More

    ದೊಡ್ಡಬಳ್ಳಾಪುರವೇ ಜಿಲ್ಲಾ ಕೇಂದ್ರವಾಗಬೇಕು: ಜಿಲ್ಲಾ ಕೇಂದ್ರ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನಾ ಜಾಥಾ


    ದೊಡ್ಡಬಳ್ಳಾಪುರ: ಗ್ರಾಮಾಂತರ ಜಿಲ್ಲೆಗೆ ದೊಡ್ಡಬಳ್ಳಾಪುರವನ್ನೇ ಜಿಲ್ಲಾ ಕೇಂದ್ರವಾಗಿ ಘೋಷಿಸಬೇಕು. ಈಗಾಗಲೇ ಜಿಲ್ಲಾ ಕೇಂದ್ರ ಘೋಷಣೆ ಸಂಬಂಧ ಉಸ್ತುವಾರಿ ಸಚಿವ ಸುಧಾಕರ್ ನೀಡಿರುವ ಹೇಳಿಕೆ ಹಿಂಪಡೆಯಬೇಕು ಎಂದು ಒತ್ತಾಯಿಸಿ ದೊಡ್ಡಬಳ್ಳಾಪುರ ಜಿಲ್ಲಾ ಕೇಂದ್ರ ಹೋರಾಟ ಸಮಿತಿ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.


    ನಗರದ ನೆಲದ ಆಂಜನೇಯ ಸ್ವಾಮಿ ದೇವಾಲಯದಿಂದ ಆರಂಭವಾದ ಜಾಥಾ ಪ್ರಮುಖ ರಸ್ತೆಗಳಲ್ಲಿ ಸಾಗಿ ತಾಲೂಕು ಕಚೇರಿ ವೃತ್ತದಲ್ಲಿ ಸಮಾವೇಶಗೊಂಡಿತು. ಪ್ರತಿಭಟನಾನಿರತರು ಸರ್ಕಾರ ಹಾಗೂ ಉಸ್ತುವಾರಿ ಸಚಿವರ ವಿರುದ್ಧ ಧಿಕ್ಕಾರ ಕೂಗಿದರು.


    ಆ.15ರ ಸ್ವಾತಂತ್ರೋತ್ಸವ ಭಾಷಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಜನಾಭಿಪ್ರಾಯ ಪಡೆಯದೇ ಏಕಾಏಕಿ ಜಿಲ್ಲಾ ಕೇಂದ್ರ ಘೋಷಿಸಿರುವುದು ಅವರ ಹುಂಬತನ ಹಾಗೂ ಹಣದಾಹಕ್ಕೆ ನಿದರ್ಶನವಾಗಿದೆ. ಹೇಳಿಕೆ ಹಿಂಪಡೆಯುವವರೆಗೂ ದೊಡ್ಡಬಳ್ಳಾಪುರಕ್ಕೆ ಕಾಲಿಡಲು ಬಿಡುವುದಿಲ್ಲ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು. ಅವರು ತಾಲೂಕು ಕಡೆ ಬಂದರೆ ಅವರು ಬರುವ ಕಡೆಗಳಲ್ಲಿ ಕಪ್ಪುಪಟ್ಟಿ ಪ್ರದರ್ಶನ ಮಾಡಿ ಘೇರಾವ್ ಹಾಕಲಾಗುವುದು ಎಂದು ಹೋರಾಟ ಸಮಿತಿ ಮುಖಂಡರು ಎಚ್ಚರಿಸಿದರು.

     

    ನಮ್ಮದು ನ್ಯಾಯಯುತ ಹೋರಾಟ: ದೊಡ್ಡಬಳ್ಳಾಪುರ ಜಿಲ್ಲಾ ಕೇಂದ್ರ ಮಾಡುವಂತೆ ನಮ್ಮ ನ್ಯಾಯಯುತ ಬೇಡಿಕೆ ಆಧಾರದ ಮೇಲೆ ಹೋರಾಟ ಆರಂಭಿಸಿದ್ದೇವೆ ಎಂದು ಕರವೇ ಪ್ರವೀಣ್ ಶೆಟ್ಟಿ ಬಣದ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ ಹೇಳಿದರು. ಜಿಲ್ಲಾ ಕೇಂದ್ರ ರಚನೆಗೆ ದೊಡ್ಡಬಳ್ಳಾಪುರ ಅರ್ಹವಾಗಿದೆ. ಆಗೊಮ್ಮೆ ದೇವನಹಳ್ಳಿಯನ್ನೇ ಜಿಲ್ಲಾ ಕೇಂದ್ರ ಮಾಡುವುದಾದರೆ ಆ ತಾಲೂಕಿಗೆ ಜಿಲ್ಲಾಕೇಂದ್ರವಾಗಲು ಇರುವ ಅರ್ಹತೆಗಳೇನು ಎಂಬುದನ್ನು ತಾಲೂಕಿನ ಜನತೆಗೆ ಮನದಟ್ಟು ಮಾಡಿಕೊಡಬೇಕು. ಏಕಾಏಕಿ ನಿರ್ಧಾರ ಕೈಗೊಳ್ಳಲು ನಿಮಗೆ ಯಾವುದೇ ಅಧಿಕಾರವಿಲ್ಲ ಎಂದರು ಆಕ್ರೋಶ ವ್ಯಕ್ತಪಡಿಸಿದರು.


    ಏಕಾಏಕಿ ಘೋಷಣೆ ಖಂಡನೀಯ: ಜಿಲ್ಲಾ ಉಸ್ತುವಾರಿ ಸಚಿವರು ಯಾರನ್ನೂ ಗಣನೆಗೆ ತೆಗೆದುಕೊಳ್ಳದೇ ಏಕಾಏಕಿ ತೀರ್ಮಾನ ಪ್ರಕಟಿಸಿರುವುದು ಖಂಡನೀಯ ಎಂದು ಕನ್ನಡ ಸಂಘಟನೆಗಳ ಮುಖಂಡ ಸತ್ಯನಾರಾಯಣ ಹೇಳಿದರು. ಜಿಲ್ಲಾ ಕೇಂದ್ರ ಘೋಷಣೆ ವಿಷಯದಲ್ಲಿ ಯಾವುದೇ ರಾಜಕೀಯ ಪಕ್ಷಗಳು ಗೊಂದಲ ಸೃಷ್ಟಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.


    ಅವೈಜ್ಞಾನಿಕ ಘೋಷಣೆ:
    ದೇವನಹಳ್ಳಿ ಜಿಲ್ಲಾ ಕೇಂದ್ರ ಘೋಷಣೆ ಅವೈಜ್ಞಾನಿಕವಾಗಿದೆ. ಜಿಲ್ಲಾಡಳಿತ ಭವನ ಸ್ಥಾಪನೆ ಅವಧಿಯಲ್ಲಿ ವಿಕಾಸಸೌಧದಲ್ಲಿ 8 ಸಭೆ ಮಾಡಲಾಗಿದೆ. ನಾಲ್ಕೂ ತಾಲೂಕಿನ ಮುಖಂಡರು ಸಭೆಯಲ್ಲಿ ಚರ್ಚಿಸಿ ಅಂತಿಮವಾಗಿ ಉಸ್ತುವಾರಿ ಸಚಿವರ ತೀರ್ಮಾನಕ್ಕೆ ಬಿಡಲಾಗಿತ್ತು. ದೊಡ್ಡಬಳ್ಳಾಪುರವನ್ನೇ ಜಿಲ್ಲಾ ಕೇಂದ್ರವನ್ನಾಗಿ ಘೋಷಿಸುವ ಮುನ್ಸೂಚನೆ ಇತ್ತು. ಹೀಗಿರುವಾಗ ಏಕಪಕ್ಷಿಯ ತೀರ್ಮಾನ ಕೈಗೊಂಡಿರುವುದು ಸರಿಯಲ್ಲ ಎಂದು ಶಾಸಕ ವೆಂಕಟರಮಣಯ್ಯ ಹೇಳಿದರು.

     

    ಜಿಲ್ಲಾ ಕೇಂದ್ರ ಬದಲಾವಣೆ ಇಲ್ಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರಿನಲ್ಲಿ ಯಾವುದೇ ಬದಲಾವಣೆ ಇಲ್ಲ. ದೇವನಹಳ್ಳಿಯೇ ಜಿಲ್ಲಾ ಕೇಂದ್ರವಾಗಿರುತ್ತದೆ. ಇದು ಭೌಗೋಳಿಕವಾಗಿ ಸೂಕ್ತವಾಗಿದೆ. ಇದರ ಬಗ್ಗೆ ಈ ಹಿಂದೆಯೇ ತೀರ್ಮಾನ ಕೈಗೊಂಡಿದ್ದು ಸರ್ಕಾರ ಆದೇಶ ಹೊರಡಿಸಿದೆ. ಗ್ರಾಮಾಂತರ ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಸೂಕ್ತ ಸ್ಥಾನಮಾನ ಒದಗಿಸಲಾಗುತ್ತದೆ. ಈಗಾಗಲೇ ದೇವನಹಳ್ಳಿಯಲ್ಲಿ ವೈದ್ಯಕೀಯ ಕಾಲೇಜು ಇರುವ ಕಾರಣದಿಂದ ಜಿಲ್ಲಾಸ್ಪತ್ರೆಯನ್ನು ದೊಡ್ಡಬಳ್ಳಾಪುರದಲ್ಲಿನಿರ್ಮಿಸಲು ತೀರ್ಮಾನಿಸಲಾಗಿದೆ. ಇನ್ನು ಕೇವಲ ರಾಜಕಾರಣದ ದುರುದ್ಧೇಶದಿಂದ ಹೋರಾಡಿದರೆ ಉಪಯೋಗವಿಲ್ಲ ಎಂದು ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದರು.ದೊಡ್ಡಬಳ್ಳಾಪುರವೇ ಜಿಲ್ಲಾ ಕೇಂದ್ರವಾಗಬೇಕು: ಜಿಲ್ಲಾ ಕೇಂದ್ರ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನಾ ಜಾಥಾ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts