More

    ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ತೀವ್ರ ವಾಗ್ದಾಳಿ, ಶಾಸಕ ಲಕ್ಷ್ಮಣ ಸವದಿ ಹೇಳಿದ್ದೇನು ಗೊತ್ತಾ?

    ವಿಜಯಪುರ: ದೇವಸ್ಥಾನಗಳಿಂದ ತೆರಿಗೆ ಸಂಗ್ರಹಿಸುವ ಮಹತ್ವದ ಮಸೂದೆಯನ್ನೇ ಬಿಜೆಪಿ ಲೋಕಸಭೆ ಚುನಾವಣೆಯಲ್ಲಿ ಪ್ರಮುಖ ಅಸ್ತ್ರ ಮಾಡಿಕೊಳ್ಳಲಿದೆಯೇ? ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಬಿಜೆಪಿಗರು ಭ್ರಮನಿರಸನರಾಗಿದ್ದು ಇಲ್ಲ ಸಲ್ಲದ ಹೇಳಿಕೆ ನೀಡುತ್ತಿದ್ದಾರೆಂದು ವಾಗ್ದಾಳಿ ನಡೆಸಿದ್ದಾರೆ.

    ಇಂಡಿ ಪಟ್ಟಣದಲ್ಲಿ ಗಾಣಿಗ ಸಮುದಾಯದ ಜಿಲ್ಲಾ ಮಟ್ಟದ ಸಮಾವೇಶ ಹಾಗೂ ರೂ.5 ಕೋಟಿ ವೆಚ್ಚದ ಸಮುದಾಯ ಭವನ ಉದ್ಘಾಟನೆಯಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗರಿಗೆ ರಾಜ್ಯದ 28 ಲೋಕಸಭೆ ಕ್ಷೇತ್ರಗಳನ್ನು ಗೆಲ್ಲಲು ಟಾರ್ಗೆಟ್ ನೀಡಲಾಗಿದೆ. ಅದು ಅಸಾಧ್ಯ ಎಂಬುದು ಗೊತ್ತಾದ ತಕ್ಷಣವೇ ಭ್ರಮ ನಿರಸನದಿಂದ ಏನೇನೋ ಮಾತನಾಡುತ್ತಿದ್ದಾರೆ ಎಂದರು.

    ಸಂಸದ ಹೆಗಡೆ ವಿರುದ್ಧ ವಾಗ್ದಾಳಿ

    ಇನ್ನು ಸಂಸದ ಅನಂತಕುಮಾರ ಹೆಗಡೆ ಹೇಳಿಕೆಗಳಿಗೆ ಸಂಬಂಧಿಸಿದಂತೆ ತೀವ್ರ ವಾಗ್ದಾಳಿ ನಡೆಸಿದ ಸವದಿ, ದೀಪ ಆರುವ ಮುಂಚೆ ತೀವ್ರವಾಗಿ ಉರಿಯುತ್ತದೆ. ಹಾಗೆಯೇ ರಾಜಕೀಯವಾಗಿ ಕಳೆದು ಹೋಗುವ ಮುನ್ನ ಅವಾಚ್ಯ ಶಬ್ದಗಳಿಂದ ಮಾತನಾಡುತ್ತಿದ್ದಾರೆ. ತಮ್ಮ ಅಸ್ತಿತ್ವವನ್ನು ತಾವೇ ಕಳೆದುಕೊಳ್ಳುತ್ತಿರುವುದು ಪ್ರಾರಂಭವಾಗಿದೆ. ವಿನಾಶ ಕಾಲೇ ವಿಪರೀತ ಬುದ್ದ ಎಂದು ಸವದಿ ಹೇಳಿದರು.

    ಮೇಕೆದಾಟು ಯೋಜನೆ ಕುರಿತು ದೊರೈ ಮುರುಗನ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸವದಿ, ನಮ್ಮ ಸರ್ಕಾರ ಬಂದು ಎಂಟು ತಿಂಗಳಾಗಿದೆ. ಇನ್ನೂ ನಾಲ್ಕು ವರ್ಷ ನಾಲ್ಕು ತಿಂಗಳಿದೆ. ಅಷ್ಟರಲ್ಲಿ ಮೇಕಾದಾಟು, ಅಪ್ಪರ ಭದ್ರಾ ಹಾಗೂ ಕೃಷ್ಣಾ ಮೇಲ್ದಂಟೆ ಯೋಜನೆಗಳನ್ನು ಹಂತ ಹಂತವಾಗಿ ಕೈಗೆತ್ತಿಕೊಕಳ್ಳಲಾಗುವುದು ಎಂದರು.

    ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಯಾರಾಗಬೇಕೆಂದು ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ. ನಾನು ಮಾತ್ರ ರಾಜ್ಯ ರಾಜಕಾರಣದಲ್ಲಿಯೇ ಇರುವುದಾಗಿ ಸ್ಪಷ್ಟಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts