ಪ್ರತಿದಿನ ಖಾಲಿ ಹೊಟ್ಟೆಗೆ ಕರಿಬೇವು ತಿನ್ನುವುದರಿಂದ ಏನೆಲ್ಲಾ ಲಾಭಗಳು ಗೊತ್ತೆ! ಇಲ್ಲಿದೆ ಉಪಯುಕ್ತ ಮಾಹಿತಿ.. | Curry Leaves

dk-2025-04-15t124802514-67fe0830f350b
Published on

Curry Leaves : ಸಾಮಾನ್ಯವಾಗಿ ಹೆಚ್ಚಿನ ಜನರು ತಮ್ಮ ಆಹಾರವನ್ನು ಮಸಾಲೆ ಮಾಡಲು ಕರಿಬೇವು ಎಲೆಗಳನ್ನು ಬಳಸುತ್ತಾರೆ. ಆದರೆ, ಈ ಕರಿಬೇವಿನ ಎಲೆಗಳು ಆಯರ್ವೇದ ದೃಷ್ಠಿಕೋನದಿಂದ ಅನೇಕ ಆರೋಗ್ಯ ಪ್ರಯೋಜನೆಗಳನ್ನು ಹೊಂದಿದೆ. ಇದನ್ನು ಸೇವಿಸುವುದರಿಂದ ದೇಹಕ್ಕೆ ಹಲುವು ಪ್ರಯೋಜನಗಳಿವೆ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕರಿಬೇವಿನ ಎಲೆಗಳನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಅನೇಕ ಆರೋಗ್ಯ ಪ್ರಯೋಜನೆಗಳನ್ನು ಪಡೆಯಬಹುದು.

ಕರಿಬೇವಿನ ಸೇವನೆಯಿಂದ ಏನೆಲ್ಲಾ ಆರೋಗ್ಯ ಲಾಭಗಳು ತಿಳಿಯಿರಿ

ತೂಕ ಇಳಿಸಲು ಸಹಾಯ

ಕರಿಬೇವಿನ ಎಲೆಗಳಲ್ಲಿ ಉತ್ಕರ್ಷಣ ನಿರೋಧಕಗಳು ಮತ್ತು ಫೈಬರ್‌ಗಳು ದೇಹದಲ್ಲಿನ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.ಇದು ಚಯಾಪಚ ಕ್ರಿಯೆಯನ್ನು ವೇಗಗೊಳಿಸುತ್ತದೆ. ದೇಹದಲ್ಲಿರುವ ಹೆಚ್ಚಿನ ಕೊಬ್ಬನ್ನು ಸುಡಲು(ಕಡಿಮೆ)ಸಹಾಯ ಮಾಡುತ್ತದೆ. ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿನ್ನುವುದರಿಂದ ಹೊಟ್ಟೆಯ ಕೊಬ್ಬು ಕಡಿಮೆಯಾಗುತ್ತದೆ ಮತ್ತು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ.

ಕರಿಬೇವಿನ ಎಲೆಗಳು ಹೆಚ್ಚಿನ ಪ್ರಮಾಣದ ಉತ್ಕರ್ಷಣ ನಿರೋಧಕಗಳನ್ನು ಹೊಂದಿವೆ. ಇದು ರಕ್ತದಲ್ಲಿನ ಕೊಲೆಸ್ಟ್ರಾಲ್​ ಮಟ್ಟವನ್ನು ನಿಯಂತ್ರಿಸಲು ಸಹಾಯಕವಾಗಲಿದೆ. ಇದು ದೇಹದಿಂದ ಹಾನಿಕಾರಕ ಕೊಲೆಸ್ಟ್ರಾಲ್ ಅನ್ನು ತೆಗೆದುಹಾಕುತ್ತದೆ, ಇದರಿಂದಾಗಿ ಹೃದಯ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

ಜೀರ್ಣಕ್ರಿಯೆ ಸುಧಾರಣೆ

ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯವಾಗಿಡಲು ಕರಿಬೇವು ಅತ್ಯಂತ ಪ್ರಯೋಜಕಾರಿ. ಇದರಲ್ಲಿರುವ ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳು ಹೊಟ್ಟೆಯ ಸಮಸ್ಯೆಗಳಾದ ಗ್ಯಾಸ್, ಮಲಬದ್ಧತೆ ಮತ್ತು ಅಜೀರ್ಣವನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಕಣ್ಣುಗಳ ಆರೋಗ್ಯ

ಕರಿಬೇವು ಎಲೆಗಳಲ್ಲಿ ವಿಟಮಿನ್ ಎ ಮತ್ತು ಸಿ ಸಮೃದ್ಧವಾಗಿದ್ದು, ಇದು ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಇದರ ಸೇವನೆಯಿಂದ ದೃಷ್ಟಿ ಸುಧಾರಿಸಬಹುದು. ಇದು ಕಣ್ಣಿನ ಪೊರೆ ಚಿಕಿತ್ಸೆಯಲ್ಲಿ ಪರಿಣಾಮಕಾರಿಯಾಗಿದೆ.

ಕರಬೇವಿನ ಎಲೆಗಳನ್ನ ಸೇವಿಸೊದೇಗೆ..?

ಕರಿಬೇವು ಸೇವಿಸಲು ಉತ್ತಮ ಮಾರ್ಗವೆಂದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 4-5 ಕರಿಬೇವು ಎಲೆಗಳನ್ನು ಅಗಿಯುವುದು. ಇದರ ನಂತರ ಒಂದು ಲೋಟ ಉಗುರು ಬೆಚ್ಚಗಿನ ನೀರನ್ನು ಕುಡಿಯಿರಿ. ನೀವು ಇದನ್ನು ಜ್ಯೂಸ್, ಸೂಪ್ ಅಥವಾ ಚಹಾ ರೂಪದಲ್ಲಿಯೂ ತೆಗೆದುಕೊಳ್ಳಬಹುದು. ಇದನ್ನು ಪ್ರತಿದಿನ ಮಾಡುವುದರಿಂದ ದೇಹಕ್ಕೆ ಗರಿಷ್ಠ ಪ್ರಯೋಜನಗಳು ದೊರೆಯುತ್ತವೆ.(ಏಜೆನ್ಸೀಸ್​)

ಗಮನಿಸಿ: ಈ ಮಾಹಿತಿಯನ್ನು ಅಂತರ್ಜಾಲದಿಂದ ಸಂಗ್ರಹಿಸಲಾಗಿದೆ ಮತ್ತು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಸ್ತುತ ಪಡಿಸಲಾಗಿದೆ. ಇದನ್ನು “ವಿಜಯವಾಣಿ ಡಾಟ್ ನೆಟ್" ದೃಢಪಡಿಸುವುದಿಲ್ಲ. ಯಾವುದೇ ಸಲಹೆಯನ್ನು ಅನುಸರಿಸುವ ಮೊದಲು ವೈದ್ಯರನ್ನು ಸಂಪರ್ಕಿಸುವುದು ಯಾವಾಗಲೂ ಉತ್ತಮ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net