ಅಂಗಾಗ ಆರೋಗ್ಯವಾಗಿದ್ದಾಗ ಜೀವನದಲ್ಲಿ ಲವಲವಿಕೆ : ಡಾ.ವಿನಯ ಕುಮಾರ್ ಹೆಗ್ಡೆ ಹೇಳಿಕೆ

New Project (35)
Published on

ಮೂಡುಬಿದಿರೆ: ಮನುಷ್ಯನಿಗೆ ಆರೋಗ್ಯಕ್ಕಿಂತ ದೊಡ್ಡ ಭಾಗ್ಯ ಬೇರಿಲ್ಲ. ದೇಹದ ಪ್ರತಿಯೊಂದು ಅಂಗವೂ ಆರೋಗ್ಯಪೂರ್ಣವಾಗಿದ್ದಾಗ ಮನುಷ್ಯ ಲವಲವಿಕೆಯಿಂದ ಕಾರ್ಯ ನಿರ್ವಹಿಸಲು ಸಾಧ್ಯ. ಹಲ್ಲಿನ ಬಗ್ಗೆಯೂ ಕಾಳಜಿ ಅತಿಮುಖ್ಯ, ನಿರ್ಲಕ್ಷೃ ಸಲ್ಲದು ಎಂದು ದಂತ ವೈದ್ಯ ಡಾ.ವಿನಯ ಕುಮಾರ್ ಹೆಗ್ಡೆ ಹೇಳಿದರು.

ಮೂಡುಬಿದಿರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾಗಿದ್ದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ವೈದ್ಯರ ದಿನಾಚರಣೆ ಮಹತ್ವದ ಕುರಿತು ಮಾತನಾಡಿದರು. ಕಾರ್ಯದರ್ಶಿ ರಶ್ಮಿತಾ ಜೈನ್, ಮುಖ್ಯ ಶಿಕ್ಷಕ ಶಿವಪ್ರಸಾದ್ ಭಟ್, ಉಪಮುಖ್ಯ ಶಿಕ್ಷಕ ಜಯಶೀಲ, ಶಿಕ್ಷಕಿ ಜಯಲಕ್ಷ್ಮೀ ಇದ್ದರು.

ಡಾ.ವಿನಯ ಕುಮಾರ್ ಹೆಗ್ಡೆ ಅವರನ್ನು ಸಂಸ್ಥೆ ವತಿಯಿಂದ ಗೌರವಿಸಲಾಯಿತು. ವೈದ್ಯರ ಮಹತ್ವದ ಸಂದೇಶ ಸಾರುವ ಹಲವು ಚಟುವಟಿಕೆಗಳನ್ನು ಮಕ್ಕಳು ಆಯೋಜಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net