More

    ಸರ್ಕಾರಿ ಕೆಲಸಗಳಿಗೆ ಮಧ್ಯವರ್ತಿಗಳನ್ನು ಸಂಪರ್ಕಿಸದಿರಿ

    ಕುಶಾಲನಗರ: ಸರ್ಕಾರಿ ಕೆಲಸಗಳಿಗೆ ಮಧ್ಯವರ್ತಿಗಳ ಮೊರೆ ಹೋಗದೆ ನೇರವಾಗಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳನ್ನು ಸಂಪರ್ಕಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್‌ಗೌಡ ಸಲಹೆ ನೀಡಿದರು.

    ಗುಡ್ಡೆಹೊಸೂರಿನಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅರಣ್ಯ ಹಕ್ಕು ಪತ್ರ ವಿತರಿಸಿ ಮಾತನಾಡಿದ ಅವರು, ಗ್ರಾಮ ಮತ್ತು ಸುತ್ತಮುತ್ತಲ ಹಳ್ಳಿಗಳ ಜನರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಶೀಘ್ರ ಜನ ಸಂಪರ್ಕ ಸಭೆ ಏರ್ಪಡಿಸಲಾಗುವುದು. ಆ ಮೂಲಕ ಪ್ರತಿಯೊಬ್ಬರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಂಡು ಹಿಡಿಯಲಾಗುವುದು ಎಂದರು.

    ಅರಣ್ಯ, ಕಂದಾಯ, ಗ್ರಾಮ ಪಂಚಾಯಿತಿ ಜಂಟಿ ಸಭೆ ಸೇರಿ ಸಮಸ್ಯೆಗೆ ಸ್ಥಳದಲ್ಲಿಯೇ ಪರಿಹಾರ ಹುಡುಕುವ ಚಿಂತನೆ ಮಾಡಲಾಗಿದೆ ಎಂದು ಹೇಳಿದರು.
    ಗ್ರಾಮದ ಸುಮಾರು 126 ಜನರಿಗೆ ಹಕ್ಕು ಪತ್ರ ವಿತರಣೆ ಮಾಡಲಾಯಿತು. ಉಳಿದಂತೆ 30 ಫಲಾನುಭವಿಗಳಿಗೆ ಅರ್ಜಿಗಳ ಮರು ಪರಿಶೀಲನೆ ಮಾಡಿ ವಿತರಿಸಲಾಗುವುದು ಎಂದು ಶಾಸಕರು ಹೇಳಿದರು.

    ಕಾರ್ಯಕ್ರಮದಲ್ಲಿ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರುಕ್ಕಿಣಿ, ಉಪಾಧ್ಯಕ್ಷ ಮಾದಪ್ಪ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ.ಆರ್.ಸುಮೇಶ್, ಕಾರ್ಯದರ್ಶಿ ಕುಮಾರಸ್ವಾಮಿ, ಅರಣ್ಯ ಹಕ್ಕು ಸಮಿತಿ ಅಧ್ಯಕ್ಷೆ ಅನಿತಾ ಜಾನಪ್ಪ, ಉಪ ತಹಸೀಲ್ದಾರ್ ಮಧುಸೂದನ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸಿದ್ದೇಗೌಡ, ವಲಯ ಅರಣ್ಯಾಧಿಕಾರಿ ರತನ್‌ಕುಮಾರ್, ಉಪ ವಲಯ ಅರಣ್ಯಾಧಿಕಾರಿ ಅನಿಲ್ ಡಿಸೋಜಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಸ್.ಚಂದ್ರಶೇಖರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts