More

    ವೈದ್ಯರ ಮೇಲಿನ ಹಲ್ಲೆ ರಾಜ್ಯಕ್ಕೆ ಶೋಭೆಯಲ್ಲ

    ಬೆಳಗಾವಿ: ಬೆಂಗಳೂರಿನ ಪಾದರಾಯಣಪುರ ವಾರ್ಡ್‌ನಲ್ಲಿ ವೈದ್ಯರು, ಆಶಾ ಕಾರ್ಯಕರ್ತೆಯರು ಹಾಗೂ ಪೊಲೀಸರ ಮೇಲೆ ಹಲ್ಲೆ ನಡೆಸಿರುವುದು ರಾಜ್ಯಕ್ಕೆ ಶೋಭೆ ತರುವ ವಿಷಯವಲ್ಲ. ಈ ವಿಷಯದಲ್ಲಿ ರಾಜಕೀಯ ಮಾಡುತ್ತಿರುವ ಮಾಜಿ ಸಚಿವರೂ ಆಗಿರುವ ಶಾಸಕ ಜಮೀರ್‌ಅಹ್ಮದ್ ಖಾನ್ ಒಮ್ಮೆ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.

    ಬೆಳಗಾವಿ ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಮಾಜಿ ಸಚಿವ ಜಮೀರ್‌ಅಹ್ಮದ್ ಖಾನ್ ಭಾರತ ದೇಶದ ಪರ ಇದ್ದಾರೋ ಅಥವಾ ಇನ್ನಾವುದೋ ದೇಶದ ಪರವಾಗಿ ಇದ್ದಾರೋ? ಜವಾಬ್ದಾರಿಯುತ ಸ್ಥಾನದಲ್ಲಿರುವವರು ದುಷ್ಕರ್ಮಿಗಳ ಬೆನ್ನಿಗೆ ನಿಲ್ಲುತ್ತಿರುವುದು ಸರಿಯಾದ ಕ್ರಮವಲ್ಲ ಎಂದರು.

    ದೇಶ ದ್ರೋಹದ ಕೇಸ್ ದಾಖಲಿಸಿ: ಕರೊನಾ ವೈರಸ್ ನಿಯಂತ್ರಣಕ್ಕೆ ಮತ್ತು ಸಮಾಜದ ಆರೋಗ್ಯ ಕಾಪಾಡಲು ಹಗಲಿರುಳು ಶ್ರಮಿಸುತ್ತಿರುವವರಿಗೆ ಸಹಕಾರ ನೀಡಬೇಕಾದದ್ದು ಎಲ್ಲರ ಕರ್ತವ್ಯ. ಆದರೆ, ಅವರ ಮೇಲೆಯೇ ಹಲ್ಲೆ ನಡೆಸಿರುವ ದುಷ್ಕರ್ಮಿಗಳು ಮತ್ತು ಅದಕ್ಕೆ ಪ್ರಚೋದನೆ ನೀಡುವವರ ವಿರುದ್ಧ ದೇಶ ದ್ರೋಹದ ಕೇಸ್ ದಾಖಲಿಸಬೇಕು. ಸಿಬ್ಬಂದಿ, ಅಧಿಕಾರಿಗಳಿಗೆ ಸರ್ಕಾರ ಸೂಕ್ತ ರಕ್ಷಣೆ ನೀಡಬೇಕು. ಅಲ್ಲದೆ, ಹಲ್ಲೆ ನಡೆಸುವವರ ವಿರುದ್ಧ ರಾಜ್ಯ ಸರ್ಕಾರ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

    ಜಗತ್ತಿನಾದ್ಯಂತ ಹರಡುತ್ತಿರುವ ಕರೊನಾ ವೈರಸ್ ಯಾವುದೇ ಜಾತಿ, ಭಾಷೆ, ಧರ್ಮಕ್ಕೆ ಸೀಮಿತವಾಗಿಲ್ಲ. ಈಗಾಗಲೇ ಪಾದರಾಯಣಪುರ ವಾರ್ಡ್ ನಲ್ಲಿ ನಡೆದಿರುವ ಗಲಭೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜತೆಗೆ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ವಹಿಸಬೇಕು ಎಂದು ಸಚಿವ ಅಂಗಡಿ ಒತ್ತಾಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts