ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ ಏನಾಗುತ್ತದೆ? ಉದ್ಯೋಗ ಸಿಗುತ್ತದೆಯೇ ಅಥವಾ ಇಲ್ಲವೇ? ಮದುವೆ ಆಗುತ್ತಾ? ಜೀವನದಲ್ಲಿ ಸೆಟಲ್ ಆಗ್ತೀನಾ? ಎಂಬಿತ್ಯಾದಿ ವಿಚಾರಗಳನ್ನು ತಿಳಿದುಕೊಳ್ಳುವ ಆಸಕ್ತಿಯನ್ನು ಜನರು ತೋರಿಸುತ್ತಾರೆ. ಆದರೆ, ಕೆಲವರಿಗೆ ಈ ಜ್ಯೋತಿಷ್ಯದ ಮೇಲೆ ನಂಬಿಕೆ ಇರುವುದಿಲ್ಲ. ಆದರೂ ಬಹುತೇಕ ಮಂದಿ ಜಾತಕವನ್ನು ನಂಬುತ್ತಾರೆ. ಈ ಕಾರಣಕ್ಕೆ ಜ್ಯೋತಿಷಿಗಳಿಗೆ ತುಂಬಾ ಬೇಡಿಕೆ ಇದೆ.
ಅಂದಹಾಗೆ ನಮ್ಮ ಗ್ರಹಗತಿ ಆಧಾರದ ಮೇಲೆ ನಮ್ಮ ಜೀವನದ ಆಗು-ಹೋಗುಗಳನ್ನು ತಿಳಿದುಕೊಳ್ಳುವ ನಿಟ್ಟಿನಲ್ಲಿ ಜ್ಯೋತಿಷ್ಯ ಶಾಸ್ತ್ರ ಬಹಳ ಮುಖ್ಯವಾಗಿದೆ. ಜ್ಯೋತಿಷ್ಯದಲ್ಲಿ ಹಲವು ವಿಧಾನಗಳಿರುವುದು ನಿಮಗೆಲ್ಲರಿಗೂ ಗೊತ್ತೇ ಇದೆ. ಅದರಲ್ಲಿ ಹಸ್ತ ಸಾಮುದ್ರಿಕಾ ಕೂಡ ಒಂದು. ಹಸ್ತ ಸಾಮುದ್ರಿಕ ಎಂದರೆ ಹಸ್ತದ ಮೇಲಿನ ರೇಖೆಗಳ ಆಧಾರದ ಮೇಲೆ ಭವಿಷ್ಯವನ್ನು ಊಹಿಸುವುದು. ಈ ಹಸ್ತಸಾಮುದ್ರಿಕ ಶಾಸ್ತ್ರವನ್ನು ನಂಬುವ ಅನೇಕ ಜನರಿದ್ದಾರೆ. ಅವರಲ್ಲಿ ಸಾಮಾನ್ಯ ನಾಗರಿಕರಷ್ಟೇ ಅಲ್ಲ ಸೆಲೆಬ್ರಿಟಿಗಳು ಕೂಡ ಇದ್ದಾರೆ.
ನಮ್ಮ ಅಂಗೈನಲ್ಲಿ ವಿವಿಧ ರೀತಿಯ ರೇಖೆಗಳು ಅಥವಾ ಗೀರುಗಳಿವೆ. ಈ ಗೆರೆಗಳಿಂದಾಗಿ ಕೆಲವೊಂದು ಚಿಹ್ನೆಗಳು ಕೂಡ ರಚನೆಯಾಗಿವೆ. ಒಬ್ಬೊಬ್ಬರಲ್ಲೂ ಒಂದೊಂದು ರೀತಿಯ ಚಿಹ್ನೆಗಳಿರುತ್ತವೆ. ಕೆಲವರಲ್ಲಿ ಸ್ವಸ್ತಿಕ ಆಕಾರವೂ ಕೂಡ ಇರುತ್ತದೆ. ಅಂಗೈನಲ್ಲಿ ಸ್ವಸ್ತಿಕ ಗುರುತು ಹೊಂದಿರುವುದರ ಅರ್ಥ ಏನೆಂದು ನಾವೀಗ ತಿಳಿದುಕೊಳ್ಳೋಣ.
ಅಂಗೈಯಲ್ಲಿ ಸ್ವಸ್ತಿಕ ಚಿಹ್ನೆಯನ್ನು ಯಾವುದೇ ಸ್ಥಳದಲ್ಲಿ ಮತ್ತು ಯಾವುದೇ ಕೋನದಲ್ಲಿ ಕಾಣಬಹುದು. ಸ್ವಸ್ತಿಕ ಚಿಹ್ನೆಯನ್ನು ಹೊಂದಿರುವ ವ್ಯಕ್ತಿಯು ರಾಜಯೋಗವನ್ನು ಆನಂದಿಸುತ್ತಾನೆ. ಈ ವ್ಯಕ್ತಿಗಳು ಯಾವುದೇ ಕ್ಷೇತ್ರ ಅಥವಾ ಪ್ರದೇಶದಲ್ಲಿ ಅತ್ಯಂತ ವೇಗವಾಗಿ ಮತ್ತು ಕಡಿಮೆ ಶ್ರಮದೊಂದಿಗೆ ಯಶಸ್ಸನ್ನು ಸಾಧಿಸಬಹುದು. ಈ ಚಿಹ್ನೆ ಹೊಂದಿರುವ ಕೆಲವರು ಅದೃಷ್ಟವಂತರು ಮಾತ್ರವಲ್ಲದೆ ಇತರರಿಗೆ ಮತ್ತು ಇಡೀ ಸಮಾಜಕ್ಕೆ ಅದೃಷ್ಟವನ್ನು ತರುತ್ತಾರೆ. ಅಲ್ಲದೆ, ಇವರು ದಾನ ಮಾಡುತ್ತಾರೆ ಮತ್ತು ಸಮಾಜಕ್ಕೆ ಸೇವೆ ಮಾಡುವ ಗುಣವನ್ನು ಹೊಂದಿರುತ್ತಾರೆ.
ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು, ಜ್ಯೋತಿಷಿಗಳು, ಪಂಚಾಂಗಗಳು, ನಂಬಿಕೆಗಳು ಹಾಗೂ ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದನ್ನು ವಿಜಯವಾಣಿ ವೆಬ್ಸೈಟ್ ಜವಾಬ್ದಾರರಾಗಿರುವುದಿಲ್ಲ.
ನಿಮ್ಮ ಮನೆಯಲ್ಲಿ ಮರಿ ಹಲ್ಲಿ ಇದ್ರೆ ಈ ಒಂದು ತಪ್ಪು ಮಾತ್ರ ಮಾಡ್ಬೇಡಿ: ಮಾಡಿದ್ರೆ ಈ ಗಂಡಾಂತರ ಫಿಕ್ಸ್!
ನಿಮ್ಮ ಅಂಗೈನಲ್ಲಿ ಮೀನಿನ ಚಿಹ್ನೆ ಇದ್ರೆ ಏನಾಗುತ್ತೆ ಗೊತ್ತಾ? ಇಲ್ಲಿದೆ ನೋಡಿ ಅಚ್ಚರಿಯ ಸಂಗತಿ…