More

    ಬದಲಾಗಲಿದೆಯೇ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ?: ಸಚಿವರ ಪ್ರತಿಕ್ರಿಯೆ ಇಲ್ಲಿದೆ..

    ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹೆಸರು ಬದಲಿಸುವ ವಿಷಯಕ್ಕೆ ಸಂಬಂಧಿಸಿದಂತೆ ಈ ಭಾಗದ ಅಭಿಪ್ರಾಯಕ್ಕೆ ಅನುಗುಣವಾಗಿಯೇ ನಿರ್ಧಾರ ತೆಗೆದುಕೊಳ್ಳಲಾಗುವುದು. ಯಾವುದೇ ಕಾರಣಕ್ಕೂ ಅಭಿಪ್ರಾಯಕ್ಕೆ ವಿರೋಧವಾಗಿ ತೆಗೆದುಕೊಳ್ಳುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಹೇಳಿದರು.

    ಜಿಲ್ಲೆಗೊಂದು ನೂತನ ವಿಶ್ವ ವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಆರು ವಿವಿ ಸ್ಥಾಪಿಸಲಾಗಿದೆ. ಇನ್ನೊಂದು ವಿವಿ ಸ್ಥಾಪಿಸಬೇಕೆಂಬ ಚರ್ಚೆಯೂ ಇದೆ. ಶಿಕ್ಷಣದಲ್ಲಿ ಗುಣಮಟ್ಟ ಇರಬೇಕು. ಆ ನಿಟ್ಟಿನಲ್ಲಿ ಹೆಜ್ಜೆಯನ್ನು ಇರಿಸಲಾಗುವುದು ಎಂದರು.

    ಅತಿಥಿ ಶಿಕ್ಷಕರು ನೇಮಕ ವಿಚಾರದಲ್ಲಿ ಬಹಳಷ್ಟು ಜನರಿಗೆ ಅನ್ಯಾಯವಾಗಿದೆ ಎಂಬ ಆರೋಪ ಇದೆಯಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಮೊದಲು 13500 ಜನ ಕೆಲಸ ಮಾಡುತ್ತಿದ್ದರು. ಈಗ 11500 ಜನ ಕೆಲಸ ಮಾಡುತ್ತಿದ್ದಾರೆ. ಸೇವೆ ಸಲ್ಲಿಸುತ್ತಿರುವವರಿಗೆ ಹೆಚ್ಚಿನ ಸಂಬಳ ‌ನೀಡಲಾಗುತ್ತಿದೆ. ಅವಕಾಶ ವಂಚಿತರಿಗೆ ಬೇರೆ ಬೇರೆ ಕಡೆ ಅವಕಾಶ ನೀಡುವ ‌ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು. ಪಠ್ಯ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಅವರು ವರದಿ ತರಿಸಿಕೊಳ್ಳುತ್ತಿದ್ದಾರೆ. ವರದಿ ಪರಿಶೀಲಿಸಿದ ಬಳಿಕ ಸಿಎಂ ಕ್ರಮ ಕೈಗೊಳ್ಳಲಿದ್ದಾರೆ ಎಂದರು.

    ವಿಧಾನ ಪರಿಷತ್ ಚುನಾವಣೆ: ಪದವೀಧರ ಹಾಗೂ ಶಿಕ್ಷಕ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳಾದ ಅರುಣ ಶಹಾಪುರ, ಹಣಮಂತ ನಿರಾಣಿ ಪರ ಪ್ರಚಾರ ಮಾಡಿ ಮತಯಾಚಿಸಲಾಗಿದೆ. ಈ ಚುನಾವಣೆ ಮೂಲಕ ಮೇಲ್ಮನೆಯಲ್ಲಿ ಬಿಜೆಪಿ ಬಹುಸಂಖ್ಯೆ ಬಲ ಹೊಂದಬೇಕು. ಉತ್ತಮ ಕಾರ್ಯಕಲಾಪ ನಡೆಸಿ ಸರ್ಕಾರದ ಕಾರ್ಯ ಉತ್ತಮವಾಗಿ ನಡೆಸಲು ಈ ಭಾಗದ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕೆಂದು ವಿನಂತಿಸಲಾಗಿದೆ.

    ಈ ಅಭ್ಯರ್ಥಿಗಳು ಉತ್ತಮ ಕಾರ್ಯ ಮಾಡಿ ಜನರ ವಿಶ್ವಾಸ ಗಳಿಸಿದ್ದಾರೆ. ಇನ್ನೂ ಉತ್ತಮವಾಗಿ ಮಾಡಲು ಮತದಾರರ ಸಂಪೂರ್ಣ ಸಹಕಾರ ಅವಶ್ಯ ಎಂದರು.
    ಪ್ರತಿಯೊಬ್ಬರೂ ಮತದಾನ ಮಾಡಬೇಕು. ಆ ಮತ ನಮ್ಮ ಪಕ್ಷದ ಅಭ್ಯರ್ಥಿಗೆ ನೀಡಬೇಕೆಂದರು. ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಬಿಜೆಪಿ ಬದ್ಧವಾಗಿದೆ. ತಂತ್ರಜ್ಞಾನ ಬಳಕೆ, ಶಿಕ್ಷಕರ ನೇಮಕ ಮುಂತಾದ ವಿಷಯಗಳಲ್ಲಿ ಪ್ರಗತಿ ಸಾಧಿಸಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಮೂಲಕ ಭಾರತ ಅಭಿವೃದ್ಧಿ ಹೊಂದಿದ ದೇಶ ಎನಿಸಿಕೊಳ್ಳಲು ಯೋಜನೆ ರೂಪಿಸಲಾಗಿದೆ ಎಂದರು.

    ಬಡವ ಬಲ್ಲಿದ ವ್ಯತ್ಯಾಸವಿಲ್ಲದೆ ಗುಣಮಟ್ಟದ ಶಿಕ್ಷಣವನ್ನು ಪ್ರತಿಯೊಬ್ಬ ನಾಗರಿಕ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಉದ್ಯೋಗ ಸಿಗುವ ನಿಟ್ಟಿನಲ್ಲಿ ಶಿಕ್ಷಣ ನೀತಿ ರೂಪಿಸಲಾಗಿದೆ ಎಂದರು. ವಿಜಯಪುರ ಜಿಲ್ಲೆಯಲ್ಲೂ ಸಮಗ್ರ ಅಭಿವೃದ್ಧಿ ಗೆ ಆದ್ಯತೆ ನೀಡಲಾಗಿದೆ. ಎಲ್ಲ‌ ಕ್ಷೇತ್ರಗಳಿಗೂ ಅನುದಾನ ನೀಡಲಾಗಿದೆ. ವಿಮಾನ ನಿಲ್ದಾಣ, ಪ್ರವಾಸೋದ್ಯಮ, ವ್ಯವಸಾಯ, ಕೈಗಾರಿಕೆ ನೀತಿ ಮೂಲಕ ಉತ್ತಮ ಭವಿಷ್ಯ ರೂಪಿಸಲಾಗುವುದು ಎಂದರು.

    ಶಾಸಕ ಸೋಮನಗೌಡ ಪಾಟೀಲ ಸಾಸನೂರ, ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಬಿಜೆಪಿ ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷ ವಿವೇಕಾನಂದ ಡಬ್ಬಿ, ಶಿವರುದ್ರ ಬಾಗಲಕೋಟ, ಮಲ್ಲಿಕಾರ್ಜುನ ಜೋಗೂರ, ಬಸವರಾಜ ಬಿರಾದಾರ ಮತ್ತಿತರರು ಇದ್ದರು.

    ಕರೊನಾ ಕುರಿತ ಹಣದಲ್ಲೂ ಪಾಲು ಕೇಳಿದ ಪಾಲಿಕೆ ಆಯುಕ್ತ ಎಸಿಬಿ ಬಲೆಗೆ; ಅಕೌಂಟೆಂಟ್​ ಕೂಡ ಬಂಧನ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts