More

    ಕೃಷಿ ಕಾಯ್ದೆ ಸರ್ಕಾರ ವಾಪಸ್ ಪಡೆಯಲಿ

    ರೈತ ಸಂಘದಿಂದ ಆಗ್ರಹ

    ವಿಜಯವಾಣಿ ಸುದ್ದಿಜಾಲ ದೊಡ್ಡಬಳ್ಳಾಪುರ
    ರೈತರ ಏಳಿಗೆಗೆ ವಿರುದ್ಧವಾಗಿದ್ದ ಕೃಷಿ ಕಾಯ್ದೆಯನ್ನು ಕೇಂದ್ರ ಸರ್ಕಾರ ವಾಪಸ್ ಪಡೆದಿದೆ. ಆದರೆ, ರಾಜ್ಯ ಸರ್ಕಾರ ಮಾತ್ರ ಕೃಷಿ ಕಾಯ್ದೆಯನ್ನು ವಾಪಸ್ ಪಡೆದಿಲ್ಲ. ಶೀಘ್ರವಾಗಿ ರೈತ ವಿರೋಧಿ ಕಾಯ್ದೆಯನ್ನು ವಾಪಸ್ ಪಡೆದು, ನ್ಯಾಯ ಒದಗಿಸಬೇಕು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ ಆಗ್ರಹಿಸಿದರು.
    ನಗರದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ರೈತರು ಈ ವರ್ಷ ಉತ್ತಮ ಮಳೆ ಇಲ್ಲದೆ ಕಂಗಾಲಾಗಿದ್ದಾರೆ. ಈ ಮಧ್ಯೆ ಉತ್ತಮ ಬೆಲೆಯೂ ಸಿಗದೆ ತತ್ತರಿಸಿದ್ದಾರೆ. ಹೀಗಾಗಿ ರೈತರ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಪಡಿಸಬೇಕು. ಕಾವೇರಿ ನೀರು ವಿಷಯದಲ್ಲಿ ಕೇಂದ್ರ ಸರ್ಕಾರಕ್ಕೆ ಮತ್ತು ಸುಪ್ರೀಂಕೋರ್ಟ್‌ಗೆ ವಾಸ್ತವವನ್ನು ತಿಳಿಸುವಲ್ಲಿ ವಿಫಲವಾಗಿದೆ. ಹೀಗಾಗಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದರು.
    ಜಿಲ್ಲಾ ಕಾರ್ಯದರ್ಶಿ ಸತೀಶ್ ಮಾತನಾಡಿ, ಎಂ.ಎಸ್.ಸ್ವಾಮಿನಾಥನ್ ವರದಿಯನ್ನು ಯತಾವಥ್ತಾಗಿ ಜಾರಿ ಮಾಡುತ್ತೇವೆ ಎಂದು ಹೇಳಿ, ಅಧಿಕಾರ ಹಿಡಿದಿರುವ ಸರ್ಕಾರಗಳು ಮಾತು ಮರೆತಿವೆ. ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಯಾಗಬೇಕು. ಕೃಷಿ ಬಜೆಟ್ ಮೂಲಕ ರೈತನ ಉತ್ಪನ್ನಗಳನ್ನು ಸರ್ಕಾರವೇ ಖರೀದಿ ಮಾಡುವಂತಹ ವ್ಯವಸ್ಥೆ ಆಗಬೇಕು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts