More

    ಕುಡಿಯುವ ನೀರಿಗೆ ತೊಂದರೆಯಾಗಲಿರಲಿ

    ಲಿಂಗದಹಳ್ಳಿ: ಬರಗಾಲದಿಂದ ಕೆರೆ ಕಟ್ಟೆಗಳಲ್ಲಿ ನೀರು ಬತ್ತಿ ಹೋಗಿದ್ದು, ಮುಂದಿನ ಕೆಲವು ದಿನಗಳಲ್ಲಿ ಮಳೆ ಬಾರದಿದ್ದರೆ ಜನ ಜಾನುವಾರುಗಳಿಗೆ ಕುಡಿಯಲು ಸಹ ನೀರು ಸಿಗದಂತಹ ಪರಿಸ್ಥಿತಿ ಬರುವ ಎದುರಾಗಲಿದ್ದು, ತಾಲೂಕು ಆಡಳಿತ ಗ್ರಾಮಗಳಲ್ಲಿ ಸಮರ್ಪಕ ನೀರಿನ ವ್ಯವಸ್ಥೆ ಮಾಡಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು. ಮಂಗಳವಾರ ಲಿಂಗದಹಳ್ಳಿ ಹೋಬಳಿಯ ಯರದಂಕಲೂ ಗ್ರಾಮದಲ್ಲಿ 12 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಅಂಗನವಾಡಿ ಕೇಂದ್ರ ಕಟ್ಟಡ, ಉಡೇವಾ ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ 33 ಲಕ್ಷ ರೂ. ವೆಚ್ಚದ ಎರಡು ವಿವೇಕ ಕೊಠಡಿ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೆಚ್ಚುವರಿ ಕೊಠಡಿ ಮತ್ತು ಅಕ್ಷರ ದಾಸೋಹ ಕೊಠಡಿ ಸೇರಿದಂತೆ ವಿವಿಧ ಕಾಮಗಾರಿ ಲೋಕಾರ್ಪಣೆ ಮಾಡಿ ಮಾತನಾಡಿದರು. ಮುಂದಿನ ದಿನಗಳಲ್ಲಿ ಜಲ ಜೀವನ್ ಮಿಷನ್ ಯೋಜನೆ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಭದ್ರಾ ಮೇಲ್ದಂಡೆ ಯೋಜನೆ ಮೂಲಕ ಕೆರೆಗಳಿಗೆ ನೀರು ತುಂಬಿಸುವ ಕಾರ್ಯವನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು. ಕ್ಷೇತ್ರಾದಾದ್ಯಂತ ರಾಜ್ಯಪಾಲರು ಸೇರಿದಂತೆ ವಿವಿಧ ಇಲಾಖೆಗಳ ಹೆಸರಿನಲ್ಲಿ ನೋಂದಣಿಯಾಗಿರುವ 15 ಕ್ಕೂ ಹೆಚ್ಚು ಗ್ರಾಮಗಳಿದ್ದು, ಅದರಲ್ಲಿ ಯರದಂಕಲು ಗ್ರಾಮವು ಸಹ ಒಂದಾಗಿದೆ. ಸರ್ಕಾರದಿಂದ ಈ ಗ್ರಾಮಗಳ ಗ್ರಾಮಸ್ಥರಿಗೆ ನಿವೇಶನ ನೀಡಿ ಹಕ್ಕುಪತ್ರ ಮತ್ತು ಸಿಸಿ ರಸ್ತೆ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts