More

  ಜೆಡಿಎಸ್ ಜಾತ್ಯತೀತವಾಗಿ ಉಳಿದಿದೆಯೇ : ಸಿದ್ದರಾಮಯ್ಯ ಪ್ರಶ್ನೆ

  ಮೈಸೂರು: ಜಾತ್ಯತೀತ ಜನತಾದಳ ಪ್ರಸ್ತುತ ಜಾತ್ಯತೀತವಾಗಿ ಉಳಿದುಕೊಂಡಿದೆಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

  ನಗರದ ವಿದ್ಯಾರಣ್ಯಪುರಂನ ಭೂತಾಳೆ ಮೈದಾನದಲ್ಲಿ ಬುಧವಾರ ಮುಡಾ ಮಾಜಿ ಅಧ್ಯಕ್ಷ ಎಚ್.ವಿ. ರಾಜೀವ್ ಬೆಂಬಲಿಗರ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನರೇಂದ್ರ ಮೋದಿ ಪ್ರಧಾನಿಯಾದರೆ ದೇಶಬಿಟ್ಟು ಹೋಗುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿಕೆ ನೀಡಿದ್ದರು. ಆದರೆ, ಇದೀಗ ಅವರು ಎನ್‌ಡಿಎ ಮೈತ್ರಿಕೂಟವನ್ನು ಸೇರಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.

  ಎನ್‌ಡಿಎ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆ ಜಾರಿಗೊಳಿಸಲಾಗುವುದು ಎಂದು ದೇವೇಗೌಡರು ಹೇಳಿಕೆ ನೀಡಿದ್ದಾರೆ. ಹಾಗಿದ್ದರೆ 10 ವರ್ಷಗಳ ಕಾಲ ಕೇಂದ್ರದಲ್ಲಿ ಎನ್‌ಡಿಎ ಅಧಿಕಾರದಲ್ಲಿದ್ದರೂ ಏತಕ್ಕೆ ಮೇಕೆದಾಟು ಯೋಜನೆ ಅನುಷ್ಠಾನಗೊಳಿಸಲಿಲ್ಲ? ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಂದಾಗಿದೆ ಎಂದು ಟೀಕಿಸಿದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts