ನವದೆಹಲಿ: ಉತ್ತರ ಪ್ರದೇಶದ ಗೊಂಡ ಜಿಲ್ಲೆಯಲ್ಲಿ ಗುರುವಾರ ಚಂಡೀಗಢ – ದಿಬ್ರುಘರ್ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿದ ಪ್ರಕರಣದ ಬಗ್ಗೆ ತನಿಖೆ ನಡೆಸಿದ ಹಿರಿಯ ರೈಲ್ವೆ ಅಧಿಕಾರಿಗಳ ತಂಡವು ರೈಲು ಹಳಿಯನ್ನು ಸರಿಯಾಗಿ ಜೋಡಿಸದಿರುವುದೇ ಅಪಘಾತಕ್ಕೆ ಕಾರಣ ಎಂದು ತಿಳಿಸಿದೆ.
ಇದನ್ನೂ ಓದಿ: ವರುಣನ ಕೃಪೆಯಿಂದ ಕೋರ್ಟ್ ಆದೇಶ ಪಾಲನೆ, ರೈತರ ಹಿತ ರಕ್ಷಣೆ ಸಾಧ್ಯವಾಗಿದೆ: ಡಿಸಿಎಂ ಡಿ.ಕೆ ಶಿವಕುಮಾರ್
ರೈಲು ಹಳಿಯಲ್ಲಿನ ಸಮಸ್ಯೆಯಿಂದಾಗಿ ಅಪಘಾತ ನಡೆದಿದೆ ಎಂದು ಐದು ಅಧಿಕಾರಿಗಳನ್ನೊಳಗೊಂಡ ತನಿಖಾ ತಂಡವು ತಿಳಿಸಿದೆ. ಆದ್ರೆ ಇದಲ್ಲಿ ಓರ್ವ ಅಧಿಕಾರಿ ಈ ಅಭಿಪ್ರಾಯವನ್ನು ಒಪ್ಪಿಕೊಂಡಿಲ್ಲ ಎಂದು ಮೂಲಗಳು ತಿಳಿಸಿವೆ. ಅದೇ ರೀತಿ, ತನಿಖಾ ಸಮಿತಿಯ ವರದಿಯ ಆಧಾರದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವುದು ಸರಿಯಲ್ಲ ಎಂದು ಈಶಾನ್ಯ ರೈಲ್ವೆ ವಲಯದ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ.
”ರೈಲ್ವೆ ಸುರಕ್ಷತಾ ವಿಭಾಗದ ಆಯುಕ್ತರ (ಸಿಆರ್‌ಎಸ್) ತನಿಖೆ ಈಗಾಗಲೇ ಆರಂಭವಾಗಿದ್ದು, ಶುಕ್ರವಾರ ಮೊದಲ ವಿಚಾರಣೆ ನಡೆದಿದೆ. ತಾಂತ್ರಿಕ ವಿಚಾರಗಳೊಂದಿಗೆ ಸಮಗ್ರ ತನಿಖೆ ನಡೆಯಲಿದೆ. ಸಮಿತಿಯ ತನಿಖೆಯಲ್ಲಿ ನಿರ್ಣಾಯಕ ವಿಷಯಗಳು ಬೆಳಕಿಗೆ ಬಂದಿಲ್ಲ ಆದ್ದರಿಂದ ಇದು ಸಕಾಲಿಕವಲ್ಲ ಎಂದು ಹೇಳಿದ್ದಾರೆ.
ಗುರುವಾರ ಮಧ್ಯಾಹ್ನ ಸಂಭವಿಸಿದ ಈ ದುರಂತದಲ್ಲಿ ಕನಿಷ್ಟ ನಾಲ್ವರು ಪ್ರಯಾಣಿಕರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತರು ಹಾಗೂ ಗಾಯಾಳುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ರಕ್ಷಣಾ ತಂಡ ಮಾಹಿತಿ ನೀಡಿದೆ.
ಜುಲೈ 22ರಿಂದ 250 ಕೇಂದ್ರಗಳಲ್ಲಿ ಎಲ್ಕೆಜಿ-ಯುಕೆಜಿ ತರಗತಿ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್