

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ ಏನಾಗುತ್ತದೆ? ಉದ್ಯೋಗ ಸಿಗುತ್ತದೆಯೇ ಅಥವಾ ಇಲ್ಲವೇ? ಮದುವೆ ಆಗುತ್ತಾ? ಜೀವನದಲ್ಲಿ ಸೆಟಲ್ ಆಗ್ತೀನಾ? ಎಂಬಿತ್ಯಾದಿ ವಿಚಾರಗಳನ್ನು ತಿಳಿದುಕೊಳ್ಳುವ ಆಸಕ್ತಿಯನ್ನು ಜನರು ತೋರಿಸುತ್ತಾರೆ. ಆದರೆ, ಕೆಲವರಿಗೆ ಈ ಜ್ಯೋತಿಷ್ಯದ ಮೇಲೆ ನಂಬಿಕೆ ಇರುವುದಿಲ್ಲ. ಆದರೂ ಬಹುತೇಕ ಮಂದಿ ಜಾತಕವನ್ನು ನಂಬುತ್ತಾರೆ. ಈ ಕಾರಣಕ್ಕೆ ಜ್ಯೋತಿಷಿಗಳಿಗೆ ತುಂಬಾ ಬೇಡಿಕೆ ಇದೆ.
ಅಂದಹಾಗೆ ನಮ್ಮ ಗ್ರಹಗತಿ ಆಧಾರದ ಮೇಲೆ ನಮ್ಮ ಜೀವನದ ಆಗು-ಹೋಗುಗಳನ್ನು ತಿಳಿದುಕೊಳ್ಳುವ ನಿಟ್ಟಿನಲ್ಲಿ ಜ್ಯೋತಿಷ್ಯ ಶಾಸ್ತ್ರ ಬಹಳ ಮುಖ್ಯವಾಗಿದೆ. ಜ್ಯೋತಿಷ್ಯದಲ್ಲಿ ಹಲವು ವಿಧಾನಗಳಿರುವುದು ನಿಮಗೆಲ್ಲರಿಗೂ ಗೊತ್ತೇ ಇದೆ. ಅದರಲ್ಲಿ ಹಸ್ತ ಸಾಮುದ್ರಿಕಾ ಕೂಡ ಒಂದು. ಹಸ್ತ ಸಾಮುದ್ರಿಕ ಎಂದರೆ ಹಸ್ತದ ಮೇಲಿನ ರೇಖೆಗಳ ಆಧಾರದ ಮೇಲೆ ಭವಿಷ್ಯವನ್ನು ಊಹಿಸುವುದು. ಈ ಹಸ್ತಸಾಮುದ್ರಿಕ ಶಾಸ್ತ್ರವನ್ನು ನಂಬುವ ಅನೇಕ ಜನರಿದ್ದಾರೆ. ಅವರಲ್ಲಿ ಸಾಮಾನ್ಯ ನಾಗರಿಕರಷ್ಟೇ ಅಲ್ಲ ಸೆಲೆಬ್ರಿಟಿಗಳು ಕೂಡ ಇದ್ದಾರೆ.
ನಮ್ಮ ಅಂಗೈನಲ್ಲಿ ವಿವಿಧ ರೀತಿಯ ರೇಖೆಗಳು ಅಥವಾ ಗೀರುಗಳಿವೆ. ಈ ಗೆರೆಗಳಿಂದಾಗಿ ಕೆಲವೊಂದು ಚಿಹ್ನೆಗಳು ಕೂಡ ರಚನೆಯಾಗಿವೆ. ಒಬ್ಬೊಬ್ಬರಲ್ಲೂ ಒಂದೊಂದು ರೀತಿಯ ಚಿಹ್ನೆಗಳಿರುತ್ತವೆ. ಕೆಲವರಲ್ಲಿ ಮೀನಿನ ಆಕಾರವೂ ಕೂಡ ಇರುತ್ತದೆ. ಅಂಗೈನಲ್ಲಿ ಮೀನಿನ ಗುರುತು ಹೊಂದಿರುವುದರ ಅರ್ಥ ಏನೆಂದು ನಾವೀಗ ತಿಳಿದುಕೊಳ್ಳೋಣ.
ಅಂಗೈಯಲ್ಲಿರುವ ಮೀನಿನ ಚಿಹ್ನೆಯು ದೇವರ ಆಶೀರ್ವಾದವನ್ನು ಸೂಚಿಸುತ್ತದೆ. ಇದು ಅಂಗೈನಲ್ಲಿ ವಿವಿಧ ಆಕಾರಗಳಲ್ಲಿ ಇರಬಹುದು. ಆದರೆ, ಒಂದು ನಿರ್ದಿಷ್ಟ ಆಕಾರದಲ್ಲಿ, ನಿರ್ದಿಷ್ಟ ಸ್ಥಳದಲ್ಲಿ ಇದ್ದರೆ ಅತ್ಯಂತ ಮಂಗಳಕರ ಎಂದು ಪರಿಗಣಿಸಲಾಗಿದೆ.
ಅಂಗೈನಲ್ಲಿ ಶನಿ ಪರ್ವತದಲ್ಲಿ ಮೇಲೆ ಲಂಬಾಕಾರದ ಮೀನಿನ ಚಿಹ್ನೆ ಕಂಡುಬಂದರೆ, ಅದನ್ನು ಅಸಾಧಾರಣವಾದ ಅಪರೂಪದ ಚಿಹ್ನೆ ಎಂದು ಪರಿಗಣಿಸಲಾಗುತ್ತದೆ. ಈ ಚಿಹ್ನೆಯನ್ನು ಹೊಂದಿರುವ ವ್ಯಕ್ತಿಗಳು ತುಂಬಾ ಶ್ರಮಜೀವಿಗಳು ಮತ್ತು ಆಗಾಗ ತಮ್ಮ ಕ್ಷೇತ್ರಗಳಲ್ಲಿ ಪ್ರಬಲ ವ್ಯಕ್ತಿಗಳಾಗುತ್ತಾರೆ. ಅವರು ಉದ್ಯೋಗಕ್ಕಿಂತ ಹೆಚ್ಚಾಗಿ ವ್ಯಾಪಾರದ ಕಡೆಗೆ ಹೆಚ್ಚು ಒಲವು ತೋರುತ್ತಾರೆ. ಪ್ರಭಾವಿ ಜನರಿಂದ ಬೆಂಬಲವನ್ನು ಪಡೆಯುತ್ತಾರೆ ಮತ್ತು 30 ವರ್ಷಗಳ ನಂತರ ಪ್ರಯೋಜನಗಳನ್ನು ಅನುಭವಿಸುತ್ತಾರೆ. ಈ ಜನರು ಆಸ್ತಿಗೆ ಸಂಬಂಧಿಸಿದ ವ್ಯವಹಾರಗಳಾದ ಭೂಮಿ, ರಿಯಲ್ ಎಸ್ಟೇಟ್, ಕಾರುಗಳು ಇತ್ಯಾದಿಗಳ ಕಡೆ ಗಮನ ಹರಿಸುತ್ತಾರೆ. ಅಲ್ಲದೆ, ಹೆಚ್ಚಿನ ಯಶಸ್ಸನ್ನು ಸಹ ಪಡೆಯುತ್ತಾರೆ.
ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು, ಜ್ಯೋತಿಷಿಗಳು, ಪಂಚಾಂಗಗಳು, ನಂಬಿಕೆಗಳು ಹಾಗೂ ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದನ್ನು ವಿಜಯವಾಣಿ ವೆಬ್ಸೈಟ್ ಜವಾಬ್ದಾರರಾಗಿರುವುದಿಲ್ಲ.