

ಬೆಳ್ತಂಗಡಿ: ವೈದ್ಯರ ಸೇವೆ ಮತ್ತು ತ್ಯಾಗ ಅಮೂಲ್ಯವಾದದ್ದು, ವೈದ್ಯರದ್ದು ಒತ್ತಡದ ಜೀವನ. ಆಸ್ಪತ್ರೆಯ ವೈದ್ಯಕೀಯ ತಂಡ ಅತ್ಯುತ್ತಮ ವೈದ್ಯಕೀಯ ಸೇವೆ ನೀಡುತ್ತಿದ್ದು, ಸ್ವತಃ ರೋಗಿಗಳೇ ವೈದ್ಯರ ಮತ್ತು ಆಸ್ಪತ್ರೆಯ ಸೇವೆಯನ್ನು ಶ್ಲಾಸುತ್ತಿದ್ದಾರೆ. ನಮ್ಮ ಆಸ್ಪತ್ರೆಯಲ್ಲಿ ಶ್ರೀದಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಸೇವೆ ದೊರೆಯಲಿದ್ದು, ದೇಶದಲ್ಲಿಯೇ ಈ ಅತ್ಯಾಧುನಿಕ ಯಂತ್ರ ಹೊಂದಲಿರುವ 2ನೇ ಆಸ್ಪತ್ರೆ ನಮ್ಮದಾಗಲಿದೆ ಎಂದು ಉಜಿರೆ ಎಸ್‌ಡಿಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ.ಜನಾರ್ದನ್ ಹೇಳಿದರು.
ಆಸ್ಪತ್ರೆಯಲ್ಲಿ ಇತ್ತೀಚೆಗೆ ನಡೆದ ವೈದ್ಯರ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದರು.
ವೈದ್ಯಕೀಯ ಅಧೀಕ್ಷಕ ಡಾ.ದೇವೇಂದ್ರ ಕುಮಾರ್, ಮುಖ್ಯ ವೈದ್ಯಾಧಿಕಾರಿ ಡಾ.ಸಾತ್ವಿಕ್ ಜೈನ್ ಶುಭ ಹಾರೈಸಿದರು. ಉಜಿರೆ ಎಸ್.ಡಿ.ಎಂ. ಆಸ್ಪತ್ರೆಯ ಎಲ್ಲಾ ವೈದ್ಯರನ್ನು ಸನ್ಮಾನಿಸಲಾಯಿತು. ವಿವಿಧ ಮನರಂಜನಾ ಹಾಗೂ ಫನ್ನಿ ಗೇಮ್ಸ್ ಆಯೋಜಿಸಲಾಯಿತು. ಜಗನ್ನಾಥ ಎಂ. ಮತ್ತು ಸೃಜನ್ ಶೆಟ್ಟಿ ನಿರೂಪಿಸಿದರು.