಿದ್ದು, ಈ ಸಂಬಂಧ ದಿನೇದಿನೆ ಹೊಸ ಬೆಳವಣಿಗೆ, ಆರೋಪ-ಪ್ರತ್ಯಾರೋಪಗಳು ಕೇಳಿಬರುತ್ತವೆ. ಇದರ ನಡುವೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾದ ಸಾಮಾಜಿಕ-ಶೈಕ್ಷಣಿಕ ಸ್ಥಿತಿಗತಿ ಸಮೀಕ್ಷೆ ವರದಿ ವಿಚಾರ ಕೂಡ ಮತ್ತೆ ಸದ್ದು ಮಾಡುತ್ತಿದೆ.

    ಈ ಸಮೀಕ್ಷೆ ವರದಿಗೆ ಸಂಬಂಧಿಸಿದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ ವ್ಯಕ್ತಪಡಿಸಿದ್ದು, ಇದರಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕ್ರಮ ಜರುಗಿಸುವಂತೆ ಆಗ್ರಹ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಅವರಿಗೆ ಅವರು ಪತ್ರವನ್ನು ಬರೆದಿದ್ದಾರೆ.

    ಇದನ್ನೂ ಓದಿ: ಹಾಲು ಕುಡಿಯಲು ಯಾವ ಸಮಯ ಉತ್ತಮ?: ಆಯುರ್ವೇದ ಏನು ಹೇಳುತ್ತದೆ?

    ಕರ್ನಾಟಕ ಸರ್ಕಾರ 2015ರಲ್ಲಿ 180 ಕೋಟಿ ರೂ. ಖರ್ಚು ಮಾಡಿ ಮಾಡಿದ ಸಮೀಕ್ಷೆಯ ಮೂಲ ಪ್ರತಿಯೇ ಕಳೆದುಹೋಗಿರುವುದು ಹಾಗು ಲಭ್ಯವಿರುವ ವರದಿಯಲ್ಲಿ ಸದಸ್ಯ ಕಾರ್ಯದರ್ಶಿಯ ಸಹಿ ಇಲ್ಲದೆ ಇರುವುದು ಆಯೋಗದ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಯತ್ನಾಳ್ ಹೇಳಿದ್ದಾರೆ.

    ಹಿಂದುಳಿದ ವರ್ಗಗಳ ಆಯೋಗ ಹಿಂದಿನ ಅಧ್ಯಕ್ಷರ ಆಪ್ತ ಕಾರ್ಯದರ್ಶಿಯವರಿಗೆ ನೋಟಿಸ್ ನೀಡಿ ನಂತರ ರಾಜಕೀಯ ಒತ್ತಡಕ್ಕೆ ಮಣಿದು ತನಿಖೆಯನ್ನೇ ಅರ್ಧಕ್ಕೆ ಕೈಬಿಟ್ಟಿರುವುದು ಆಶ್ಚರ್ಯದ ಸಂಗತಿ ಎಂದೂ ಅವರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

    ಈ ಸಮೀಕ್ಷೆಯ ವರದಿಯ ನೈಜತೆಯ ಬಗ್ಗೆ ತಕ್ಷಣ ತನಿಖೆ ಮಾಡಬೇಕು ಹಾಗೂ ವರದಿಯ ಮೂಲಪತ್ರಿ ಕಳೆದುಹೋಗಲು ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಯತ್ನಾಳ್ ಪತ್ರಮುಖೇನ ಆಗ್ರಹ ವ್ಯಕ್ತಪಡಿಸಿದ್ದಾರೆ.

    ರಾಜಕೀಯಕ್ಕೆ ಇಳಿಯಲಿದ್ದಾರಾ ಜೂನಿಯರ್ ಅಂಬರೀಷ್?; ರಾಜಕೀಯ ಪ್ರವೇಶದ ಕುರಿತು ಅಭಿಷೇಕ್ ಹೇಳಿದ್ದೇನು?

    ವಿಶ್ವಕಪ್ ವಿಜೇತ ಆಸ್ಟ್ರೇಲಿಯಾ: ಕಪ್ ಗೆದ್ದ ಕ್ರಿಕೆಟ್ ತಂಡದ ಹಿಂದಿರುವ ಕರಾವಳಿ ಮಹಿಳೆ ಯಾರು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts