

ಹಾವೇರಿ: ಇಲ್ಲಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಸವೇಶ್ವರ ನಗರದ ಡಾ. ಜಗದೀಶ್ ಗೊಡ್ಡೆಮ್ಮಿ (47) ಮೃತರು. ಇಎನ್ಟಿ(ಕಿವಿ, ಮೂಗು, ಗಂಟಲು) ವಿಭಾಗದ ತಜ್ಞ ವೈದ್ಯರಾಗಿದ್ದ ಜಗದೀಶ್, ಗೌರಮ್ಮ ಸ್ಮಾರಕ ಮೆಮೋರಿಯಲ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು.
ಇದನ್ನೂ ಓದಿರಿ ಮಗನನ್ನು ನೋಡಲು ಹೊರಟ ದಂಪತಿ ದಾರಿಯಲ್ಲೇ ಹೆಣವಾದರು!
ಮೂರು ದಿನದ ಹಿಂದಷ್ಟೇ (ಆ.20) ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವೈದ್ಯಾಧಿಕಾರಿ ಡಾ.ನಾಗೇಂದ್ರ ಮೃತಪಟ್ಟಿದ್ದರು. ಇವರ ಸಾವು ಆತ್ಮಹತ್ಯೆ-ಕೊಲೆ ಎಂಬ ವಿವಾದ ಹಸಿಯಾಗೇ ಇದೆ. ಇದರ ಬೆನ್ನಲ್ಲೇ ಮತ್ತೊಬ್ಬ ವೈದ್ಯರು ಆತ್ಮಹತ್ಯೆಗೆ ಮಾಡಿಕೊಂಡಿರುವುದು ದುರಂತ.
ಡಾ. ಜಗದೀಶ್ ಗೊಡ್ಡೆಮ್ಮಿ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಗೊತ್ತಾಗಿಲ್ಲ. ಹಾವೇರಿಯ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ಪ್ರಭಾವತಿ ಸ್ಥಳ ಪರಿಶೀಲನೆ ನಡೆಸಿದರು.