ಡೆಂಘೆ ಹಾಟ್‌ಸ್ಪಾಟ್‌ನಲ್ಲಿ ಫಾಗಿಂಗ್ ಮಾಡಿಸಿ

dc meeting

ಶಿವಮೊಗ್ಗ: ಸಿಮ್ಸ್ ಮೆಡಿಕಲ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳಲ್ಲಿ ಡೆಂಘೆ ಕಾಣಿಸಿಕೊಂಡಿದ್ದು ಕಾಲೇಜು ಹಾಗೂ ಹಾಸ್ಟೆಲ್ ಭಾಗದಲ್ಲಿ ಲಾರ್ವಾ ಉತ್ಪತ್ತಿ ತಾಣವನ್ನು ನಾಶಪಡಿಸಬೇಕು. ಆ ಭಾಗದಲ್ಲಿ ಫಾಗಿಂಗ್ ಮಾಡಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶನಿವಾರ ಡೆಂಘೆ ನಿಯಂತ್ರಣ ಕಾರ್ಯಪಡೆಯ ಸಭೆ ನಡೆಸಿದ ಅವರು, ಇನ್ನು ವಾರಕ್ಕೊಮ್ಮೆ ಸಭೆ ನಡೆಸಿ ಡೆಂಘೆ ನಿಯಂತ್ರಣದ ಬಗ್ಗೆ ಅವಲೋಕನ ನಡೆಸಬೇಕು. ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಗ್ರಾಮೀಣ ಭಾಗದಲ್ಲಿ ಸ್ಥಳೀಯ ಸಂಸ್ಥೆ, ಪಿಡಿಒ, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ನಗರ ಭಾಗದಲ್ಲಿ ಆರೋಗ್ಯ ಕಾರ್ಯಕರ್ತರು, ಪರಿಸರ ಅಭಿಯಂತರರು ಈ ಕಾರ್ಯದಲ್ಲಿ ಕೈ ಜೋಡಿಸಬೇಕೆಂದರು.
ಡೆಂಘೆ ಪ್ರಕರಣ ಹೆಚ್ಚು ಪತ್ತೆಯಾಗುತ್ತಿರುವ ಶಿವಮೊಗ್ಗ, ಶಿಕಾರಿಪುರ ಮತ್ತು ಸಾಗರ ತಾಲೂಕುಗಳಲ್ಲಿ ಎಚ್ಚರ ವಹಿಸಬೇಕು. ಮಳೆ ಕಡಿಮೆ ಆಗುತ್ತಿದ್ದಂತೆಯೇ ಡೆಂಘೆ ಪ್ರಮಾಣ ಹೆಚ್ಚಾಗುತ್ತದೆ. ಆದ್ದರಿಂದ ಜಾಗ್ರತೆ ಅವಶ್ಯ. ಪ್ರತಿ ಗ್ರಾಪಂಗೆ ಒಂದು ಫಾಗಿಂಗ್ ಯಂತ್ರ ಸಿದ್ಧವಿರಿಸಿಕೊಳ್ಳಬೇಕು. ಎರಡಕ್ಕಿಂತ ಹೆಚ್ಚು ಪ್ರಕರಣ ಪತ್ತೆಯಾದ ಪ್ರದೇಶವನ್ನು ಡೆಂಘೆ ಹಾಟ್‌ಸ್ಪಾಟ್ ಎಂದು ಗುರುತಿಸಿ ನಾಲ್ಕು ವಾರ ಅಲ್ಲಿ ಫಾಗಿಂಗ್ ಮಾಡಬೇಕು ಎಂದು ಸೂಚಿಸಿದರು.
ಜಿಪಂ ಸಿಇಒ ಎನ್.ಹೇಮಂತ್, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಡಿಎಚ್‌ಒ ಡಾ.ನಟರಾಜ್, ಟಿಎಚ್‌ಒ ಡಾ.ಚಂದ್ರಶೇಖರ್, ಪಾಲಿಕೆ ಆಯುಕ್ತೆ ಡಾ.ಕವಿತಾ ಯೋಗಪ್ಪನವರ್, ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಗುಡದಪ್ಪ ಕಸಬಿ ಮುಂತಾದವರು ಸಭೆಯಲ್ಲಿ ಭಾಗವಹಿಸಿದ್ದರು.

Share This Article

Success Secrets: ನಿಮ್ಮ ಜೀವನದಲ್ಲಿ ಈ 4 ಸ್ಥಳಗಳಲ್ಲಿ ಎಂದಿಗೂ ಹಿಂಜರಿಯಬೇಡಿ! ಈ ಕೆಲಸ ಮಾಡಿದ್ರೆ ಸಕ್ಸಸ್‌ ಗ್ಯಾರೆಂಟಿ

ಬೆಂಗಳೂರು: ಆಚಾರ್ಯ ಚಾಣಕ್ಯರನ್ನು ಭಾರತದ ವಿದ್ವಾಂಸರಲ್ಲಿ ಒಬ್ಬರೆಂದು ಪರಿಗಣಿಸಲಾಗುತ್ತದೆ. ಆಚಾರ್ಯ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ…

Salt Benefits | ಒಂದು ತಿಂಗಳು ಉಪ್ಪು ತಿನ್ನುವುದನ್ನು ಸಂಪೂರ್ಣವಾಗಿ ನಿಲ್ಲಿಸಿದ್ರೆ ತೂಕ ನಷ್ಟ ಪಕ್ಕಾ! ಅಪಾಯವೂ ಖಂಡಿತ

ಬೆಂಗಳೂರು:  ಇತ್ತೀಚಿನ ದಿನಗಳಲ್ಲಿ ಎಲ್ಲರೂ ಒಂದಲ್ಲ ಒಂದು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆರೋಗ್ಯ ಕಾಪಾಡಿಕೊಳ್ಳಲು ಗಮನ…

Palmistry: ನಿಮ್ಮ ಅಂಗೈನಲ್ಲಿ ಈ ಚಿಹ್ನೆ ಇದ್ರೆ ನಿಮ್ಮಂಥ ಅದೃಷ್ಟವಂತರು ಯಾರೂ ಇಲ್ಲ! ಹಣ ನಿಮ್ಮನ್ನು ಹುಡುಕಿ ಬರುತ್ತೆ

ಅನೇಕ ಜನರು ತಮ್ಮ ಭವಿಷ್ಯ (prediction)ವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ…