More

    ಪರಿಹಾರದ ಹಣ ಸಾಲದ ಖಾತೆಗೆ ಸೇರಿಸಬೇಡಿ

    ರಾಯಚೂರು: ತೀವ್ರ ಬರ ಪರಿಸ್ಥಿತಿಯಿಂದಾಗಿ ರೈತರು ಸಂಕಷ್ಟದಲ್ಲಿದ್ದು, ಎಲ್ಲ ರೈತರಿಗೆ ಬರ ಪರಿಹಾರದ ಹಣ ಪಾವತಿಸಬೇಕು. ಪರಿಹಾರದ ಹಣವನ್ನು ಸಾಲದ ಖಾತೆಗೆ ಜಮಾ ಮಾಡಿಕೊಳ್ಳದಂತೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಒತ್ತಾಯಿಸಿದೆ.
    ಸಂಘಟನೆ ನಿಯೋಗ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಸೋಮವಾರ ಮನವಿ ಸಲ್ಲಿಸಿ, ರೈತರು ಮತ್ತು ಕೃಷಿ ಕಾರ್ಮಿಕರು ತೀವ್ರ ಸಂಕಷ್ಟದಲ್ಲಿದ್ದು, ಸರ್ಕಾರ ಯುದ್ದೋಪಾದಿಯಲ್ಲಿ ಬರ ಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಆಗ್ರಹಿಸಿದರು.
    ಕಳೆದ ವರ್ಷ ಬೆಳೆಗಳು ಸರಿಯಾಗಿ ಬಾರದೆ ಮೇವಿನ ಕೊರತೆ ಎದುರಾಗಿದೆ. ಆದರೆ ಜಿಲ್ಲಾಡಳಿತದಿಂದ ಮೇವು ಬ್ಯಾಂಕ್ ಆರಂಭಿಸಲಾಗಿಲ್ಲ. ಕೃಷಿ ಚಟುವಟಿಕೆಗಳು ಆರಂಭವಾಗದೆ ಕೃಷಿ ಕಾರ್ಮಿಕರು ಉದ್ಯೋಗವಿಲ್ಲದೆ ಮಹಾನಗರಗಳಿಗೆ ಗುಳೆ ಹೋಗುವಂತಾಗಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ಸಮರ್ಪಕ ಕೆಲಸ ನೀಡುತ್ತಿಲ್ಲ.
    ರೈತರು ಬೆಳೆಹಾನಿ, ಆದಾಯ ಕಡಿತ, ನಿರುದ್ಯೋಗದಿಂದಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೂಡಲೇ ಎಲ್ಲ ರೈತರಿಗೆ ಬೆಳೆ ನಷ್ಟ ಪರಿಹಾರ ಬಿಡುಗಡೆ ಮಾಡಬೇಕು. ರೈತರ ಎಲ್ಲ ಸಾಲ ಮನ್ನಾ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
    ನಿಯೋಗದಲ್ಲಿ ಸಂಘಟನೆ ಜಿಲ್ಲಾ ಕಾರ್ಯದರ್ಶಿ ಮಲ್ಲನಗೌಡ ಅಂಚೆಸುಗೂರು, ಪದಾಕಾರಿಗಳಾದ ಹುಲಿಗೆಪ್ಪ, ಅಮರೇಶ, ಆದೆಪ್ಪ, ಗೌಸ್‌ಸಾಬ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts