

Height Growth; ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳು ಎತ್ತರವಾಗಿ, ಆರೋಗ್ಯವಾಗಿ ಮತ್ತು ಒಳ್ಳೆಯ ವ್ಯಕ್ತಿತ್ವವನ್ನು ಹೊಂದಿರಬೇಕೆಂದು ಬಯಸುತ್ತಾರೆ. ಮಕ್ಕಳ ಎತ್ತರ ನಿದ್ರೆ, ವ್ಯಾಯಾಮ, ಜೀವನಶೈಲಿ ಮತ್ತು ಸಮತೋಲಿತ ಆಹಾರ ಸೇರಿದಂತೆ ಕೆಲ ಅಂಶಗಳ ಮೇಲೆ ಅವಲಂಬಿಸಿರುತ್ತದೆ. ಸರಿಯಾದ ಆಹಾರ ದೇಹದ ಬೆಳವಣಿಗೆಯನ್ನು ಹೆಚ್ಚಿಸುವುದರ ಜೊತೆಗೆ, ಬೆಳವಣಿಗೆಯ ಹಾರ್ಮೋನುಗಳನ್ನು ಸಕ್ರಿಯಗೊಳಿಸುವ ಬಲಪಡಿಸುತ್ತದೆ.
ಮಕ್ಕಳು ಸರಿಯಾದ ಎತ್ತರವನ್ನು ಕಾಯ್ದುಕೊಳ್ಳಲು ಉತ್ತಮ ಪೋಷಣೆಯ ಅಗತ್ಯವಿದೆ. ಅದಕ್ಕಾಗಿಯೇ ಕೆಲವು ತರಕಾರಿಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ನಿಮ್ಮ ಮಗುವಿನ ಆಹಾರದಲ್ಲಿ ನೀವು ಸೇರಿಸಬೇಕಾದ ಕೆಲವು ಪೌಷ್ಟಿಕ ಭರಿತ ತರಕಾರಿಗಳು ಯಾವುವೆಂದು ತಿಳಿಯೋಣ.
ಇದು ಹಲವು ಅಗತ್ಯ ಪೋಷಕಾಂಶಗಳನ್ನು ಒಳಗೊಂಡಿದೆ. ಹಾಗಾಗಿ ಮಕ್ಕಳ ಎತ್ತರ ಮತ್ತು ಒಟ್ಟಾರೆ ಆರೋಗ್ಯಕ್ಕೆ ಅತ್ಯಂತ ಪೌಷ್ಟಿಕ ತರಕಾರಿಯಾಗಿದೆ. ಇದನ್ನು ಆಹಾರದಲ್ಲಿ ಸೇರಿಸುವುದು ಬೆಳವಣಿಗೆಗೆ ಸಹಾಯಕವಾಗಿದೆ. ಒಂದು ವೇಳೆ ಮಗುವಿಗೆ ಪಾಲಕ್ ತಿನ್ನಲು ಇಷ್ಟವಿಲ್ಲದಿದ್ದರೆ, ರುಚಿಕರವಾಗಿ ತಯಾರಿಸಿ ಅಥವಾ ಇತರ ಆಹಾರಗಳಲ್ಲಿ ಸೇರಿಸಿ. ಇದು ರಕ್ತಹೀನತೆ ತಡೆಗಟ್ಟಲು ಮತ್ತು ಆಕ್ಸಿಜನ್ ಸಾಗಣೆಗೆ ಸಹಾಯ ಮಾಡುತ್ತದೆ.
ಪಾಲಕ್ ಸೊಪ್ಪು
ಕ್ಯಾರೆಟ್ ಮಕ್ಕಳ ಎತ್ತರ ಮತ್ತು ಒಟ್ಟಾರೆ ಆರೋಗ್ಯಕ್ಕೆ ಅತ್ಯಂತ ಪೌಷ್ಟಿಕ ತರಕಾರಿಯಾಗಿದೆ. ಇದನ್ನು ಆಹಾರದಲ್ಲಿ ಸೇರಿಸುವುದು ಬೆಳವಣಿಗೆಗೆ ಸಹಾಯಕವಾಗಿದೆ. ಕಣ್ಣಿನ ಆರೋಗ್ಯ, ಚರ್ಮದ ಆರೋಗ್ಯ ಮತ್ತು ಒಟ್ಟಾರೆ ಬೆಳವಣಿಗೆಗೆ ಇದು ಅಗತ್ಯ. ದೇಹದ ದ್ರವ ಸಮತೋಲನ ಮತ್ತು ಸ್ನಾಯುಗಳ ಕಾರ್ಯಕ್ಕೆ ಇದು ತುಂಬಾ ಒಳ್ಳೆಯದು.
ಕ್ಯಾರೆಟ್
ಪ್ರೋಟೀನ್ ಮತ್ತು ನಾರಿನಂಶದಿಂದ ಸಮೃದ್ಧವಾಗಿರುವ ಬಟಾಣಿ ಮಕ್ಕಳಿಗೆ ಹೊಸ ಶಕ್ತಿಯನ್ನು ನೀಡುತ್ತದೆ ಮತ್ತು ಬೆಳವಣಿಗೆಗೆ ಅಗತ್ಯವಾದ ಅಂಶಗಳನ್ನು ಒದಗಿಸುತ್ತದೆ.
ಬಟಾಣಿ
ಬೀಟಾ-ಕ್ಯಾರೋಟಿನ್ ಮತ್ತು ವಿಟಮಿನ್ ಎ ಯಿಂದ ಸಮೃದ್ಧವಾಗಿರುವ ಕುಂಬಳಕಾಯಿ ದೇಹದ ಜೀವಕೋಶಗಳು ಮತ್ತು ಅಂಗಾಂಶಗಳ ಬೆಳವಣಿಗೆಗೆ ಸಹಾಯ ಮಾಡುತ್ತದೆ.
ಕುಂಬಳಕಾಯಿ
ಹಸಿರು ಬೀನ್ಸ್ ಮಕ್ಕಳ ಎತ್ತರ ಮತ್ತು ಒಟ್ಟಾರೆ ಆರೋಗ್ಯಕ್ಕೆ ಉತ್ತಮವಾದ ತರಕಾರಿಯಾಗಿದೆ. ಇದು ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿದ್ದು, ಬೆಳವಣಿಗೆಗೆ ಸಹಾಯಕವಾಗಿದೆ. ಇದು ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ ಮತ್ತು ಕಾಲಜನ್ ರಚನೆಗೆ ಸಹಾಯ ಮಾಡುತ್ತದೆ. ಫೈಬರ್ ಮತ್ತು ಪ್ರೋಟೀನ್ನಿಂದ ಸಮೃದ್ಧವಾಗಿರುವ ಬೀನ್ಸ್, ಮೂಳೆ ಮತ್ತು ಸ್ನಾಯುಗಳ ಬೆಳವಣಿಗೆಯನ್ನು ಹೆಚ್ಚಿಸಲಿದೆ.
ಹಸಿರು ಬೀನ್ಸ್
ಈ ಮೇಲೆ ಉಲ್ಲೇಖಿಸಲಾದ ಎಲ್ಲಾ ಮಾಹಿತಿಗಳನ್ನು ವಿವಿಧ ಮಾಧ್ಯಮಗಳು ಹಾಗೂ ವಿವಿಧ ಪಠ್ಯಗಳಿಂದ ಸಂಗ್ರಹಿಸಲಾಗಿದೆ.
(ಏಜೆನ್ಸೀಸ್)
ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ಟೊಮೆಟೊಗಳು ದೇಹದ ಜೀವಕೋಶಗಳನ್ನು ಆರೋಗ್ಯವಾಗಿರಿಸುತ್ತದೆ ಮತ್ತು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ಟೊಮೆಟೊ