ಸಿರಗುಪ್ಪ: ಅಧಿಕಾರಿಗಳು ಸಾರ್ವಜನಿಕರನ್ನು ಪದೇ ಪದೇ ಕಚೇರಿಗಳಿಗೆ ಅಲೆದಾಡಿಸದೆ, ನಿಗದಿತ ಅವಧಿಯಲ್ಲಿ ಕೆಲಸ ಮಾಡಿಕೊಡಬೇಕು ಎಂದು ಜಿಲ್ಲಾ ಲೋಕಾಯುಕ್ತ ಎಸ್ಪಿ ಶಶಿಧರ ಹೇಳಿದರು.
ನಗರದ ತಾಲೂಕು ಕಚೇರಿಯಲ್ಲಿ ಬಳ್ಳಾರಿ ಲೋಕಾಯುಕ್ತ ವತಿಯಿಂದ ಗುರುವಾರ ಏರ್ಪಡಿಸಿದ್ದ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಂದಾಯ, ಶಿಕ್ಷಣ, ಆರೋಗ್ಯ, ನಗರಸಭೆ, ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆ, ತಾಪಂ ಕಚೇರಿಗಳಲ್ಲಿ ಸರಿಯಾಗಿ ಕೆಲಸ ಮಾಡದೇ ಅಧಿಕಾರಿಗಳು ಸಾರ್ವಜನಿಕರನ್ನು ಅಲೆದಾಡಿಸುತ್ತಿದ್ದಾರೆ ಎಂಬ ದೂರು ಬಂದಿವೆ. ಆದ್ದರಿಂದ ಎಲ್ಲಾ ಇಲಾಖೆಯ ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸಿ, ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಬೇಕು ಎಂದರು.
ಇದನ್ನೂ ಓದಿ: ಜೈಲಿಗೆ ಹೋಗಿ ಬಂದವರಿಗೆಲ್ಲ ಅಧಿಕಾರ: ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ವಿಷಾದ
ಸಾರ್ವಜನಿಕರು ವಿವಿಧ ದೂರುಗಳ ಮನವಿ ಸಲ್ಲಿಸಿದರು. ಸಿಪಿಐ ಸಂಗಮೇಶ, ತಹಸೀಲ್ದಾರ್ ಎಚ್.ವಿಶ್ವನಾಥ, ತಾಪಂ ಇಒ ಎಸ್.ಪವನ್‌ಕುಮಾರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಇದ್ದರು