ಜಲ ನ್ಯಾಯಮಂಡಳಿ ತೀರ್ಪು ಉಲ್ಲಂಘಿಸುವ ಯೋಜನೆಗೆ ಬೇಡ ಅನುಮೋದನೆ: ದಕ್ಷಿಣ ವಲಯ ಪರಿಷತ್ ಸಭೆಯಲ್ಲಿ ಸಿಎಂ ಪ್ರತಿಪಾದನೆ

blank

ತಿರುಪತಿ: ಜಲ ನ್ಯಾಯ ಮಂಡಳಿ ತೀರ್ಪು ಉಲ್ಲಂಘಿಸಿ ಬೃಹತ್ ಮಟ್ಟದ ಶಾಶ್ವತ ಯೋಜನೆಗಳಿಗೆ ಶಾಸನಬದ್ಧ ಅನುಮೋದನೆ ನೀಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುನರುಚ್ಚರಿಸಿದರು. ಆಂಧ್ರಪ್ರದೇಶದ ತಿರುಪತಿಯಲ್ಲಿ ಇಂದು ನಡೆದ ದಕ್ಷಿಣ ವಲಯ ಪರಿಷತ್ತಿನ 29ನೇ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಾವೇರಿ, ಕೃಷ್ಣಾ ಮತ್ತು ಪೆನ್ನಾರ್ ಜಲಾನಯನ ಪ್ರದೇಶದಲ್ಲಿ ರಾಜ್ಯಕ್ಕೆ ತನ್ನ ಪಾಲಿನ ನೀರು ಹಂಚಿಕೆ ಆಗಬೇಕೆಂಬ ವಾದವನ್ನು ಅವರು ಪ್ರತಿಪಾದಿಸಿದರು.

ಅನುಮೋದನೆ ಬೇಡ: ಸಹ ಜಲಾನಯನ ಪ್ರದೇಶಗಳನ್ನು ಹೊಂದಿರುವ ರಾಜ್ಯಗಳ ಪಾಲನ್ನು ನಿರ್ಧರಿಸಲಾಗಿಲ್ಲದಿದ್ದರೂ ತಮಿಳುನಾಡು ಕಾವೇರಿ- ವಗೈ- ಗುಂಡಾರ್ ಸಂಪರ್ಕ ಕಾಮಗಾರಿ ಮುಂದುವರಿಸಿದೆ. ಇದಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಆದ್ದರಿಂದ ಕಾವೇರಿ- ವಗೈ- ಗುಂಡಾರ್ ಸಂಪರ್ಕದ ಪ್ರಸ್ತಾವನೆಯನ್ನು ಅನುಮೋದಿಸಬಾರದು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು. ಗೋದಾವರಿ, ಕಾವೇರಿ ಮತ್ತು ಇತರೆ ನದಿಗಳ ಲಿಂಕ್ ಯೋಜನೆ ಬಗ್ಗೆ ರಾಜ್ಯ ತನ್ನ ಅಭಿಪ್ರಾಯವನ್ನು ಈಗಾಗಲೇ ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಗೆ ತಿಳಿಸಿದೆ. ಕಾವೇರಿ, ಕೃಷ್ಣಾ ಮತ್ತು ಪೆನ್ನಾರ್ ಜಲಾನಯನ ಪ್ರದೇಶದಲ್ಲಿ ರಾಜ್ಯಕ್ಕೆ ತನ್ನ ಪಾಲಿನ ನೀರು ಹಂಚಿಕೆ ಆಗಬೇಕು ಎಂಬುದನ್ನು ಸ್ಪಷ್ಟವಾಗಿ ವಾದಿಸಿದರು.

ಇದನ್ನೂ ಓದಿ: ಜನವರಿ ಒಳಗೆ ಅಧಿಕಾರ ಕಳೆದುಕೊಳ್ಳಲಿದ್ದಾರಂತೆ ಬಸವರಾಜ ಬೊಮ್ಮಾಯಿ; ಅವರ ಬಳಿಕ ಒಮ್ಮೆ ಅಲ್ಲ, 2 ಸಲ ಸಿಎಂ ಬದಲಾವಣೆ!

ಕೃಷ್ಣಾ ಜಲಾಶಯದ ಮೂಲಕ ಶ್ರೀಶೈಲಂ ಜಲಾಶಯದಲ್ಲಿ ಅಪಾರ ಮೊತ್ತದ ಹೆಚ್ಚುವರಿ ನೀರನ್ನು ಬಳಸಿಕೊಂಡು ಪಲಮುರು ರಂಗಾರೆಡ್ಡಿ ಮತ್ತು ನಕ್ಕಲಗಂಡಿಯಲ್ಲಿ ಏತನೀರಾವರಿ ಯೋಜನೆಗಳನ್ನು ಕೈಗೊಳ್ಳಲು ತೆಲಂಗಾಣ ಅಥವಾ ಅಪೆಕ್ಸ್ ಮಂಡಳಿಗೆ ಅಧಿಕಾರವಿಲ್ಲ ಎಂದರು. 2050ರಲ್ಲಿ ಪರಿಶೀಲನೆಗೆ ಒಳಪಡುವ ನೆಪದಲ್ಲಿ ಉಳಿಕೆ ನೀರನ್ನು ಬಳಸುವ ತೆಲಂಗಾಣ ರಾಜ್ಯದ ರಾಜೀವ್‌ ಗಾಂಧಿ ಸಂಗಮ ಬಂಡಾ ಬ್ಯಾರೇಜ್ ನಿರ್ಮಾಣಕ್ಕೆ ಕರ್ನಾಟಕದ ವಿರೋಧವಿದೆ ಎಂದು ಖಡಕ್ಕಾಗಿ ಹೇಳಿದರು. ಉಳಿಕೆ ನೀರನ್ನು ಬಳಸಲು ಅನುಮತಿ ನೀಡಿದರೆ ಕರ್ನಾಟಕ ತನಗೆ ದೊರೆಯಬೇಕಾದ ಸಮಪಾಲಿನಿಂದ ವಂಚಿತವಾಗಲಿದೆ. ಈ ಬಗ್ಗೆ ಜಂಟಿ ಸಮೀಕ್ಷೆಯಲ್ಲಿ ರಾಜ್ಯ ಕೈಜೋಡಿಸಲು ಸಿದ್ಧವಿದೆ ಎಂದರು.

ಇದನ್ನೂ ಓದಿ: ಇಲ್ಲಿದೆ ನೋಡಿ ಅಪ್ಪು ಬಾಲ್ಯ; ಮಕ್ಕಳ ದಿನಾಚರಣೆ ಮತ್ತು ಅಪ್ಪು ಮಗನೆ..

ತುಂಗಭದ್ರಾ ನದಿಗೆ ಅಡ್ಡಲಾಗಿ ಆಂದ್ರಪ್ರದೇಶ ನಿರ್ಮಿಸುತ್ತಿರುವ ಗುಂಡ್ರವೇಲು ಯೋಜನೆಗೆ ಸಂಬಂಧಿಸಿದಂತೆ, ಕರ್ನಾಟಕದಲ್ಲಿ ಮುಳುಗಡೆ ಆಗಲಿರುವ ಗ್ರಾಮಗಳು ಮತ್ತು ಭೂಪ್ರದೇಶದ ಕುರಿತು ಜಂಟಿ ಸಮೀಕ್ಷೆಯಾಗಬೇಕು. ನ್ಯಾಯಮಂಡಳಿಗೆ ಸಲ್ಲಿಸಿರುವಂತೆ ನೀರು ಹಂಚಿಕೆಯ ವಿವರಗಳನ್ನು ಹಾಗೂ ಕೇಂದ್ರ ಸರ್ಕಾರದಿಂದ ಪಡೆದಿರುವ ಅನುಮೋದನೆಗಳ ವಿವರಗಳನ್ನು ಸಲ್ಲಿಸುವಂತೆ ಕೋರಿದರು.

ಹಂಚಿಕೆಯ ಹೊರತಾಗಿ ಕೃಷ್ಣಾ ನೀರಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಯಾವುದೇ ಯೋಜನೆಗಳಿಗೆ ಅನುಮತಿಯಿಲ್ಲ. ಕರ್ನಾಟಕ ಹಾಗೂ ನೆರೆರಾಜ್ಯಗಳ ನಡುವೆ ಅಂತರ ರಾಜ್ಯ ಪರಸ್ಪರ ಸಾರಿಗೆ ಒಪ್ಪಂದಕ್ಕೆ ಸಂಬಂಧಿಸಿದಂತೆ ತೆಲಂಗಾಣ, ಪುದುಚೆರಿ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಕೇರಳ ರಾಜ್ಯಗಳ ಒಪ್ಪಿಗೆಯನ್ನು ನಿರೀಕ್ಷಿಸಲಾಗಿದ್ದು, ಈ ಬಗ್ಗೆ ತ್ವರಿತ ಕ್ರಮಕ್ಕೆ ಮನವಿ ಮಾಡಿದರು.

ಇದನ್ನೂ ಓದಿ: ಅಪ್ಪುಗಾಗಿ ಚಿತ್ರರಂಗದಿಂದ ‘ಪುನೀತ ನಮನ’: ಎಲ್ಲಿ-ಹೇಗೆ ನಡೆಯುತ್ತೆ, ಯಾರ್ಯಾರು ಭಾಗಿ?; ಇಲ್ಲಿದೆ ವಿವರ..

ಅಂತರರಾಜ್ಯ ಗೃಹ ಇಲಾಖೆಗಳ ಸಮನ್ವಯ ಹಲವು ಅಪರಾಧಗಳನ್ನು ತಡೆಗಟ್ಟಲು ಅಗತ್ಯವಾಗಿದೆ. ಗಡಿಗಳಲ್ಲಿ ಸಂಪರ್ಕಜಾಲಗಳನ್ನು ಬಲಪಡಿಸಲು ಕೋರಿದರು. ಕರ್ನಾಟಕ ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯವಾಗಿದ್ದು, ಹೂಡಿಕೆದಾರರ ದೃಷ್ಟಿಯಿಂದ ಅಂತರರಾಜ್ಯ ದರಪಟ್ಟಿಯಲ್ಲಿನ ವ್ಯತ್ಯಾಸ ತೆಗೆದುಹಾಕುವಂತೆ ಬೊಮ್ಮಾಯಿ ಮನವಿಮಾಡಿದರು.

ಇದನ್ನೂ ಓದಿ: ದನ ಕೊಳ್ಳಲು ಹಣವಿಲ್ಲ ಎಂಬ ಚಿಂತೆಯಲ್ಲಿದ್ದವರ ಬ್ಯಾಂಕ್​ ಖಾತೆಗೆ ಬಂತು 2 ಕೋಟಿ ರೂಪಾಯಿ!; ಕಾರಣ ‘ಕೌ ಇನ್​ಸ್ಪೆಕ್ಟರ್’ ಝಾನ್ಸಿ..

ದಕ್ಷಿಣ ವಲಯ ಪರಿಷತ್ತು ಸಭೆಗಳು ನೀರು ಹಂಚಿಕೆ, ಸಾರಿಗೆ ಸಂಪರ್ಕ, ಆರೋಗ್ಯ ಮತ್ತು ವ್ಯವಹಾರಗಳನ್ನು ಒಮ್ಮತದಿಂದ ಬಗೆಹರಿಸಿಕೊಳ್ಳು ಉತ್ತಮ ವೇದಿಕೆಯಾಗಿದೆ ಎಂದು ತಿಳಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಷಾ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಜಲ ಸಂಪನ್ಮೂಲ ಇಲಾಖೆ ಎಸಿಎಸ್ ರಾಕೇಶ್ ಸಿಂಗ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಇಂಟೆಲಿಜೆನ್ಸ್ ವಿಭಾಗದ ಎಡಿಜಿಪಿ ದಯಾನಂದ ಉಪಸ್ಥಿತರಿದ್ದರು.

ಬೆಡ್​ ಕೇಳಿದ ನಟಿಗೆ ಸಿಕ್ಕಿದ್ದು ಅರ್ಧಮಂಚ; ಒಂದು ಕೊಟ್ಟು ಇನ್ನೊಂದು ಕೊಟ್ಟಿಲ್ಲ ಎಂದು ಬೇಸರ..

Share This Article

ಸಂಬಳ ಸಾಲ್ತಿಲ್ಲ! ಸಾಲ ತೀರಿಸಲು ಚಿನ್ನದ ಸಾಲ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳನ್ನು ಮಾತ್ರ ಮಾಡಬೇಡಿ | Gold Loan

Gold Loan: ಸಂಸ್ಥೆ ಕೊಡುತ್ತಿರುವ ಸಂಬಳ ನಮಗೆ ಮಾತ್ರವಲ್ಲ, ನಮ್ಮ ಸಾಲ ತೀರಿಸಲು ಸಹ ಸಾಲುತ್ತಿಲ್ಲ…

ಭಾರತದಲ್ಲಿ ಅನಾರೋಗ್ಯಕರ ಆಹಾರ ಸೇವನೆಯೇ ಹೆಚ್ಚು: ಶೇ. 56 ರೋಗಗಳಿಗೆ ಕೆಟ್ಟ ಆಹಾರ ಪದ್ಧತಿ ಕಾರಣವೆಂದ ಏಮ್ಸ್! Indians Food

Indians Food : ಭಾರತದಲ್ಲಿ ಬೊಜ್ಜು ಅಥವಾ ಸ್ಥೂಲಕಾಯತೆ ಇಂದು ಸಾಮಾನ್ಯ ಹಾಗೂ ಸಂಕೀರ್ಣ ಕಾಯಿಲೆಗಳಲ್ಲಿ…

ನೀವು ಚಿಕನ್ ಅಥವಾ ಮಟನ್​ ಲಿವರ್​ ತಿಂತಿರಾ? ಹಾಗಾದ್ರೆ ಎಚ್ಚರ! ಈ ವಿಚಾರ ನಿಮಗೆ ಗೊತ್ತಿರಲೇಬೇಕು… Liver

Liver : ಮಾಂಸಾಹಾರ ಬಹುತೇಕರ ಪ್ರಿಯವಾದ ಆಹಾರ. ಬೇರೆ ಯಾವುದನ್ನು ಬೇಕಾದರೂ ಬಿಡುತ್ತೇನೆ ಆದರೆ, ಒಂದು…