More

    ಬಿಜೆಪಿ ಸುಳ್ಳು ರಾಮಯ್ಯ ಟೀಕೆಗೆ ಸಿದ್ದರಾಮಯ್ಯ ಕೊಟ್ಟ ರಿಯಾಕ್ಷನ್ ಏನು ಗೊತ್ತಾ?

    ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣಾ ಕಣ ರಂಗೇರಿದೆ. ಬಿಸಿಲಿನ ಧೆಗೆಯಲ್ಲಿ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಯಾವ ಪಕ್ಷ ಕೇಂದ್ರದಲ್ಲಿ ಅಧಿಕಾರ ನಡೆಸಬೇಕು, ಯಾರ ನೇತೃತ್ವ ದೇಶವನ್ನು ಮುನ್ನೆಡಸಲು ಸಮರ್ಥವಾಗಿದೆ, ಯಾವ ಪಕ್ಷದ ನಾಯಕರು ಪ್ರಾಮಾಣಿಕರಾಗಿದ್ದಾರೆ ಎಂಬ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

    ಇದನ್ನೂ ಓದಿ: ಹಿಂದೂ ವಿವಾಹಕ್ಕೆ ಕನ್ಯಾದಾನ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್‌ ತೀರ್ಪು

    ತಮ್ಮ ಎಕ್ಸ್​ ಖಾತೆಯಲ್ಲಿ ಟ್ಟೀಟ್​ ಮಾಡಿರುವ ಸಿಎಂ ಸಿದ್ದರಾಮಯ್ಯ ರಾಜ್ಯ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ರಾಜ್ಯ ಬಿಜೆಪಿ ನಾಯಕರೇ ನಮ್ಮ ಸರ್ಕಾರ ಸುಭದ್ರವಾಗಿದೆ, ದಿವಾಳಿಯಾಗಿರುವುದು ನಿಮ್ಮ ಬುದ್ದಿಯೇ ಹೊರತು ನಮ್ಮ ರಾಜ್ಯ ಅಲ್ಲ. ದಿನಕ್ಕೊಂದು ಸುಳ್ಳು ಹೇಳುತ್ತಾ, ಆ ಸುಳ್ಳು ಬಯಲಾದಾಗ ಮತ್ತೆ ಅದನ್ನು ಸಮರ್ಥಿಸಲು ಇನ್ನೊಂದಿಷ್ಟು ಸುಳ್ಳುಗಳನ್ನು ಸೃಷ್ಟಿಸುತ್ತಾ ನಿಮ್ಮನ್ನು ನೀವೇ ಬತ್ತಲೆ ಮಾಡಿಕೊಳ್ಳಬೇಡಿ ಎಂದು ವಾಗ್ದಾಳಿ ನಡೆಸಿದ್ದಾರೆ.

    ಕಳೆದ ವರ್ಷದ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ 10,000 ಕೋಟಿ ರೂ. ಸಾಲ ಮಾಡಿದ್ದ ಕಾರಣಕ್ಕಾಗಿ ರಾಜ್ಯ ದಿವಾಳಿಯಾಗುತ್ತಿದೆ ಎಂದು ಬೊಬ್ಬಿಡುತ್ತಿರುವ ನೀವು, ನಿಮ್ಮ ಸರ್ಕಾರದ ಕಾಲದಲ್ಲಿನ ಸಾಲದ ಲೆಕ್ಕವನ್ನು ಪರಿಶೀಲಿಸುವ ಕಷ್ಟ ತೆಗೆದುಕೊಂಡಿದ್ದರೆ ಈ ರೀತಿ ನಮ್ಮ ಕೈಗೆ ಬಡಿಗೆ ಕೊಟ್ಟು ಹೊಡೆಸಿಕೊಳ್ಳುತ್ತಿರಲಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

    ನಿಮ್ಮ ಪಕ್ಷದ ಬಸವರಾಜ್​ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ 2020-21ರ ಹಣಕಾಸು ವರ್ಷದಲ್ಲಿ ಮಾಡಿದ್ದ ಸಾಲ 84,528 ಕೋಟಿ ರೂ., ಅವರು 2021-22ರಲ್ಲಿ 67,332 ಕೋಟಿ ರೂ. ಮತ್ತು 2022-23ರ ಅವಧಿಯಲ್ಲಿ 72,000 ಕೋಟಿ ರೂ. ಸಾಲ ಮಾಡಿದ್ದರು. ಆ ಸಾಲ ತೀರಿಸಲು ಅವರು 2022-23ರಲ್ಲಿ 43,580 ಕೋಟಿ ರೂ. ಬಳಕೆ ಮಾಡಿದ್ದರು. ಈಗ ಆ ಸಾಲವನ್ನು ನಾವು ತೀರಿಸಬೇಕಾಗಿದೆ. ನಮ್ಮ ಸರ್ಕಾರದ ಮೇಲೆ ಆರೋಪ ಮಾಡುವ ಮೊದಲು ಕನಿಷ್ಠ ಬಸವರಾಜ ಬೊಮ್ಮಾಯಿ ಅವರನ್ನಾದರೂ ಕೇಳುವುದು ಬೇಡವೇ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

    ಸ್ವಾತಂತ್ರ್ಯ ಬಂದಾಗಿನಿಂದ 2018ರ ವರೆಗಿನ ರಾಜ್ಯ ಸರ್ಕಾರದ ಒಟ್ಟು ಸಾಲದ ಮೊತ್ತ 2.42 ಲಕ್ಷ ಕೋಟಿ ರೂ. ಆಗಿತ್ತು. 2018ರಿಂದ 2023ರ ವರೆಗಿನ ಐದು ವರ್ಷಗಳ ಅವಧಿಯಲ್ಲಿ ಈ ಸಾಲ 5.40 ಲಕ್ಷ ಕೋಟಿಗಳಿಗೆ ಏರಿತ್ತು. ಕೇವಲ ಐದು ವರ್ಷಗಳ ಅವದಿಯಲ್ಲಿ ರಾಜ್ಯದ ಸಾಲ 3 ಲಕ್ಷ ಕೋಟಿ ರೂಪಾಯಿಗಳಷ್ಟು ಹೆಚ್ಚಾಗಿದ್ದು ಯಾವ ಪಕ್ಷದ ಆಡಳಿತದಲ್ಲಿ ಎನ್ನುವುದನ್ನು ಆತ್ಮಾವಲೋಕನ ಮಾಡಿಕೊಂಡು ರಾಜ್ಯದ ಜನತೆಗೆ ತಿಳಿಸುವಂತವರಾಗಿ ಎಂದು ರಾಜ್ಯ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಈ ಆಡಳಿತ, ಆರ್ಥಿಕತೆ, ಅಭಿವೃದ್ದಿ ವಿಚಾರಗಳೆಲ್ಲ ನಿಮ್ಮ ಚಹದ ಬಟ್ಟಲಲ್ಲ, ಹಿಂದು-ಮುಸ್ಲಿಂ, ಕೋಮುವಾದ, ಪಾಕಿಸ್ತಾನ, ಮುಸ್ಲಿಂ ಲೀಗ್ ಮೊದಲಾದ ವಿಚಾರಗಳನ್ನು ಜನರ ತಲೆಗೆ ತುಂಬಿ ಸೌಹಾರ್ದತೆಯಿಂದ ಬಾಳುತ್ತಿದ್ದ ಜನರನ್ನು ಪರಸ್ಪರ ಸಂಘರ್ಷಕ್ಕಿಳಿಸಿ ರಾಜಕೀಯ ಲಾಭ ಪಡೆಯುವುದಕ್ಕಷ್ಟೇ ನೀವು ಸಮರ್ಥರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಯಾರು ಸುಳ್ಳು ರಾಮಯ್ಯ, ಯಾರು ಸತ್ಯ ರಾಮಯ್ಯ ಎನ್ನುವುದನ್ನು ರಾಜ್ಯದ ಜನ ತಿಳಿದುಕೊಂಡಿದ್ದಾರೆ. ಈ ಚುನಾವಣೆಯಲ್ಲಿ ಅವರು ನಿಮಗೆ ಉತ್ತರವನ್ನೂ ನೀಡಲಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

    ಅಶ್ವಿನಿ ಪುನೀತ್​​ರಾಜ್​ಕುಮಾರ್​ ಬೆಂಬಲಕ್ಕೆ ನಿಂತ ನಟ ಜಗ್ಗೇಶ್; ನೇರವಾಗಿ ಇವರ ವಿರುದ್ಧ ಆಕ್ರೋಶ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts