More

    ಕೂಲಿ ಕಾರ್ಮಿಕರಿಗೆ ತೊಂದರೆಯಾಗದಿರಲಿ

    ರಟ್ಟಿಹಳ್ಳಿ: ನರೇಗಾ ಕೂಲಿ ಕಾರ್ಮಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಈ ರೀತಿಯಾಗದಂತೆ ನೋಡಿಕೊಳ್ಳಬೇಕು. ಮುಂದಿನ ದಿನಗಳಲ್ಲಿ 3 ತಿಂಗಳಿಗೊಮ್ಮೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

    ತಾಲೂಕಿನ ಶಿರಗಂಬಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸತ್ತಗೀಹಳ್ಳಿ ಗ್ರಾಮದಲ್ಲಿ ಜಿಪಂ ಹಾವೇರಿ, ತಾಪಂ ರಟ್ಟಿಹಳ್ಳಿ ಮತ್ತು ಗ್ರಾಪಂ ಶಿರಗಂಬಿ ಸಹಯೋಗದೊಂದಿಗೆ ಶನಿವಾರ ಆಯೋಜಿಸಿದ್ದ ನರೇಗಾ ಯೋಜನೆಯ ಗ್ರಾಮ ಆರೋಗ್ಯ ಅಭಿಯಾನ ಮತ್ತು ರೋಜಗಾರ್ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.

    ನರೇಗಾ ಯೋಜನೆಯಡಿ ಪ್ರತಿನಿತ್ಯ ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ಸ್ಥಳದಲ್ಲಿಯೇ ಆರೋಗ್ಯ ತಪಾಸಣೆ ನಡೆಸುವುದರೊಂದಿಗೆ ಅವರಿಗೆ ಅವಶ್ಯವಿರುವ ಚಿಕಿತ್ಸೆ ಮತ್ತು ಔಷಧೋಪಚಾರ ಮಾಡಲಾಗುತ್ತಿದೆ. ನರೇಗಾ ಯೋಜನೆಯ ಈ ವಿನೂತನ ಕಾರ್ಯಕ್ರಮ ಕಾರ್ಮಿಕರ ಆರೋಗ್ಯ ಸುಧಾರಣೆಗೆ ಸಹಕಾರಿಯಾಗಲಿದೆ ಎಂದರು.

    ಸತ್ತಗೀಹಳ್ಳಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಕೆರೆ ಅಭಿವೃದ್ಧಿಪಡಿಸುವ ಕಾಮಗಾರಿ ಪ್ರಗತಿಯಲ್ಲಿದೆ. ಕೆಲಸ ನಿರ್ವಹಿಸುತ್ತಿದ್ದ 80ಕ್ಕೂ ಹೆಚ್ಚು ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಿ, ಅಗತ್ಯ ಸಲಹೆ ನೀಡಲಾಯಿತು.

    ತಾಪಂ ಮಾಜಿ ಅಧ್ಯಕ್ಷ ಮಹೇಶ ಗುಬ್ಬಿ, ಸುರೇಶಗೌಡ ಸೊರಟೂರ, ಗ್ರಾಪಂ ಸದಸ್ಯರಾದ ಧರ್ಮಗೌಡ ಸೊರಟೂರ, ಸುರೇಶಪ್ಪ ಬಣಕಾರ, ರವಿ ಮುದ್ನಳ್ಳಿ, ಬೂದಿಗೌಡ ಮರಿಗೌಡ್ರ, ಲೋಕೇಶ ಬಂಡಿಮನಿ, ಪಿಡಿಒ ನಾಗರತ್ನ ಮುದ್ದಪ್ಪಳವರ, ಕಾರ್ಯದರ್ಶಿ ಅಶ್ವಿನಿ ಕೆ.ಎಚ್., ಮಾರುತಿ, ಅಶಾ ಮಜ್ಜಿಗೇರ, ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts