25.7 C
Bangalore
Sunday, December 15, 2019

ಜಮೀನು ದಾಖಲೆ ತಿದ್ದುಪಡಿಗಾಗಿ ಐಎಎಸ್​ ಅಧಿಕಾರಿಯ ಸೋಗು ಹಾಕಿದವ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ?

Latest News

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ – ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ಉಪ ಮುಖ್ಯಮಂತ್ರಿ ಹುದ್ದೆ ಸೃಜಿಸಲಾಗುತ್ತಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮುಂದಿನ ಸಚಿವ ಸಂಪುಟದ ವಿಸ್ತರಣೆ, ಬದಲಾವಣೆಯನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು...

ಮೊಬೈಲ್ ಹಾಳು ಮಾಡಿದ್ದಕ್ಕೆ ಸೋದರ ಮಾವನೇ ಬಾಲಕಿಗೆ ಚಾಕು ಇರಿದು ಹತ್ಯೆ

ಶಿವಮೊಗ್ಗ: ಮೊಬೈಲ್ ವಿಚಾರದಲ್ಲಿ ಭಾನುವಾರ ಸೋದರ ಮಾವನೇ ಬಾಲಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗಾಡಿಕೊಪ್ಪದಲ್ಲಿ ನಡೆದಿದೆ.5 ವರ್ಷದ ರಂಜನಿ ಹತ್ಯೆಯಾದ...

ರಾಮನಗರ: ಜಮೀನು ದಾಖಲೆ ಸರಿಪಡಿಸಿಕೊಳ್ಳಲು ಐಎಎಸ್​ ಅಧಿಕಾರಿ ಸೋಗಿನಲ್ಲಿ ಬಂದಿದ್ದವನನ್ನು ಚೆನ್ನಪಟ್ಟಣ ಪೊಲೀಸರು ಬಂಧಿಸಿದ್ದಾರೆ. ಈತನಿಗೆ ಸಹಕರಿಸಿದ ಇನ್ನೂ ಮೂವರನ್ನೂ ವಶಕ್ಕೆ ಪಡೆದಿದ್ದಾರೆ.

ಚೆನ್ನಪಟ್ಟಣ ತಾಲೂಕಿನ ಬೆಳಕೆರೆ ಗ್ರಾಮದ ಗೋಮಾಳ ಜಮೀನಿಗೆ ಸಂಬಂಧಿಸಿದಂತೆ ತಾಲೂಕು ಕಚೇರಿಯಲ್ಲಿ ವಿವಾದ ಇತ್ತು. ಈ ನಕಲಿ ಐಎಎಸ್​ ಅಧಿಕಾರಿ ಇದೇ ವಿಚಾರವನ್ನು ಪಂಚಾಯಿತಿಯ ವಿಎ ಜತೆ ಫೋನ್​ನಲ್ಲಿ ಮಾತನಾಡಿದ್ದ.

ಅಲ್ಲದೆ, ನಾನು ಮಹಮ್ಮದ್​ ಸಲ್ಮಾನ್​, ವಿಧಾನಸೌಧದಲ್ಲಿ ಐಎಎಸ್​ ಅಧಿಕಾರಿ ಎಂದು ಹೇಳಿಕೊಂಡಿದ್ದ. ಬೆಳಕೆರೆ ಗ್ರಾಮದ ಗೋಮಾಳದ ಪಹಣಿ ತಿದ್ದುಪಡಿ ಯಾಕೆ ಮಾಡಿಲ್ಲ. ಅರ್ಜಿದಾರರು ನನ್ನ ಕಚೇರಿಗೆ ಬಂದು ದೂರು ನೀಡಿದ್ದಾರೆ. ಉತ್ತರ ಕೊಡಿ ಎಂದು ಪ್ರಶ್ನಿಸಿದ್ದ.

ಅಷ್ಟಕ್ಕೇ ಸುಮ್ಮನಾಗದೆ, ನಿನ್ನೆ ಚೆನ್ನಪಟ್ಟಣದ ಪ್ರವಾಸಿ ಮಂದಿರಕ್ಕೆ ಆಗಮಿಸಿ ಪಹಣಿ ತಿದ್ದುಪಡಿ ಸಂಬಂಧ ಅಧಿಕಾರಿಗಳನ್ನು ಅಲ್ಲಿಗೆ ಕರೆಸಿಕೊಂಡಿದ್ದ. ಜಮೀನು ದಾಖಲೆಗಳನ್ನೂ ತರುವಂತೆ ತಾಕೀತು ಮಾಡಿದ್ದ. ಈತ ತನ್ನ ಕಾರಿನ ಮೇಲೆ ಕೂಡ ಗವರ್ನಮೆಂಟ್​ ಆಫ್​ ಕರ್ನಾಟಕ ಎಂದು ಕೂಡ ಬರೆಸಿಕೊಂಡು ಅದೇ ಕಾರಿನಲ್ಲಿಯೇ ಪ್ರವಾಸಿಮಂದಿರಕ್ಕೆ ಬಂದಿದ್ದ.

ಆದರೆ ಅನುಮಾನಗೊಂಡ ಅಧಿಕಾರಿಗಳು ಚೆನ್ನಪಟ್ಟಣ ತಹಸೀಲ್ದಾರ್​ ಸುದರ್ಶನ್ ಅವರ ಗಮನಕ್ಕೆ ತಂದಿದ್ದಾರೆ. ನೀವು ಯಾವ ಬ್ಯಾಚ್​ನ ಅಧಿಕಾರಿ ಎಂದು ತಹಸೀಲ್ದಾರ್​ ಸುದರ್ಶನ್​ ನಕಲಿ ಅಧಿಕಾರಿಯ ಬಳಿ ಪ್ರಶ್ನಿಸಿದಾಗ ಅಸಮರ್ಪಕ ಉತ್ತರ ಕೊಟ್ಟ ಹಿನ್ನೆಲೆಯಲ್ಲಿ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಚೆನ್ನಪಟ್ಟಣ ಎಸ್​ಪಿ ಕೆ.ರಾಮರಾಜನ್​ ನೇತೃತ್ವದ ತಂಡ ನಕಲಿ ಐಎಎಸ್​ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಕಾರನ್ನೂ ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...