More

    ವಿದ್ಯಾರ್ಥಿಗಳಿಗೆ ಒತ್ತಡ ಹೇರಬೇಡಿ

    ಶಿವಮೊಗ್ಗ: ನಗರದಲ್ಲಿ ಏರ್ಪಡಿಸಿರುವ ಯುವನಿಧಿ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸುವಂತೆ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರಲಾಗುತ್ತಿದೆ. ವಿದ್ಯಾರ್ಥಿಗಳನ್ನು ಯಾವ ಕಾರಣಕ್ಕೂ ಬಳಸಿಕೊಳ್ಳಬಾರದು ಎಂದು ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ವಿಷ್ಣುಮೂರ್ತಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

    ಅತಿಥಿ ಉಪನ್ಯಾಸಕರ ಸಮಸ್ಯೆಯಿಂದಾಗಿ ಕೆಲವು ತಿಂಗಳಿಂದ ತರಗತಿಗಳು ಸಮರ್ಪಕವಾಗಿ ನಡೆದಿಲ್ಲ. ಇದರಿಂದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಹಿನ್ನಡೆ ಅನುಭವಿಸುತ್ತಿದ್ದಾರೆ. ನಿರುದ್ಯೋಗಿಗಳಿಗೆ ಭತ್ಯೆ ನೀಡುವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗವಹಿಸಬೇಕಾದ ಔಚಿತ್ಯವೇನು ಎಂದು ಎಬಿವಿಪಿ ಕಾರ್ಯಕರ್ತರು ಪ್ರಶ್ನಿಸಿದರು.
    ಜ.12ರಂದು ವಿವೇಕಾನಂದ ಜಯಂತಿ. ಅವರು ಇಡೀ ರಾಷ್ಟ್ರಕ್ಕೆ ಪ್ರೇರಣೆಯಾಗಿದ್ದಾರೆ. ಯುವಕರು ಎಂದಿಗೂ ಪರಾವಲಂಬಿಗಳಾಗಬಾರದು. ಪುರುಷ ಸಿಂಹಗಳಾಗಬೇಕು ಎಂದು ವಿವೇಕಾನಂದರು ಕರೆ ನೀಡಿದ್ದರು. ಈಗ ಸರ್ಕಾರ ವಿವೇಕಾನಂದರ ಆಶಯಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ನಿರುದ್ಯೋಗ ಭತ್ಯೆ ನೀಡುವ ಮೂಲಕ ವಿದ್ಯಾರ್ಥಿಗಳು ಪರಾವಲಂಬಿಗಳಾಗುವಂತೆ ಮಾಡುತ್ತಿದೆ ಎಂದು ದೂರಿದರು.
    ಮನವಿ ಸಲ್ಲಿಕೆ ವೇಳೆ ಎಬಿವಿಪಿ ದಕ್ಷಿಣ ಪ್ರಾಂತ ಕಾರ್ಯದರ್ಶಿ ಎಚ್.ಕೆ.ಪ್ರವೀಣ್, ಶಿವಮೊಗ್ಗ ನಗರ ಕಾರ್ಯದರ್ಶಿ ರಘನಂದನ್, ಸಚಿನ್, ಅಭಿಷೇಕ್, ವರುಣ್, ಲೋಹಿತ್, ಸಿಂಚನಾ, ಪ್ರಜ್ಞಾ, ಖುಷಿ, ಕೃತ್ತಿಕಾ ಮುಂತಾದವರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts