ನಾರಾಯಣ ನೇತ್ರಾಲಯದ ಡಾ.ಭುಜಂಗ ಶೆಟ್ಟಿ ಇನ್ನಿಲ್ಲ: ವ್ಯಾಯಾಮ ಮಾಡುತ್ತಿದ್ದಾಗ ಹೃದಯಾಘಾತ, ಕುಸಿದು ಬಿದ್ದು ಸಾವು

ಬೆಂಗಳೂರು: ನಾರಾಯಣ ನೇತ್ರಾಲಯದ ಡಾ.ಭುಜಂಗ ಶೆಟ್ಟಿ ಇಂದು ಹೃದಯಾಘಾತದಿಂದ ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ಇಂದು ಆಸ್ಪತ್ರೆಗೆ ಬಂದು ರೋಗಿಗಳಿಗೆ ಚಿಕಿತ್ಸೆ ನೀಡಿದ್ದ ಡಾ. ಭುಜಂಗ ಶೆಟ್ಟಿ ಅವರು ಮನೆಗೆ ತೆರಳಿದ ಬಳಿಕ ಸಂಜೆ 6 ಗಂಟೆ ಸುಮಾರಿಗೆ ಹೃದಯಾಘಾತಕ್ಕೆ ಒಳಗಾಗಿದ್ದರು. ಎಂದಿನಂತೆ ಕರ್ತವ್ಯಕ್ಕೆ‌ ಹಾಜರಾಗಿ ರೋಗಿಗಳ ತಪಾಸಣೆ ಮಾಡಿದ ಡಾ. ಭುಜಂಗ ಶೆಟ್ಟಿ, ಸಂಜೆ ಮನೆಗೆ ಹೋಗಿ ಮನೆಯಲ್ಲಿ ಜಿಮ್​ನಲ್ಲಿ ವ್ಯಾಯಾಮ ಮಾಡಿದ್ದರು. ಆಗ ಅವರು ಹೃದಯಾಘಾತಕ್ಕೆ ಒಳಗಾಗಿ, ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು … Continue reading ನಾರಾಯಣ ನೇತ್ರಾಲಯದ ಡಾ.ಭುಜಂಗ ಶೆಟ್ಟಿ ಇನ್ನಿಲ್ಲ: ವ್ಯಾಯಾಮ ಮಾಡುತ್ತಿದ್ದಾಗ ಹೃದಯಾಘಾತ, ಕುಸಿದು ಬಿದ್ದು ಸಾವು