25.7 C
Bangalore
Sunday, December 15, 2019

ವೈದ್ಯರಿಂದ ಮಾತೃಹೃದಯದ ಸೇವೆ

Latest News

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ – ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ಉಪ ಮುಖ್ಯಮಂತ್ರಿ ಹುದ್ದೆ ಸೃಜಿಸಲಾಗುತ್ತಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮುಂದಿನ ಸಚಿವ ಸಂಪುಟದ ವಿಸ್ತರಣೆ, ಬದಲಾವಣೆಯನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು...

ಮೊಬೈಲ್ ಹಾಳು ಮಾಡಿದ್ದಕ್ಕೆ ಸೋದರ ಮಾವನೇ ಬಾಲಕಿಗೆ ಚಾಕು ಇರಿದು ಹತ್ಯೆ

ಶಿವಮೊಗ್ಗ: ಮೊಬೈಲ್ ವಿಚಾರದಲ್ಲಿ ಭಾನುವಾರ ಸೋದರ ಮಾವನೇ ಬಾಲಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗಾಡಿಕೊಪ್ಪದಲ್ಲಿ ನಡೆದಿದೆ.5 ವರ್ಷದ ರಂಜನಿ ಹತ್ಯೆಯಾದ...

ಮಸ್ಕಿ ಕ್ಷೇತ್ರಕ್ಕೆ ಇನ್ನೆರಡು ತಿಂಗಳಲ್ಲಿ ಉಪಚುನಾವಣೆ ಸಾಧ್ಯತೆ – ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್

ಮಸ್ಕಿ: ಬಿಜೆಪಿ ಸೇರಿದ ಮೇಲೆ ಸಿಎಂ ಬಿ.ಎಸ್.ಯಡಿಯೂರಪ್ಪ ಕ್ಷೇತ್ರಕ್ಕೆ 100 ಕೋಟಿ ರೂ. ಅನುದಾನ ಕೊಡಲು ಒಪ್ಪಿದ್ದಾರೆ. ಈಗಾಗಲೇ 50 ಕೋಟಿ ರೂ....

ಬೆಳ್ತಂಗಡಿ: ವೈದ್ಯರು ಮಾನವೀಯತೆ ಹಾಗೂ ನಗುಮುಖದ ಮಾತೃ ಹೃದಯದೊಂದಿಗೆ ರೋಗಿಗಳ ಸೇವೆ ಮಾಡಬೇಕು. ರೋಗಿಗಳ ಸೇವೆಯೇ ದೇವರ ಸೇವೆಯಾಗಿದೆ ಎಂದು ಬೆಂಗಳೂರಿನ ಶ್ರೀ ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಹೇಳಿದರು.

ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಸೋಮವಾರ ಎರಡನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಆಸ್ಪತ್ರೆ, ಜೈಲು ಮತ್ತು ರುದ್ರಭೂಮಿ ನೋಡಿದಾಗ ನಮಗೆ ಆಧುನಿಕ ಜೀವನದ ಸಮಸ್ಯೆಗಳ ಅರಿವಾಗುತ್ತದೆ. ಆಧುನಿಕ ಜೀವನ ಶೈಲಿ, ಆಹಾರ ಸೇವನಾ ಕ್ರಮ, ಸದಾ ಒತ್ತಡದ ಕೆಲಸಗಳು, ಅತಿಯಾದ ತಂತ್ರಜ್ಞಾನದ ಬಳಕೆ, ವಾಯುಮಾಲಿನ್ಯ ಮೊಬೈಲ್ ಫೋನ್ ಬಳಕೆ ಇತ್ಯಾದಿ ಕಾರಣಗಳಿಂದ ಇಂದು ಎಳೆಯ ಪ್ರಾಯದಲ್ಲೇ ಮಧುಮೇಹ, ರಕ್ತದೊತ್ತಡ, ಕ್ಯಾನ್ಸರ್, ಹೃದಯಾಘಾತ ಮೊದಲಾದ ಭೀಕರ ರೋಗಗಳು ಕಾಡುತ್ತವೆ ಎಂದರು.

ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಧಾನದಿಂದ ನಾವು ಸಂಪೂರ್ಣ ಆರೋಗ್ಯ ಭಾಗ್ಯ ಹೊಂದಬಹುದು. ಕೀಳರಿಮೆ ಹಾಗೂ ಅಹಂ ತ್ಯಜಿಸಿ ಧನಾತ್ಮಕ ಚಿಂತನೆಯೊಂದಿಗೆ ಸದಾ ಒಳ್ಳೆಯ ಕೆಲಸಗಳನ್ನು ಮಾಡಬೇಕು ಎಂದರು.

ಅಲೋಪಥಿ, ಹೋಮಿಯೋಪಥಿ, ನ್ಯಾಚುರೋಪಥಿ ಇತ್ಯಾದಿ ಪದ್ಧತಿಗಳಿಗಿಂತಲೂ ಮಿಗಿಲಾಗಿ ವೈದ್ಯರಿಗೆ ರೋಗಿಗಳಲ್ಲಿ ಸಿಂಪಥಿ ಇರಬೇಕು. ಉಪವಾಸ, ವ್ಯಾಯಾಮ, ಯೋಗಾಭ್ಯಾಸ, ನಿತ್ಯ ನಡಿಗೆ ಇತ್ಯಾದಿ ಕ್ರಿಯೆಗಳಿಂದ ಆರೋಗ್ಯ ಭಾಗ್ಯ ಪಡೆಯಬಹುದು ಎಂದು ಸಲಹೆ ನೀಡಿದರು.

ಯೋಗ ಮತ್ತು ನ್ಯಾಚುರೋಪಥಿ ಮೆಡಿಕಲ್ ಅಸೋಸಿಯೇಶನ್ ರಾಷ್ಟ್ರೀಯ ಅಧ್ಯಕ್ಷ ಡಾ.ನವೀನ್ ಕೆ.ವಿ. ಪ್ರಸ್ತಾವಿಸಿದರು. ಆಯುಷ್ ಇಲಾಖೆಯ ಜಂಟಿ ನಿರ್ದೇಶಕ ಡಾ.ಶ್ರೀಧರ ಭಟ್, ಹೇಮಾವತಿ ವಿ. ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.
ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜು ಪ್ರಾಂಶುಪಾಲ ಡಾ.ಪ್ರಶಾಂತ ಶೆಟ್ಟಿ ಸ್ವಾಗತಿಸಿದರು. ಮೂಡುಬಿದಿರೆಯ ಆಳ್ವಾಸ್ ಪ್ರಕೃತಿ ಚಿಕಿತ್ಸಾ ಕಾಲೇಜು ಪ್ರಾಂಶುಪಾಲೆ ಡಾ.ವನಿತಾ ರೈ ವಂದಿಸಿದರು. ಜೋತ್ಸ್ನಾಮತ್ತು ಅನನ್ಯಾ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಎಂಟು ಕಾಲೇಜುಗಳ 300 ಪ್ರತಿನಿಧಿಗಳು ಭಾಗವಹಿಸಿದ್ದರು.

ಪಂಚೇಂದ್ರಿಯಗಳ ಒಡೆಯರಾಗಿ: ನಾವು ಪಂಚೇಂದ್ರಿಯಗಳ ದಾಸರಾಗಬಾರದು, ಒಡೆಯರಾಗಬೇಕು. ಪಂಚೇಂದ್ರೀಯಗಳ ನಿಯಂತ್ರಣದಿಂದ ರೋಗರಹಿತವಾಗಿ ಆರೋಗ್ಯಪೂರ್ಣ ಜೀವನ ನಡೆಸಬಹುದು ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅಭಿಪ್ರಾಯಪಟ್ಟರು. ಧಾರ್ಮಿಕ ಆಚಾರ-ವಿಚಾರಗಳ ಅನುಷ್ಠಾದಿಂದ, ಸದಾಚಾರದೊಂದಿಗೆ ಆದರ್ಶ ಜೀವನ ನಡೆಸಬೇಕು. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಯೋಗ, ಪ್ರಾರ್ಥನೆ, ಧ್ಯಾನ ಮತ್ತು ಪ್ರಕೃತಿ ಚಿಕಿತ್ಸಾ ಪದ್ಧತಿಯನ್ನು ಸ್ವಯಂ ಅನುಷ್ಠಾನ ಮಾಡಿ ಆಚಾರ್ಯರಾದರು. ಪ್ರಕೃತಿ ಚಿಕಿತ್ಸಾ ವೈದ್ಯರು ಕೀಳರಿಮೆ ಹೊಂದದೆ ಅಭಿಮಾನದಿಂದ ಈ ಪದ್ಧತಿಯ ರಾಯಭಾರಿಗಳಾಗಬೇಕು ಎಂದು ಕರೆ ನೀಡಿದರು.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...